ಲಾಕ್‌ಡೌನ್‌ ಮಧ್ಯೆ ಮುಂಗಾರು ಹಂಗಾಮಿಗೆ ರೈತ ಸಜ್ಜು

ಭೂಮಿ ಹಸನು ಕಾರ್ಯ ಆರಂಭ, ಸಾಕಷ್ಟು ಬೀಜ-ರಸಗೊಬ್ಬರ ಹಂಚಿಕೆ

Team Udayavani, May 4, 2020, 6:09 PM IST

04-May-29

ಸಾಂದರ್ಭಿಕ ಚಿತ್ರ

ಹಾವೇರಿ: ಲಾಕ್‌ಡೌನ್‌ ನಡುವೆಯೂ ಮುಂಗಾರು ಹಂಗಾಮಿಗಾಗಿ ರೈತರು ಸಜ್ಜಾಗಿದ್ದಾರೆ. ಜಿಲ್ಲೆಯ ಕೆಲವೆಡೆ ಉತ್ತಮ ಮಳೆಯಾಗಿದ್ದು ರೈತರಿಂದ ಭೂಮಿ ಹಸನು ಮಾಡಿಕೊಳ್ಳುವ ಕಾರ್ಯ ಭರದಿಂದ ಸಾಗಿದೆ.

ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿಗೆ ಒಟ್ಟಾರೆ 3,32,826 ಹೆಕ್ಟೇರ್‌ ಬಿತ್ತನೆ ಗುರಿ ಹೊಂದಲಾಗಿದೆ. ಏಕದಳ 2,07,973 ಹೆಕ್ಟೇರ್‌, ದ್ವಿದಳ 7,209 ಹೆಕ್ಟೇರ್‌, ಎಣ್ಣೆಕಾಳು 31,854 ಹೆಕ್ಟೇರ್‌, ವಾಣಿಜ್ಯ ಬೆಳೆ 85,790 ಹೆಕ್ಟೇರ್‌ ಗುರಿ ಹೊಂದಲಾಗಿದೆ. ಇದರಲ್ಲಿ ಪ್ರಮುಖವಾಗಿ ಗೋವಿನಜೋಳ 1,63,318 ಹೆಕ್ಟೇರ್‌, ಹತ್ತಿ 77,565 ಹೆಕ್ಟೇರ್‌, ಭತ್ತ 40235 ಹೆಕ್ಟೇರ್‌, ಶೇಂಗಾ 19,840 ಹೆಕ್ಟೇರ್‌ ಹಾಗೂ ಸೋಯಾ ಅವರೆ 11,360 ಹೆಕ್ಟೇರ್‌ ಪ್ರಮುಖ ಬೆಳೆಗಳಾಗಿವೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಮುಂಗಾರು ಹಂಗಾಮಿಗೆ 33650 ಕ್ವಿಂಟಾಲ್‌ ಬಿತ್ತನೆ ಬೀಜದ ಅವಶ್ಯಕತೆಯಿದೆ. ಇದರಲ್ಲಿ ಮುಖ್ಯವಾಗಿ ಹೈಬ್ರಿಡ್‌ ಗೋವಿನಜೋಳ 12000 ಕ್ವಿಂಟಾಲ್‌, ಭತ್ತ 5500 ಕ್ವಿಂಟಾಲ್‌, ಸೋಯಾ ಅವರೆ 12000 ಕ್ವಿಂಟಾಲ್‌, ತೊಗರಿ 900 ಕ್ವಿಂಟಾಲ್‌, ಹೆಸರು 400 ಕ್ವಿಂಟಾಲ್‌ ಹಾಗೂ ಶೇಂಗಾ 2700 ಕ್ವಿಂಟಾಲ್‌ ಬೀಜಗಳು ಅವಶ್ಯಕತೆಯಿದ್ದು, ಈವರೆಗೆ 610 ಕ್ವಿಂಟಾಲ್‌ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಲಾಗಿದೆ. ಬಿತ್ತನೆ ಬೀಜ ಸರಬರಾಜು ಮುಂದುವರೆದಿದೆ.

ಗೊಬ್ಬರ ದಾಸ್ತಾನು: ಮುಂಗಾರು ಹಂಗಾಮಿಗೆ ಒಟ್ಟು 1,05,858 ಟನ್‌ ರಸಗೊಬ್ಬರ ಹಂಚಿಕೆಯಾಗಿದೆ. ಇದರಲ್ಲಿ ಯೂರಿಯಾ 48200 ಟನ್‌, ಡಿ.ಎ.ಪಿ 21720 ಟನ್‌, ಎಂಒಪಿ 4478 ಟನ್‌, ಕಾಂಪ್ಲೆಕ್ಸ್‌ 29650 ಟನ್‌ ಇರುತ್ತದೆ. ಇದರಲ್ಲಿ 31616 ಟನ್‌ ಸರಬರಾಜ ಆಗಿದ್ದು, 485 ಟನ್‌ ವಿತರಣೆಯಾಗಿ, 31131 ಟನ್‌ ದಾಸ್ತಾನು ಇದೆ. ಅವಶ್ಯಕತೆಗೆ ಅನುಗುಣವಾಗಿ ರಸಗೊಬ್ಬರ ಸರಬರಾಜಿಗೆ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ.

ಜಿಲ್ಲೆಯ ಎಲ್ಲ ಕೃಷಿ ಪರಿಕರ ಮಾರಾಟಗಾರರು ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ. ಹಾಗೂ ಮಾರಾಟ ಮಾಡಿದ ಪರಿಕರಗಳಿಗೆ ಕಡ್ಡಾಯ ವಾಗಿ ರಶೀದಿಯಲ್ಲಿ ಲಾಟ್‌ ಇಲ್ಲವೇ ಬ್ಯಾಚ್‌ ಸಂಖ್ಯೆಯನ್ನು ಹಾಗೂ ನಿಗದಿಪಡಿಸಿದ ದರವನ್ನು ನಮೂದಿಸಿ ರಶೀದಿಯನ್ನು ನೀಡಲು ಸೂಚಿಸಲಾಗಿದೆ. ಯಾವುದೇ ಮಾರಾಟಗಾರರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ, ಅವಧಿ  ಮೀರಿರುವ ಪರಿಕರಗಳನ್ನು ಮಾರಾಟ ಮಾಡುವುದಾಗಲಿ, ಯಾವುದೇ ಬಿತ್ತನೆ ಬೀಜ, ರಸಗೊಬ್ಬರದ ದಾಸ್ತಾನು ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸಿದಲ್ಲಿ ರೈತರು ಕೂಡಲೇ ಸಮೀಪದ ಕೃಷಿ ಅಧಿಕಾರಿ ಅಥವಾ ಸಹಾಯಕ ಕೃಷಿ ನಿರ್ದೇಶಕರಿಗೆ ದೂರು ನೀಡಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ರೈತರು ಅಧಿಕೃತ ಪರವಾನಗಿ ಹೊಂದಿದ ಪರಿಕರ ಮಾರಾಟಗಾರರಿಂದ ಮಾತ್ರ ಬೀಜ, ರಸಗೊಬ್ಬರ ಮತ್ತು ಸಸ್ಯ ಸಂರಕ್ಷಣಾ ಔಷಧಿಗಳನ್ನು ಖರೀದಿಸಬೇಕು. ಪರಿಕರ ಖರೀದಿಸುವ ಮುನ್ನ ರೈತರು ಬೀಜ ಮತ್ತು ಕೀಟ ನಾಶಕಗಳ ಲಾಟ್‌/ಬ್ಯಾಚ್‌ ಸಂಖ್ಯೆ, ಉತ್ಪಾದನೆಯಾದ ದಿನಾಂಕ, ಅವಧಿ ಕೊನೆಗೊಳ್ಳುವ ದಿನಾಂಕ ಪರಿಶೀಲಿಸಿ ಖರೀದಿಸಬೇಕು. ರೈತರು ಯಾವುದೇ ಆಮಿಷಕ್ಕೊಳಗಾಗದೆ ಪರಿಕರಗಳ ಗುಣಮಟ್ಟ ಖಾತ್ರಿಪಡಿಸಿಕೊಂಡು ಖರೀದಿಸಬೇಕು ಎಂದು ಸಹ ಜಿಲ್ಲಾಡಳಿತ ಸಲಹೆ ನೀಡಿದ್ದಾರೆ.

ಮುಂಗಾರು ಹಂಗಾಮು ಬಿತ್ತನೆಗೆ ಬೇಕಾದ ಎಲ್ಲ ಕೃಷಿ ಅಗತ್ಯಗಳನ್ನು ಪೂರೈಸಲು ಕೃಷಿ ಇಲಾಖೆ ಸಜ್ಜಾಗಿದೆ. ಬೀಜ, ಗೊಬ್ಬರ ದಾಸ್ತಾನು
ಮಾಡಲಾಗಿದೆ. ಅಂಗಡಿಯವರಿಗೆ ಬೀಜ ರಸಗೊಬ್ಬರದ ದರಗಳನ್ನು ರೈತರಿಗೆ ಕಾಣುವಂತೆ ದಾಸ್ತಾನು ಮತ್ತು ವಿವಿಧ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ನಿಗದಿತ ದರದಲ್ಲಿ ಮಾರಾಟ ಮಾಡಲು ಸೂಚಿಸಲಾಗಿದೆ. ಮಾರಾಟ ಮಾಡಿದ ಪರಿಕರಗಳಿಗೆ ಕಡ್ಡಾಯವಾಗಿ ಬಿಲ್‌ ನೀಡಲು ಸೂಚಿಸಲಾಗಿದೆ. ಇದಕ್ಕೆ ತಪ್ಪಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು.
ಬಿ. ಮಂಜುನಾಥ,
ಜಂಟಿ ನಿರ್ದೇಶಕರು, ಕೃಷಿ ಇಲಾಖೆ

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.