ಕಸ ವಿಲೇವಾರಿ ಮಾಡಿ ಮಾದರಿಯಾದ್ರು
ಪುರಸಭೆ ಆರೋಗ್ಯ ನಿರೀಕ್ಷಕ ಮುಂಜೋಜಿ ಜನಪರ ಕಾಳಜಿ
Team Udayavani, Jun 12, 2020, 1:56 PM IST
ಹಾವೇರಿ: ನಗರ ಕಸ ವಿಲೇವಾರಿ ಮಾಡುವ ವಾಹನ ಚಾಲನೆ ಮಾಡಲು ಚಾಲಕರಿಲ್ಲದ್ದರಿಂದ ನಗರಸಭೆಯ ಪ್ರಭಾರ ಆರೋಗ್ಯ ನಿರೀಕ್ಷಕ ರಮೇಶ ಮಂಜೋಜಿ ಸ್ವತಃ ತಾವೇ ಕಸ ತುಂಬಿದ ಟ್ರ್ಯಾಕ್ಟರ್ ಚಾಲನೆ ಮಾಡಿ ಗಮನ ಸೆಳೆದಿದ್ದಾರೆ.
ಅವರು ಗುರುವಾರ ನಗರದ ಮುನ್ಸಿಪಲ್ ಎದುರಿನ ರಸ್ತೆಯಿಂದ ಕೆಎಲ್‌ಇವರೆಗೆ ಹಾಗೂ ಪಿ.ಬಿ. ರಸ್ತೆಯಲ್ಲಿ ಸಂಗ್ರಹವಾಗಿದ್ದ ಕಸವನ್ನು ಪೌರ ಕಾರ್ಮಿಕರಿಂದ ಟ್ರ್ಯಾಕ್ಟರ್ ಗೆ ತುಂಬಿಸಿಕೊಂಡು ಗೌರಾಪುರದ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಒಯ್ದು ಖಾಲಿ ಮಾಡಿದರು. ತನ್ಮೂಲಕ ಅವರು ನಗರದ ಸ್ವತ್ಛತೆ ಬಗ್ಗೆ ತಮ್ಮ ಕಾಳಜಿ ತೋರ್ಪಡಿಸಿದರು.
ನಗರಸಭೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಲ್ಲಿ ಕೆಲವರು ತುರ್ತು ಸಂದರ್ಭದಲ್ಲಿ ಕಸ ತುಂಬುವ ವಾಹನಗಳ ಚಾಲಕರಾಗಿಯೂ ಕೆಲಸ ಮಾಡುತ್ತಿದ್ದರು. ಅವರೆಲ್ಲ ನೇಮಕಾತಿಗೆ ಸಂಬಂಧಿಸಿದ ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ ಜೂ. 1 ರಿಂದಲೇ ಕೆಲಸ ಬಿಟ್ಟು ಧರಣಿ ನಡೆಸುತ್ತಿದ್ದಾರೆ. ಹೀಗಾಗಿ ಜನರಲ್ಲಿ ಕಸ ವಿಲೇವಾರಿ ಆಗುತ್ತಿಲ್ಲ ಎಂಬ ಮನೋಭಾವ ಬಾರದಿರಲಿ ಎಂಬ ಕಾರಣಕ್ಕಾಗಿ ರಮೇಶ ಮುಂಜೋಜಿ ಸ್ವತಃ ಕಸ ತುಂಬುವ ಟ್ರ್ಯಾಕ್ಟರ್ ಚಾಲನೆ ಮಾಡಿದರು.
ಕಸದ ವಾಹನ ಚಾಲನೆ ಮಾಡುತ್ತಿದ್ದ ಗುತ್ತಿಗೆ ಕಾರ್ಮಿಕರು ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು ಕೆಲಸಕ್ಕೆ ಬರುತ್ತಿಲ್ಲ. ಪ್ರತಿಭಟನೆ ಆರಂಭಿಸಿ 10 ದಿನಗಳಾಗಿದ್ದು ನಗರದಲ್ಲಿ ಕಸ ಎಲ್ಲೆಂದರಲ್ಲಿ ಬಿದ್ದಿದೆ. ಪ್ರಮುಖ ಪ್ರದೇಶದಲ್ಲಿ ಬಿದ್ದಿರುವ ಒಂದಿಷ್ಟು ಕಸವನ್ನಾದರೂ ಸಾಗಿಸಲು ಸಾರ್ವಜನಿಕರು ಒತ್ತಾಯ ಮಾಡುತ್ತಿದ್ದರು. ಆದ್ದರಿಂದ ನಾನೇ ಇಂದು ಟ್ರ್ಯಾಕ್ಟರ್ ಚಾಲನೆ ಮಾಡಿ ನಗರದ ಕಸವನ್ನು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಿದೆ. –ರಮೇಶ ಮುಂಜೋಜಿ,ಪ್ರಭಾರ ಆರೋಗ್ಯ ನಿರೀಕ್ಷಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.