ಹಾವೇರಿ “ನುಡಿ ಜಾತ್ರೆ’ಗೆ ದಿನಗಣನೆ: ಮೂರು ವೇದಿಕೆಗಳ ನಿರ್ಮಾಣ


Team Udayavani, Jan 1, 2023, 6:35 AM IST

ಹಾವೇರಿ “ನುಡಿ ಜಾತ್ರೆ’ಗೆ ದಿನಗಣನೆ: ಮೂರು ವೇದಿಕೆಗಳ ನಿರ್ಮಾಣ

ಹಾವೇರಿ: ಉತ್ತರ ಕರ್ನಾಟಕದ ಹೆಬ್ಟಾಗಿಲು, ಏಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಜ.6ರಿಂದ 8ರ ವರೆಗೆ ನಡೆಯುವ 86ನೇ “ನುಡಿ ಜಾತ್ರೆ’ಯ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಸಾಹಿತ್ಯ ಸಮ್ಮೇಳನದ ವೇದಿಕೆ, ರಸ್ತೆಗಳ ದುರಸ್ತಿ, ನಗರ ಸುಂದರಗೊಳಿಸುವ ಕಾರ್ಯಗಳು ಭರದಿಂದ ಸಾಗಿವೆ.

ಹಿರಿಯ ಸಾಹಿತಿ ಡಾ| ದೊಡ್ಡ ರಂಗೇಗೌಡರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಇನ್ನು ಐದು ದಿನಗಳಷ್ಟೇ ಉಳಿದಿವೆ. ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ಬಳಿ ಅಜ್ಜಯ್ಯನ ಗದ್ದುಗೆ ಎದುರಿನ ನೂರಾರು ಎಕರೆ ವಿಶಾಲ ಜಾಗದಲ್ಲಿ ಬೃಹತ್‌ ವೇದಿಕೆ ನಿರ್ಮಾಣವಾಗುತ್ತಿದೆ. ಮುಖ್ಯ ವೇದಿಕೆ, ಎರಡು ಸಮಾನಾಂತರ ವೇದಿಕೆ, ಪುಸ್ತಕ ಮಳಿಗೆ, ವಾಣಿಜ್ಯ ಮಳಿಗೆ ನಿರ್ಮಾಣವಾಗುತ್ತಿದೆ. ಜರ್ಮನ್‌ ತಂತ್ರಜ್ಞಾನದಲ್ಲಿ ವೇದಿಕೆ ನಿರ್ಮಾಣವಾಗುತ್ತಿದೆ. ಮುಖ್ಯ ವೇದಿಕೆ, ಎರಡು ಸಮಾನಾಂತರ ವೇದಿಕೆಗಳ ನಿರ್ಮಾಣ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ.

ರಸ್ತೆಗಳ ದುರಸ್ತಿ ಕಾರ್ಯ

ಸಾಹಿತ್ಯ ಸಮ್ಮೇಳನಕ್ಕೆ ಲಕ್ಷಾಂತರ ಜನ ಸೇರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯ ಭರದಿಂದ ನಡೆದಿದೆ.

ನಗರದ ರಸ್ತೆಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ಸಮ್ಮೇಳನಾಧ್ಯಕÒ‌ರ ಮೆರವಣಿಗೆ ಸಾಗಿ ಬರುವ ಎಂ.ಜಿ. ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.
ನಗರ ಅಲಂಕಾರ

ಮೆರವಣಿಗೆ ಸಾಗುವ ಹಾದಿಯುದ್ದಕ್ಕೂ ಗೋಡೆಗಳ ಮೇಲೆ ಚಿತ್ರ ಬಿಡಿಸುವ ಕಾರ್ಯ ನಡೆಯುತ್ತಿದೆ. ಶಾಲಾ, ಕಾಲೇಜು, ಸರಕಾರಿ ಕಟ್ಟಡಗಳ ಆವರಣ ಗೋಡೆಗಳ ಮೇಲೆ ಆಕರ್ಷಕ ವರ್ಲಿ ಚಿತ್ರಗಳು ಕಂಗೊಳಿಸುತ್ತಿವೆ.

ಆಕರ್ಷಕ ವರ್ಲಿ ಚಿತ್ರಗಳು
ಪೊಲೀಸ್‌ ಠಾಣೆಯ ಗೋಡೆ ಮೇಲೆ ಬಿಡಿಸಿರುವ ಪೌರಾಣಿಕ ಹಿನ್ನೆಲೆ ಯುಳ್ಳ ಹಾಗೂ ಜನಪದ ಜೀವನ ಶೈಲಿಯ ಚಿತ್ರಗಳಾದ ಸುಗ್ಗಿಯ ದಿನಗಳು, ರೈತರು ಹಾಗೂ ಆಲಂಕಾರಿಕ ಬಳ್ಳಿಗಳು, ಮದುವೆ ದಿಬ್ಬಣ, ಸಾಲು ರಹಿತ ದಸರಾ ಆನೆಗಳು, ರಂಗೋಲಿ ಚಿತ್ರ, ತೋರಣ, ಪ್ರಾಣಿ, ಪಕ್ಷಿ, ನವಿಲು, ಒಂಟಿ, ಮೊಲ, ಜಿಂಕೆ, ಸ್ವಾಗತ ಬೋರ್ಡ್‌ಗಳು ಸಹಿತ ವಿವಿಧ ರೀತಿಯ ವರ್ಲಿ ಚಿತ್ರಗಳನ್ನು ಬಿಡಿಸಲಾಗುತಿದೆ.

ಮೂರು ವೇದಿಕೆಗಳ ನಿರ್ಮಾಣ
ಸಮ್ಮೇಳನಕ್ಕಾಗಿ ಒಂದು ಪ್ರಧಾನ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ. ಮೊದಲ ವೇದಿಕೆಯಲ್ಲಿ 30 ಸಾವಿರ ಜನರು ಹಾಗೂ ಉಳಿದ ವೇದಿಕೆಯಲ್ಲಿ ತಲಾ 2,500 ಆಸನಗಳ ವ್ಯವಸ್ಥೆ ಮಾಡಲಾಗಿದೆ. 600 ಮಳಿಗೆಗಳನ್ನು ಹಾಕಲಾಗಿದೆ. ಜಿಲ್ಲೆಗೊಂದರಂತೆ 30 ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. 10 ಸಾವಿರ ಪ್ರತಿನಿ ಧಿಗಳ ನೋಂದಣಿಯಾಗಿದೆ. ಎಲ್ಲರಿಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಗಣ್ಯರಿಗೆ, ಮಾಧ್ಯಮದವರಿಗೆ ಪ್ರತ್ಯೇಕ ಊಟದ ವ್ಯವಸ್ಥೆ, ಮಾರ್ಗವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಧಿಕಾರಿ ರಘುನಂದ ಮೂರ್ತಿ ತಿಳಿಸಿದರು.

ಸಮ್ಮೇಳನ ವೇದಿಕೆ ನಿರ್ಮಾಣದ ಕಾರ್ಯ ಭರದಿಂದ ಸಾಗಿದೆ. ಇನ್ನೆರಡು ದಿನಗಳಲ್ಲಿ ವೇದಿಕೆ ಸಂಪೂರ್ಣವಾಗಿ ಸಿದ್ಧಗೊಳ್ಳಲಿದೆ. ಕನ್ನಡದ ಅಸ್ಮಿತೆಯನ್ನು ಬೆಳಗಿಸುವ ನಿಟ್ಟಿನಲ್ಲಿ ಹಾವೇರಿಯಲ್ಲಿ ನಡೆಯುವ 86ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 86 ಕನ್ನಡ ಸಾಧಕರಿಗೆ ಸಮ್ಮಾನ ಆಯೋಜಿಸಲಾಗಿದೆ. “ಸಾಮರಸ್ಯದ ಭಾವ ಕನ್ನಡದ ಜೀವ’ ಎಂಬ ವಿಷಯದ ಮೇಲೆ ಮೊದಲ ವೇದಿಕೆಯಲ್ಲಿ ಮೊದಲ ಗೋಷ್ಠಿ ಆರಂಭಗೊಳ್ಳಲಿದೆ. 37 ವಿಚಾರಗೋಷ್ಠಿಗಳನ್ನು ಆಯೋ ಜಿಸಲಾಗಿದೆ. ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
-ಡಾ| ಮಹೇಶ ಜೋಷಿ, ಕಸಾಪ ಅಧ್ಯಕ್ಷ

– ವೀರೇಶ ಮಡ್ಲುರಾ

ಟಾಪ್ ನ್ಯೂಸ್

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.