ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
ಪ್ರಧಾನಿ ನರೇಂದ್ರ ಮೋದಿ ದೊಡ್ಡ ಕೆಲಸ ಮಾಡುತ್ತಿದ್ದಾರೆ
Team Udayavani, Nov 8, 2024, 4:25 PM IST
ಉದಯವಾಣಿ ಸಮಾಚಾರ
ಹಾವೇರಿ/ಶಿಗ್ಗಾವಿ: ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವ ಸಿಎಂ ಸಿದ್ದರಾಮಯ್ಯಗೆ ತಾನು ತಪ್ಪು ಮಾಡಿದ್ದೇನೆ ಎಂಬ ಭಾವನೆಯೇ ಇಲ್ಲವಾಗಿದ್ದು, ಇಂತಹ ಕ್ಕಿಷ್ಟಕರ ಪರಿಸ್ಥಿತಿಗೆ ತಾನೇ ಕಾರಣ ಎಂಬ ಮನವರಿಕೆಯೂ ಇಲ್ಲ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಶಿಗ್ಗಾವಿ ಉಪಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ವಿವಿಧ ಮಠಗಳಿಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಇತಿಹಾಸದಲ್ಲಿ ಸಿಎಂ ಕಾನೂನಿನ ವಿಚಾರಣೆ ನಡೆಸಿಲ್ಲ. ತಮ್ಮ ತಪ್ಪೇನೆಂಬುದು ಅವರಿಗೆ ಅರಿವೇ ಆಗಿಲ್ಲ. ಹೀಗಾಗಿ ಸಿದ್ದರಾಮಯ್ಯ ಒಬ್ಬ ಪಂಜರದ ಗಿಳಿ ಎಂದು ಹೇಳಿರುವುದಾಗಿ ಸೋಮಣ್ಣ ತಮ್ಮ ಹೇಳಿಕೆ ಸಮರ್ಥಿಸಿಕೊಂಡರು.
ಬಿಜೆಪಿ ನಾಯಕರು ಬೇಲ್ ಮೇಲಿದ್ದಾರೆ ಎಂಬ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸಿಎಂಗೆ ಆತ್ಮಸಾಕ್ಷಿ ಇರುವುದೇ ಆಗಿದ್ದರೆ ಸರಿಯಾದ ರಾಜಕಾರಣಿಯಾಗಿದ್ದಲ್ಲಿ ತಾನು ಮಾಡಿದ ಪಾಪದ ಕೆಲಸ ಏನು ಎಂದು ಹೇಳಲೀ? ಸಿದ್ದರಾಮಯ್ಯ ಮಾಡಿದ ಪಾಪದ ಕೆಲಸಕ್ಕೆ ನಾವು ಹೊಣೆಯೇ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ , ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಲ್ ಮೇಲೆ ಇದ್ದಾರೆ. ಅದರಂತೆಯೇ ಈಗ ಸಿದ್ದರಾಮಯ್ಯಗೆ ಆಗುತ್ತಿದೆ ಎಂದು ಹೇಳಿದರು. ಮುಸಲ್ಮಾನರ ಓಲೈಕೆ ಕೆಲಸ ಇಲ್ಲಿಯ ತನಕ ನಿಂತಿಲ್ಲ. ಇದಕ್ಕೆ ಅಂಕಿತ ಹಾಡೋದಕ್ಕೆ, ಪ್ರಧಾನಿ ನರೇಂದ್ರ ಮೋದಿ ದೊಡ್ಡ ಕೆಲಸ ಮಾಡುತ್ತಿದ್ದಾರೆ. ಇನ್ನೂ ಒಂದು ತಿಂಗಳಲ್ಲಿ ಇವೆಲ್ಲದಕ್ಕೂ ಸುಖಾಂತ್ಯ
ಸಿಗಲಿದೆ. ಕೇಂದ್ರದಲ್ಲಿ ಈ ಸಂಬಂಧ ಬಿಲ್ ಜಾರಿಯಾಗಲಿದೆ.
ಲಕ್ಷಾಂತರ ಜನಕ್ಕೆ ಇದರಿಂದ ಅನುಕೂಲವಾಗಲಿದೆ. ವಕ್ಫ್ ಆಸ್ತಿ ವಿವಾದ ಬಿಜೆಪಿ ಆಹಾರವನ್ನಾಗಿ ಮಾಡಿಕೊಂಡಿಲ್ಲ. ಈ ಪಾಪದ ಕೆಲಸಕ್ಕೆ ಸಿದ್ದರಾಮಯ್ಯನೇ ಹೊಣೆಯಾಗಿದ್ದು, ಇದನ್ನು ಇದ್ದಕ್ಕಿದ್ದ ಹಾಗೇ ಸೃಷ್ಟಿ ಮಾಡಿದ್ದೂ ಅವರೇ ಆಗಿದ್ದಾರೆ ಎಂದರು.
ಹುಬ್ಬಳ್ಳಿಯಲ್ಲಿ ತಮಗೆ ಜಮೀರ್ ಅಹ್ಮದ್ ಸಿಕ್ಕಿದ್ದರು. ಆಗ ಅವರಿಗೆ ವಿಜಯಪುರಕ್ಕೆ ಹೋಗಿ ಜನರ ನೆಮ್ಮದಿ ಹಾಳು ಮಾಡಿದ್ದೀಯಾ, ಜನ ನಿನಗೆ ಬುದ್ಧಿ ಕಲಿಸುತ್ತಾರೆ ಎಂದು ಹೇಳಿರುವುದಾಗಿ ತಿಳಿಸಿದರು. ತನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು ಎಂದು ಡಿ.ಕೆ. ಶಿವಕುಮಾರ್ ಸಂಸದ ತೇಜಸ್ವಿ ಸೂರ್ಯಗೆ ಹೇಳಿರುವ ವಿಚಾರವಾಗಿ, ಯಾರು ಈ ರೀತಿ ಮಾತನಾಡುತ್ತಾರೆಯೋ ಅದು ಅವರ ವ್ಯಕ್ತಿತ್ವ ತೋರಿಸುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.