Haveri: ಬಿಸಿಲ ಝಳಕ್ಕೆ ಬಾಡಿದ ಪೈರು: ರೈತ ಕಂಗಾಲು

Team Udayavani, Dec 29, 2023, 5:42 PM IST

Haveri: ಬಿಸಿಲ ಝಳಕ್ಕೆ ಬಾಡಿದ ಪೈರು: ರೈತ ಕಂಗಾಲು

ಹಾವೇರಿ: ಮುಂಗಾರು ಮಳೆ ವೈಫಲ್ಯದಿಂದ ಕಂಗೆಟ್ಟಿರುವ ಅನ್ನದಾತರಿಗೆ ಹಿಂಗಾರು ಮಳೆಯೂ ಕೈಕೊಟ್ಟಿದೆ. ಹಿಂಗಾರು ಮಳೆಯ ಹಿನ್ನಡೆಯಿಂದಾಗಿ ಬಿತ್ತನೆಗೆ ಹೊಡೆತ ಬಿದ್ದಿದೆ. ಈವರೆಗೆ ಕೇವಲ ಶೇ.58ರಷ್ಟು ಬಿತ್ತನೆಯಾಗಿದ್ದು, ಮಳೆ ಮಾಯವಾದ ಪರಿಣಾಮ ಬೆಳೆಯುತ್ತಿರುವ ಪೈರು ಬಿಸಿಲಿಗೆ ಬಾಡುತ್ತಿರುವುದರಿಂದ ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯಲ್ಲಿ ನವೆಂಬರ್‌ ಮೊದಲ ವಾರ ಆಗಾಗ ಸುರಿದ ಮಳೆಗೆ ಕೆಲ ರೈತರು ತಕ್ಕಮಟ್ಟಿಗೆ ಜೋಳ, ಮೆಕ್ಕೆಜೋಳ, ಹುರುಳಿ, ಅಲಸಂದಿ ಸೇರಿದಂತೆ ಇತರೆ ಬೀಜಗಳನ್ನು ಬಿತ್ತನೆ ಮಾಡಿದ್ದರು. ಮೊಳಕೆಯೊಡೆದು ಬೆಳೆಯುತ್ತಿದ್ದ ಪೈರಿಗೆ ಮಳೆ ಅವಶ್ಯಕವಾಗಿದೆ. ಈಗ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ಬಾಡುತ್ತಿದ್ದು, ಹಿಂಗಾರಿನಲ್ಲಿ ಬಿತ್ತನೆ ಮಾಡಿರುವ ಬೀಜಗಳು ಮಣ್ಣು ಪಾಲಾಗುವ ಆತಂಕ ಎದುರಾಗಿದೆ.

ಜಿಲ್ಲೆಯಲ್ಲಿ ಶೇ.58 ಬಿತ್ತನೆ: ಹಿಂಗಾರು ಹಂಗಾಮಿನಲ್ಲಿ ಒಟ್ಟಾರೆ 1.11 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಹೊಂದಿದ್ದು, ಈವರೆಗೆ 64,809 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಜಿಲ್ಲೆಯಲ್ಲಿ 50 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿಳಿಜೋಳ ಬಿತ್ತನೆ ಗುರಿ ಹೊಂದಿದ್ದು, ಈವರೆಗೆ ಕೇವಲ 26 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಇದರ ಜೊತೆಗೆ 16 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದೆ. 2691 ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ, 1844 ಹೆಕ್ಟೇರ್‌ ಪ್ರದೇಶದಲ್ಲಿ ಅಲಸಂದಿ, 368 ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು, 371 ಹೆಕ್ಟೇರ್‌ ಪ್ರದೇಶದಲ್ಲಿ ಸೂರ್ಯಕಾಂತಿ ಬಿತ್ತನೆ ಮಾಡಲಾಗಿದೆ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಮಳೆ ಬಾರದೆ ಕೈಕೊಟ್ಟಿದ್ದರಿಂದ ಬಿತ್ತನೆ ಪ್ರಮಾಣ ಕುಂಟಿತಗೊಂಡಿದೆ. ಅಲ್ಲದೇ, ಬಿತ್ತನೆ ಮಾಡಿದ ಬಹುತೇಕ ಬೆಳೆಗಳು ಸಹ ನಾಶಗೊಳ್ಳುತ್ತಿವೆ.

ಮುಂಗಾರು ಹಂಗಾಮಿನಲ್ಲಿ ಎದುರಾಗಿದ್ದ ಸ್ಥಿತಿಯೇ ಹಿಂಗಾರು ಹಂಗಾಮಿನಲ್ಲೂ ಎದುರಾಗಿದ್ದು ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿರುವುದನ್ನು ನೋಡಿ ರೈತರು ಕಣ್ಣೀರಿಡುತ್ತಿದ್ದಾರೆ.

ಬಿಸಿಲಿಗೆ ಬಾಡುತ್ತಿದೆ ಬೆಳೆ:ನವೆಂಬರ್‌ನಲ್ಲಿ ಸುರಿದ ಮಳೆಗೆ ಬಿತ್ತನೆ ಮಾಡಿದ್ದ ಜೋಳ, ಹುರುಳಿ, ಕಡಲೆ ಸೇರಿದಂತೆ ಇತರೆ ಬೀಜಗಳು ಮೊಳಕೆಯೊಡೆದು ಗೇಣೇತ್ತರಕ್ಕೆ ಬೆಳೆದು ನಿಂತಿವೆ.

ಮಳೆ ಬಾರದ್ದರಿಂದ ತೇವಾಂಶ ಕೊರತೆ ಹಾಗೂ ನಿರೀಕ್ಷಿತ ಪ್ರಮಾಣದಲ್ಲಿ ಚಳಿ ಬೀಳದ ಕಾರಣ ಬಿಸಿಲಿಗೆ ಬಾಡುತ್ತಿವೆ. ಇದರಿಂದ ಇಳುವರಿ ಬರುವುದಿರಲಿ ಜಾನುವಾರುಗಳಿಗೆ ಮೇವು ಸಹ  ಆಗುತ್ತಿಲ್ಲ ಎಂಬ ನೋವು ಅನ್ನದಾತರದ್ದಾಗಿದೆ. ಮಳೆ ಸಮರ್ಪಕವಾಗಿದ್ದರೆ ಜೋಳದ ಮೇವು, ಶೇಂಗಾ, ಕಡಲೆ, ಹುರುಳಿ, ಗೋಧಿ ಹೊಟ್ಟನ್ನು ಸಂಗ್ರಹಿಸಿ ರೈತರು ವರ್ಷಪೂರ್ತಿ ದನಕರುಗಳಿಗೆ ಆಹಾರದ ಕೊರತೆ ಬರದಂತೆ ನೋಡಿಕೊಳ್ಳುತ್ತಿದ್ದರು. ಆದರೆ, ಈ ವರ್ಷ ಮೇವಿನ ಕೊರತೆ ಎದುರಾಗಲಿದೆ ಎನ್ನುತ್ತಾರೆ ರೈತ ಕಿರಣಕುಮಾರ ಗಡಿಗೋಳ.

ನೀರಾವರಿ ಪ್ರದೇಶದಲ್ಲೂ ಬಿತ್ತನೆ ಕುಂಟಿತ: ನೀರಾವರಿ ಸೌಲಭ್ಯ ಹೊಂದಿರುವ ರೈತರು ಹಿಂಗಾರಿನಲ್ಲಿ ಅಷ್ಟಾಗಿ ಬಿತ್ತನೆ ಮಾಡಲು ಮನಸ್ಸು ಮಾಡುತ್ತಿಲ್ಲ. ಒಂದೆಡೆ ವಿದ್ಯುತ್‌ ಕಣ್ಣಾಮುಚ್ಚಾಲೆ ಶುರುವಾಗಿದ್ದರೆ, ಮತ್ತೂಂದೆಡೆ ಕೊಳವೆಬಾವಿಗಳಲ್ಲಿ ಈಗಾಗಲೇ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಕೆಲ ಬೋರ್‌ವೆಲ್‌ಗ‌ಳು ಈಗಾಗಲೇ ಬತ್ತಿ ಹೋಗಿದ್ದರೆ, ಕೆಲ ಬೋರ್‌ವೆಲ್‌ಗ‌ಳಲ್ಲಿ ಸಣ್ಣಗೆ ನೀರು ಬರುತ್ತಿವೆ. ಹೀಗಾಗಿ, ನೀರಾವರಿ ಸೌಲಭ್ಯ ಇರುವ ರೈತರು ಬಿತ್ತನೆಗೆ ಹಿಂದೇಟು ಹಾಕುವಂತಾಗಿದೆ.

ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಸುಮಾರು 1 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, ಮಳೆ
ಕೊರತೆಯಿಂದಾಗಿ ಈವರೆಗೆ ಶೇ.58ರಷ್ಟು ಬಿತ್ತನೆಯಾಗಿದೆ. ನೀರಾವರಿ ಸೌಲಭ್ಯ ಹೊಂದಿರುವ ರೈತರು ಬಿತ್ತನೆ ಕಾರ್ಯ
ನಡೆಸುತ್ತಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆಗೆ ಅಗತ್ಯ ಬೀಜ ದಾಸ್ತಾನಿದೆ.
*ಮಂಜುನಾಥ ಅಂತರವಳ್ಳಿ
ಜಂಟಿ ಕೃಷಿ ನಿರ್ದೇಶಕರು, ಹಾವೇರಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.