ವಿದ್ಯೆ ಕಲಿಸುವ ಗುರು ತಂದೆ-ತಾಯಿಗಿಂತ ಮಿಗಿಲು
Team Udayavani, Sep 6, 2018, 3:38 PM IST
ಹಾವೇರಿ: ಬದುಕು ರೂಪಿಸಲು ಬೇಕಾದ ವಿದ್ಯೆ ಕಲಿಸಿಕೊಡುವ ಗುರು, ತಂದೆ-ತಾಯಿಗಿಂತ ಮಿಗಿಲು. ಶಿಕ್ಷಕರೇ ನಿಜವಾದ ದೇವರು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ಖಾನ್ ಹೇಳಿದರು. ಬುಧವಾರ ನಗರದ ಜಿಲ್ಲಾ ಗುರುಭವನದಲ್ಲಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಆಶ್ರಯದಲ್ಲಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ರವರ 130ನೇ ಜನ್ಮ ದಿನೋತ್ಸವದ ಅಂಗವಾಗಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ದೇವರಿಗೆ ಸಮಾನರು. ನಾವು ಎಷ್ಟೇ ಉನ್ನತ ಹುದ್ದೆ ಹೊಂದಿದರೂ ಅದಕ್ಕೆ ಕಾರಣ ಶಿಕ್ಷಕರು. ಶಿಕ್ಷಕರನ್ನು ಎಲ್ಲರೂ ಗೌರವಿಸಬೇಕು. ಸಮಾಜದಲ್ಲಿ ರೈತರು ಎಷ್ಟು ಮುಖ್ಯವೋ ಶಿಕ್ಷಕರು ಅಷ್ಟೇ ಮುಖ್ಯವಾಗಿದ್ದಾರೆ. ಶಿಕ್ಷಣವಿಲ್ಲವೆಂದರೆ ಏನನ್ನೂ ಉಳಿಹಿಸಿಕೊಳ್ಳಲು ಸಾಧ್ಯವಿಲ್ಲ. ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು. ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕ ವೃತ್ತಿಯನ್ನು ಅಪಾರವಾಗಿ ಗೌರವಿಸುತ್ತಿದ್ದರು. ಹೀಗಾಗಿ ಅವರ ಜನ್ಮ ದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಬೇಕು ಎಂದು ಹೇಳುವ ಮೂಲಕ ಶಿಕ್ಷಕ ವೃತ್ತಿಗೆ ಮೆರಗು ನೀಡಿದ್ದಾರೆ. ವಿಶೇಷವಾಗಿ ಅವರು ಮೈಸೂರು ಮಹಾರಾಜಾ ಕಾಲೇಜಿನಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು ನಮ್ಮೆಲ್ಲರಿಗೂ ಅಭಿಮಾನದ ಸಂಗತಿ ಎಂದ ಅವರು, ಶಿಕ್ಷಕರ ಸಮಸ್ಯೆ ನನ್ನ ಸಮಸ್ಯೆ. ಬೇಡಿಕೆಗಳಿಗೆ ನಾನು ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ನೆಹರು ಓಲೇಕಾರ ಮಾತನಾಡಿ, ರಾಧಾಕೃಷ್ಣನ್ ಅವರು ತಮ್ಮ ಶಿಕ್ಷಕ ವೃತ್ತಿಯ ಸೇವೆಯಿಂದ ಅಪಾರ ಗೌರವ ಸಂಪಾದಿಸಿದ್ದರು. ಶಿಕ್ಷಕರ ಜವಾಬ್ದಾರಿ ಬಹಳ ಮಹತ್ವದ್ದಾಗಿದೆ. ಡಾಕ್ಟರ್, ಇಂಜಿನೀಯರ್, ವಿಜ್ಞಾನಿ, ಅಧಿಕಾರಿಗಳು ಹಾಗೂ ನಾಯಕರನ್ನು ನಿರ್ಮಾಣ ಮಾಡುವ ಕುಶಲಕರ್ಮಿ ಎಂದರೆ ಅವರು ಶಿಕ್ಷಕರು ಮಾತ್ರ. ಈ ಎಲ್ಲ ಪದವಿ ಹೊಂದಲೂ ಶಿಕ್ಷಕರೇ ಕಾರಣ. ನಮ್ಮಲ್ಲಿ ಅತ್ಯುತ್ತಮ ಶಿಕ್ಷಕರಿದ್ದಾರೆ. ನಿಸ್ವಾರ್ಥತೆಯಿಂದ ದುಡಿಯುವ ಶಿಕ್ಷಕರಿದ್ದಾರೆ. ಉತ್ತಮ ಶಿಕ್ಷಕರಿಗೆ ಪ್ರೋತ್ಸಾಹಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಜಿಪಂ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ ಮಾತನಾಡಿ, ಜಿಲ್ಲೆಯ ಶಿಕ್ಷಣದ ಗುಣಮಟ್ಟದ ಕುರಿತು ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಕಳೆದ ಸಾಲಿನ ಎಸ್ ಎಸ್‌ಎಲ್‌ಸಿ ಫಲಿತಾಂಶ ರಾಜ್ಯಕ್ಕೆ 27ನೇ ಸ್ಥಾನದಲ್ಲಿತ್ತು. ಈ ವರ್ಷ 22 ನೇ ಸ್ಥಾನದಲ್ಲಿದೆ. ಶಿಕ್ಷಕರಿಗೆ ಪ್ರತಿ ತಿಂಗಳು 5ನೇ ತಾರೀಕಿನೊಳಗೆ ಸಂಬಳ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ| ಎಂ.ವಿ.ವೆಂಕಟೇಶ್ ಮಾತನಾಡಿ, ಶಿಕ್ಷಕನಿಲ್ಲದ ಶಿಕ್ಷಣ ಸಫಲವಾಗದು. ವಿದ್ಯಾರ್ಥಿಗಳಿಗೆ ಒಳ್ಳೆಯ ಮಾರ್ಗದರ್ಶನ ನೀಡಿ, ಮಾನವೀಯ ಮೌಲ್ಯಗಳನ್ನು ಬಿತ್ತುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣ ಬಹಳ ಮುಖ್ಯವಾಗಿದೆ.
ನಮ್ಮ ಪರಂಪರೆ ಶಿಕ್ಷಕರಿಗೆ ದೈವತ್ವ ಸ್ಥಾನ ನೀಡಿದೆ. ದೇಶದ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಪ್ರಾಸ್ತಾವಿಕ ಮಾತನಾಡಿದರು. ಸಮಾರಂಭದಲ್ಲಿ ವಿಪ ಸದಸ್ಯ ಶ್ರೀನಿವಾಸ ಮಾನೆ, ಜಿಪಂ ಉಪಾಧ್ಯಕ್ಷೆ ದೀಪಾ ಅತ್ತಿಗೇರಿ, ತಾಲೂಕು ಪಂಚಾಯತ್ ಅಧ್ಯಕ್ಷ ಕರಿಯಪ್ಪ ಮಲ್ಲಪ್ಪ ಉಂಡಿ, ತಾಪಂ ಉಪಾಧ್ಯಕ್ಷೆ ಕಮಲವ್ವ ಪಾಟೀಲ, ಜಿಪಂ ಸದಸ್ಯರಾದ ಸಿದ್ದರಾಜ ಕಲಕೋಟಿ, ಅಬ್ದುಲ್ ಮುನಾಫ್ ಎಲಿಗಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ನಾಗ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಣ್ಣ, ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಇದ್ದರು.
ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ
ಜಿಲ್ಲಾ ಮತ್ತು ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರನ್ನು ಸಚಿವರು, ಶಾಸಕರು ಸನ್ಮಾನಿಸಿ ಪ್ರಶಸ್ತಿಪತ್ರಗಳನ್ನು ವಿತರಿಸಿದರು. ಎಸ್‌ಎಸ್ ಎಲ್‌ಸಿಯಲ್ಲಿ ಅ ಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಸಚಿವರು, ವೈಯಕ್ತಿಕವಾಗಿ ಆರು ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ಹಾಗೂ ಸಚಿನ್ ಹೊಳಲ ಎಂಬ ಎಸ್‌ಎಸ್‌ಎಲ್‌ಸಿ ಟಾಪರ್ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ ಲಕ್ಷ ರೂ. ಪ್ರೋತ್ಸಾಹಧನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.