ಸ್ಥಳೀಯ ಸಂಸ್ಥೆ ಸಾರಥಿಗಳಿಗೆ ತ್ರಿಶಂಕು ಸ್ಥಿತಿ
ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪಟ್ಟಿಗೆ ಹೈಕೋರ್ಟ್ ಬ್ರೇಕ್
Team Udayavani, Nov 21, 2020, 5:34 PM IST
ಹಾವೇರಿ: ರಾಜ್ಯ ಸರ್ಕಾರ ನಿಗದಿಗೊಳಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಜಿಲ್ಲೆಯ 8 ನಗರ ಸ್ಥಳೀಯ ಸಂಸ್ಥೆಗಳಿಗೆ ಇತ್ತೀಚೆಗೆ ಆಯ್ಕೆಯಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷರು ಮತ್ತೆ ತ್ರಿಶಂಕು ಸ್ಥಿತಿ ಎದುರಿಸುವಂತಾಗಿದೆ.
ಜಿಲ್ಲೆಯ 8 ನಗರ ಸ್ಥಳೀಯ ಸಂಸ್ಥೆಗಳಿಗೆ ಸದಸ್ಯರು ಆಯ್ಕೆಯಾಗಿ ಎರಡು ವರ್ಷ ಕಳೆದಿದ್ದರೂ ಅಧಿಕಾರ ಭಾಗ್ಯ ದೊರಕಿರಲಿಲ್ಲ. ಕೊನೆಗೂ ಅ.8ರಂದು ರಾಜ್ಯ ಸರ್ಕಾರ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಅಂತಿಮಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ಈ ಮೀಸಲಾತಿಯನ್ನು ಪ್ರಶ್ನಿಸಿ ಹಲವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠ ಮೀಸಲಾತಿ ನಿಗದಿಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಗೊಳಿಸಿದೆ. ಅಲ್ಲದೇ, ಈಗಾಗಲೇ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ತಾತ್ಕಾಲಿಕ ಅಮಾನತು ಮಾಡಿದೆ. ಹೀಗಾಗಿ, ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸಂಭ್ರಮಿಸಿದ್ದ ಪ್ರಥಮ ಪ್ರಜೆಗಳಿಗೆ ಈಗ ಮತ್ತೆ ನಿರಾಸೆ ಉಂಟಾಗಿದೆ.
8 ಸ್ಥಳೀಯ ಸಂಸ್ಥೆಗೆ ಚುನಾವಣೆ: ಹಾವೇರಿ ಹಾಗೂರಾಣಿಬೆನ್ನೂರು ನಗರಸಭೆ, ಶಿಗ್ಗಾವಿ, ಹಾನಗಲ್ಲ, ಸವಣೂರು, ಬ್ಯಾಡಗಿ ಪುರಸಭೆ, ಹಿರೇಕೆರೂರು, ಗುತ್ತಲ ಪಟ್ಟಣ ಪಂಚಾಯಿತಿಗಳಿಗೆ ಕಳೆದ ತಿಂಗಳ 31 ರಿಂದ ಈ ತಿಂಗಳ 10ರವರೆಗೆ ವಿವಿಧ ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಕೆಲವು ಕಡೆ ಕಾಂಗ್ರೆಸ್ ಮತ್ತೆ ಕೆಲವು ಕಡೆ ಬಿಜೆಪಿ ಅಧಿಕಾರದ ಗದ್ದುಗೆ ಏರಿದ್ದವು.
ಹಾವೇರಿ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದವರ್ಗ ಅ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ಅಧಿಕಾರ ಹಿಡಿಯಲು ದೊಡ್ಡ ಕಸರತ್ತನ್ನೇ ನಡೆಸಿದ್ದವು. ಕೊನೆಗೆ ಪಕ್ಷೇತರರ ಬೆಂಬಲದೊಂದಿಗೆ ಕಾಂಗ್ರೆಸ್‌ನ ಸಂಜೀವಕುಮಾರ ನೀರಲಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಉಪಾಧ್ಯಕ್ಷ ಸ್ಥಾನವೂ ಕಾಂಗ್ರೆಸ್ ಗೆ ಒಲಿದಿತ್ತು.
ರಾಣೆಬೆನ್ನೂರು ನಗರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿ ಬಹುಮತ ಇರುವುದರಿಂದ ನಿರಾಯಾಸವಾಗಿ ಬಿಜೆಪಿಗೆ ಅಧಿಕಾರ ದಕ್ಕಿತ್ತು. ಬ್ಯಾಡಗಿ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆಗೆ ಮೀಸಲಾಗಿತ್ತು. ಇಲ್ಲಿ ಬಿಜೆಪಿ ಬಹುಮತ ಹೊಂದಿದ್ದರಿಂದ ಅಧಿಕಾರ ಬಿಜೆಪಿ ಪಾಲಾಗಿತ್ತು.
ಹಾನಗಲ್ಲ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾಗಿತ್ತು. ಇಲ್ಲಿ ಕಾಂಗ್ರೆಸ್‌ಗೆ ಬಹುಮತ ಇದ್ದಿದ್ದರಿಂದ ಕೈ ಪಕ್ಷ ಅಧಿಕಾರದ ಗದ್ದುಗೆ ಏರಿತ್ತು. ಸವಣೂರು ಪುರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಸೀಮಿತವಾಗಿತ್ತು. ಅಧ್ಯಕ್ಷ ಸ್ಥಾನ ಹಿಂದುಳಿದ ಬ ವರ್ಗದ ಮಹಿಳಾ ಮೀಸಲಾತಿ ಘೋಷಣೆಯಾಗಿದ್ದರಿಂದ ಬಹುಮತ ಹೊಂದಿದ್ದ ಕಾಂಗ್ರೆಸ್ ಪಕ್ಷದಲ್ಲಿ ಈ ಮೀಸಲಾತಿಗೆ ಅನ್ವಯವಾಗುವಂತೆ ಸದಸ್ಯರು ಇಲ್ಲದ ಕಾರಣ ಅನಿವಾರ್ಯಾವಾಗಿ ಬಹುಮತ ಇಲ್ಲದ ಬಿಜೆಪಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವಂತಾಗಿತ್ತು.
ಶಿಗ್ಗಾವಿ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಇಲ್ಲಿ ಬಿಜೆಪಿ ಪಕ್ಷೇತರರ ಬೆಂಬಲ ಪಡೆದು ಅಧಿಕಾರದ ಗದ್ದುಗೆ ಏರಿತ್ತು.
ಪಟ್ಟಣ ಪಂಚಾಯಿತಿಗೆ ಸಂಬಂಧಿ ಸಿದಂತೆ ಹಿರೇಕೆರೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗುತ್ತು. ಇಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿತ್ತು. ಗುತ್ತಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಇಲ್ಲಿ ಕಾಂಗ್ರೆಸ್ ಬಹುಮತ ಹೊಂದಿದ್ದರಿಂದ ಅಧಿಕಾರ ಕಾಂಗ್ರೆಸ್ ಪಕ್ಷದ ಪಾಲಾಗಿತ್ತು. ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕಿದೆ.
ಅಧಿಕಾರ ಸಿಗದವರ ಆಶಾವಾದ : ಸದ್ಯ ಹೈಕೋರ್ಟ್ ಆದೇಶದಿಂದಾಗಿ ಹಿಂದಿನ ಮೀಸಲಾತಿ ರದ್ದುಗೊಂಡಿದ್ದು, ಕೆಲವೇ ದಿನಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ. ಹೊಸ ಮೀಸಲಾತಿ ಪಟ್ಟಿಯನ್ನು ಸರ್ಕಾರ ಪ್ರಕಟಿಸಬೇಕಿದೆ. ಅದರಂತೆ ಹೊಸದಾಗಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕಿದ್ದು, ಅಧಿಕಾರ ಗದ್ದುಗೆ ಹಿಡಿಯುವಲ್ಲಿ ವಿಫಲರಾದವರಿಗೆ ಈ ಆದೇಶದಿಂದ ಮತ್ತೆ ಆಸೆ ಚಿಗುರೊಡೆಯುವಂತೆ ಮಾಡಿದೆ
–ವೀರೇಶ ಮಡ್ಲೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.