ಕ್ಷಯರೋಗ ಪತ್ತೆಗೆ ಮನೆ ಮನೆಗೆ ಭೇಟಿ: ಲೀಲಾವತಿ
Team Udayavani, Jul 17, 2019, 2:25 PM IST
ರಾಣಿಬೆನ್ನೂರ: ಅಂಗನವಾಡಿ ಕೇಂದ್ರದಲ್ಲಿ ಕ್ಷಯ ರೋಗ ಪತ್ತೆ-ಚಿಕಿತ್ಸಾ ಆಂದೋಲನಕ್ಕೆ ಆರೋಗ್ಯಾಧಿಕಾರಿ ಡಾ| ಸೋಮಶೇಖರ ಸಣ್ಣಮನಿ ಚಾಲನೆ ನೀಡಿದರು.
ಹಾವೇರಿ: ಕ್ಷಯರೋಗ ಪತ್ತೆ ಹಚ್ಚಲು ಮನೆ ಮನೆಗೆ ಭೇಟಿ ನೀಡುವ ಮೂಲಕ ಸಮೀಕ್ಷೆ ನಡೆಸಲಾಗುತ್ತಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ ಹೇಳಿದರು.
ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ನಾಗೇಂದ್ರನಮಟ್ಟಿಯ ಶ್ರೀಶಕ್ತಿ ವೃದ್ಧಾಶ್ರಮದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಜು. 15ರಿಂದ 27ರ ವರೆಗೆ ಜಿಲ್ಲೆಯಾದ್ಯಂತ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಮತ್ತು ಸ್ವಯಂಸೇವಕರು ಮನೆ ಮನೆಗೆ ಭೇಟಿ ನೀಡಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸಿ ಸಂಭಾವ್ಯ ಕ್ಷಯ ಪ್ರಕರಣಗಳು ಕಂಡು ಬಂದರೆ ಪರೀಕ್ಷೆಗೆ ಒಳಪಡಿಸುವುದು, ಕ್ಷಯರೋಗವೆಂದು ದೃಢಪಟ್ಟಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗುತ್ತದೆ. ಯಾವುದೇ ಹಿಂಜರಿಕೆ ಇಲ್ಲದೆ ಸಾರ್ವಜನಿಕರು ತಪಾಸಣೆಗೆ ಮುಂದಾಗುವಂತೆ ಕರೆ ನೀಡಿದರು.
ಈಗಾಗಲೇ ಕ್ಷಯರೋಗಕ್ಕೆ ಸರ್ಕಾರಿ ಅಥವಾ ಖಾಸಗಿಯಲ್ಲಿ ಚಿಕಿತ್ಸೆ ಪಡೆದವರು ಪರೀಕ್ಷೆಗೆ ಒಳಪಟ್ಟು ಕ್ಷಯ ಮರುಕಳಿಸಿದೆಯೇ ಎಂಬುದನ್ನು ಪತ್ತೆ ಮಾಡಿಸಿಕೊಳ್ಳಬಹುದಾಗಿದೆ. ಈ ಕಾರ್ಯಕ್ರಮದಲ್ಲಿ ಕ್ಷಯರೋಗದ ಪತ್ತೆ ಚಿಕಿತ್ಸೆ ಉಚಿತವಾಗಿದ್ದು, ಚಿಕಿತ್ಸಾ ಅವಧಿಯಲ್ಲಿ ಮಾಸಿಕ 500 ರೂ.ಗಳ ಸಹಾಯಧನವನ್ನು ಪೌಷ್ಟಿಕ ಆಹಾರಕ್ಕಾಗಿ ನೇರವಾಗಿ ರೋಗಿಯ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿ ಡಾ| ಜಯಾನಂದ ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣವಾಗಿ ಕ್ಷಯಮುಕ್ತ ಮಾಡುವ ನಿಟ್ಟಿನಲ್ಲಿ ಎಲ್ಲ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡರು.
ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ| ನೀಲೇಶ ಎಂ.ಎನ್. ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷಯರೋಗ ಗುಣಪಡಿಸಬಹುದಾದ ಕಾಯಿಲೆಯಾಗಿದ್ದು, ಸರಿಯಾದ ವೇಳೆಯಲ್ಲಿ ಸರಿಯಾದ ರೀತಿಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡರೆ ಸಂಪೂರ್ಣವಾಗಿ ಕ್ಷಯರೋಗ ಗುಣವಾಗುತ್ತದೆ. ಈ ಕಾರ್ಯಕ್ರಮವನ್ನು ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಹಾವೇರಿ ಜಿಲ್ಲೆಯಲ್ಲಿ 2,56,067 ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಿಕೊಳ್ಳುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಪ್ರಭಾಕರ ಕುಂದೂರ, ಶ್ರೀಶಕ್ತಿ ವೃದ್ಧಾಶ್ರಮ ಅಧಿಧೀಕ್ಷಕ ಕಾಳಪ್ಪ ಚಲವಾದಿ, ಉಮಾಪತಿ ಬಿ.ಎಸ್., ಲಿಂಗರಾಜ ಸಣ್ಣಕೂಡಲ, ವಿನಾಯಕ ಜೆ.ಪಿ, ಪಿ.ಎನ್. ಪಾಟೀಲ್, ರಾಜು ಎಸ್. ಸಬಳದ, ಚನ್ನಪ್ಪ ಲಮಾಣಿ, ವಸಂತಕುಮಾರಿ ಹಾಗೂ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.