22ರಂದು ಬೃಹತ್‌ ಉದ್ಯೋಗ ಮೇಳ


Team Udayavani, Feb 8, 2020, 4:13 PM IST

hv-tdy-1

ಹಾವೇರಿ: ಕೌಶಲ್ಯಾಭಿವೃದ್ಧಿ ಮಿಷನ್‌ ಕಾರ್ಯಕ್ರಮದಡಿ ಫೆ. 22 ಹಾಗೂ 23ರಂದು ಎರಡು ದಿನ ನಗರದ ಹುಕ್ಕೇರಿಮಠದಲ್ಲಿ ಜಿಲ್ಲಾ ಮಟ್ಟದ ಬೃಹತ್‌ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದ್ದು, ನಿರುದ್ಯೋಗಿಗಳಿಂದ ಒಂದು ವಾರ ಮುಂಚೆಯೇ ಅರ್ಜಿ ಆಹ್ವಾನಿಸಲು ತೀರ್ಮಾನಿಸಲಾಯಿತು.

ನಗರದ ಜಿಲ್ಲಾ ಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಅಪರ ಜಿಲ್ಲಾಧಿ ಕಾರಿ ಎಸ್‌. ಯೋಗೇಶ್ವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಪೂರ್ವಭಾವಿ ಸಿದ್ಧತಾ ಸಭೆ ಜರುಗಿತು.

ಉದ್ಯೋಗಮೇಳದಲ್ಲಿ ಜಿಲ್ಲೆಯ ಹೆಚ್ಚು ನಿರುದ್ಯೋಗಿ ಯುವಕರಿಗೆ ಉದ್ಯೋಗವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚು ಉದ್ಯೋಗದಾತ ಸಂಸ್ಥೆಗಳನ್ನು ಮೇಳಕ್ಕೆ ಆಹ್ವಾನಿಸಬೇಕು. ವಿವಿಧ ವೃತ್ತಿ ಹಾಗೂ ಉದ್ಯೋಗಗಳಿಗೆ ಸಂಬಂಧಿಸಿದಂತೆ ಮೇಳದಲ್ಲಿ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಬೇಕು. ಉದ್ಯೋಗಮೇಳದಲ್ಲಿ ಜಿಲ್ಲೆಯ ಹೆಚ್ಚು ನಿರುದ್ಯೋಗಿಗಳು ಭಾಗವಹಿಸಲು ಅನುಕೂಲವಾಗುವಂತೆ ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಂಡು ಮಾಹಿತಿಯನ್ನು ಪ್ರಸಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಉದ್ಯೋಗ ಮೇಳ ನಡೆಯುವ ದಿನಾಂಕದ ಒಂದುವಾರ ಮುಂಚಿತವಾಗಿ ನಿರುದ್ಯೋಗಿ ಯುವಕರಿಂದ ಆನ್‌ ಲೈನ್‌ ಹಾಗೂ ಆಫ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲು ತಿರ್ಮಾನಿಸಲಾಯಿತು. ಆನ್‌ ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಕುರಿತಂತೆ ಪ್ರತ್ಯೇಕ ವೆಬ್‌ಸೈಟ್‌ ಡಿಸೈನ್‌ ಮಾಡಿ ವೆಬ್‌ಸೈಟ್‌ ವಿಳಾಸವನ್ನು ಪ್ರಕಟಿಸಲು ನಿರ್ಧರಿಸಲಾಯಿತು. ಆಫ್‌ಲೈನ್‌ನಲ್ಲೂ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳ ನಗರಸಭೆ ಅಥವಾ ಕರ್ನಾಟಕ ಒನ್‌ ಸೆಂಟರ್‌ ಗಳಲ್ಲಿ ಪ್ರತ್ಯೇಕ ಕೌಂಟರ್‌ಗಳನ್ನು ತೆರೆದು ಅರ್ಜಿ ನೋಂದಣಿಗೆ ಅವಕಾಶ ಕಲ್ಪಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲೆಯ ಎಲ್ಲ ಐಟಿಐ ಕಾಲೇಜುಗಳು, ತಾಂತ್ರಿಕ ಕಾಲೇಜುಗಳು ಹಾಗೂ ಪದವಿ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಉದ್ಯೋಗಮೇಳದ ಕುರಿತಂತೆ ವ್ಯಾಪಕ ಪ್ರಚಾರ ಕೈಗೊಳ್ಳಲು ನಿರ್ಧರಿಸಲಾಯಿತು. ಪೂರ್ಣಾವಧಿ ಉದ್ಯೋಗದ ಜತೆಗೆ ಅರೆಕಾಲಿಕ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ನಿಟ್ಟಿನಲ್ಲಿ ಶಾಲಾ-ಕಾಲೇಜು, ಹೋಟೆಲ್‌ ಸೇರಿದಂತೆ ವಿವಿಧೆಡೆ ಅರೆಕಾಲಿಕ ಕೆಲಸಗಳ ಗುರುತಿಸಿ ಇಂತಹ ಉದ್ಯೋಗಗಳನ್ನು ಬಯಸುವ ನಿರುದ್ಯೋಗಿಗಳಿಗೆ ವೆಬ್‌ಸೈಟ್‌ ನಲ್ಲಿ ಪ್ರತ್ಯೇಕ ಕಾಲಂಗಳ ರಚಿಸಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಯಿತು.

ಈ ಕುರಿತಂತೆ ಯಾವ-ಯಾವ ಸಂಸ್ಥೆಗಳಲ್ಲಿ ಅರೆಕಾಲಿಕ ಸೇವೆಗಳು ಖಾಲಿ ಇವೆಯೋ ಅಂತಹ ಉದ್ಯೋಗಾವಕಾಶಗಳ ಸಂಖ್ಯೆಯನ್ನು ಸಂಗ್ರಹಿಸಲು ಸೂಚಿಸಲಾಯಿತು. ಉದ್ಯೋಗ ಮೇಳ ನಡೆಯುವ ನಗರದ ಹುಕ್ಕೇರಿಮಠದ ಶ್ರೀ ಶಿವಲಿಂಗೇಶ್ವರ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಸಂದರ್ಶನಕ್ಕಾಗಿ ಕಂಪನಿವಾರು ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಬೇಕು. ಮುಖ್ಯವೇದಿಕೆ ನಿರ್ಮಾಣ, ಫುಡ್‌ ಕೌಂಟರ್‌ ತೆರೆಯುವುದು ಸೇರಿದಂತೆ ಉದ್ಯೋಗಮೇಳದ ಯಶಸ್ವಿ ಆಯೋಜನೆಗೆ ವಿವಿಧ ಎಂಟು ಸಮಿತಿಗಳನ್ನು ರಚಿಸಲಾಯಿತು.

ತ್ವರಿತವಾಗಿ ಸಿದ್ಧತೆಗಳನ್ನು ಕೈಗೊಂಡು ವರದಿ ಸಲ್ಲಿಸಲು ಸೂಚಿಸಲಾಯಿತು. ಸ್ಥಳೀಯ ಉದ್ಯಮಗಳಲ್ಲಿ ಕೆಲಸ ಮಾಡಲು ಅನುಕೂಲವಾಗುವಂತೆ ಅಪ್ರಂಟಿಸ್‌ ಮಾದರಿಯಲ್ಲಿ ಕೌಶಲ್ಯ ಕೇಂದ್ರಕ್ಕೆ ದಾಖಲಾದ ಅಭ್ಯರ್ಥಿಗಳನ್ನು ನಿಯೋಜಿಸಬೇಕು. ಸ್ಥಳೀಯ ಉದ್ಯೋಗದಾತರನ್ನು ಉದ್ಯೋಗ ಮೇಳದಲ್ಲಿ ಪ್ರಾಧ್ಯಾನ್ಯತೆಯ ಅನುಸಾರ ಭಾಗವಹಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾ ವಾಣಿಜ್ಯೋದ್ಯಮದ ಸಂಸ್ಥೆಯ ಪದಾಧಿಕಾರಿಗಳು ಸಭೆಯಲ್ಲಿ ಮನವಿ ಮಾಡಿಕೊಂಡರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ, ಕೌಶಲ್ಯಾಭಿವೃದ್ಧಿ ಕೇಂದ್ರದ ಸುಭಾಷ್‌ಗೌಡ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕೇಂದ್ರದ ಅಧಿಕಾರಿ ಸಂಜಯ ದಿಗಂಬರ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಜೋಶಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪೀರಜಾದೆ, ವಾರ್ತಾಧಿಕಾರಿ ಡಾ| ಬಿ.ಆರ್‌ ರಂಗನಾಥ್‌, ವಾಣಿಜ್ಯಮಂಡಳಿಯ ಪದಾಧಿಕಾರಿಗಳು ಇತರರು ಇದ್ದರು.

ಟಾಪ್ ನ್ಯೂಸ್

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.