ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ
ಎಲ್ಲ ವಿದ್ಯಾರ್ಥಿಗಳನ್ನು ಒಂದೇ ಕುಟುಂಬದ ಸದಸ್ಯರನ್ನಾಗಿ ಮಾಡಿದ್ದವು
Team Udayavani, Oct 14, 2024, 4:01 PM IST
■ಉದಯವಾಣಿ ಸಮಾಚಾರ
ಹಾವೇರಿ: ಜ್ಞಾನದ ಜತೆಗೆ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡಿದ ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ ಎಂದು ಜಿಲ್ಲಾಧಿ ಕಾರಿ ಡಾ|ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಹುಕ್ಕೇರಿಮಠ ಶಿವಬಸವೇಶ್ವರ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಆಚರಣೆ ಕುರಿತು ನಗರದ
ಹುಕ್ಕೇರಿಮಠದ ಶಿವಾನುಭವ ಮಂಟಪದಲ್ಲಿ ರವಿವಾರ ಏರ್ಪಡಿಸಿದ್ದ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹುಕ್ಕೇರಿಮಠದಲ್ಲಿ ನಾನು ಕೇವಲ ಒಂದು ವರ್ಷ ಅಧ್ಯಯನ ಮಾಡಿದ್ದರೂ ಇಲ್ಲಿನ ಶಿಸ್ತು, ಪ್ರೀತಿ, ಸಹಕಾರ ಮನೋಭಾವ ಎಲ್ಲ ವಿದ್ಯಾರ್ಥಿಗಳನ್ನು ಒಂದೇ ಕುಟುಂಬದ ಸದಸ್ಯರನ್ನಾಗಿ ಮಾಡಿದ್ದವು ಎಂದು ಸ್ಮರಿಸಿದರು.
ಒಂದು ಶಿಕ್ಷಣ ಸಂಸ್ಥೆಯನ್ನು 50 ವರ್ಷಗಳ ಕಾಲ ನಡೆಸಿಕೊಂಡು ಬರುವುದು ಸುಲಭವಲ್ಲ ಎಂದ ಅವರು, ಇಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು ಸಂಸ್ಥೆಯ ಬೆನ್ನಲುಬಾಗಿ ನಿಂತುಕೊಂಡು ಸುವರ್ಣ ಮಹೋತ್ಸವ ಕಾರ್ಯಕ್ರಮ ಅರ್ಥಪೂರ್ಣ ಆಚರಿಸಬೇಕಿದೆ ಎಂದರು.
ಕಾರ್ಯಕ್ರಮಕ್ಕೆ ಅಗತ್ಯವಿರುವ ಸಮಿತಿಗಳನ್ನು ರಚಿಸುವುದು, ಹಳೆಯ ವಿದ್ಯಾರ್ಥಿಗಳ ವಾಟ್ Õಆ್ಯಪ್ ಗ್ರೂಪ್ ರಚನೆ, ಆನ್‌ಲೈನ್ ರಿಜಿಸ್ಟ್ರೇಷನ್ ವ್ಯವಸ್ಥೆ ಮಾಡಿದರೆ ಕಾರ್ಯಕ್ರಮ ಯಶಸ್ವಿಯಾಗಿ ಮಾಡಲು ಸಹಕಾರಿಯಾಗುತ್ತದೆ. ಕಾರ್ಯಕ್ರಮ ಸವಿನೆನಪಿಗೆ ಶ್ರೀಮಠದಲ್ಲಿ ಹಾಸ್ಟೇಲ್ ನಿರ್ಮಿಸಿದರೆ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದರು.
ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಹುಕ್ಕೇರಿಮಠದ ಪ್ರಾಥಮಿಕ, ಪ್ರೌಢಶಾಲೆ ಸುವರ್ಣ ಮಹೋತ್ಸವ ಆಚರಿಸಲು ನಿರ್ಧರಿಸಿದ್ದು ಹಳೆಯ ವಿದ್ಯಾರ್ಥಿಗಳ ಸಹಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ಮೊದಲು ದಿನಾಂಕ ನಿಗದಿ ಮಾಡುವುದು ಅಗತ್ಯವಿದೆ. ಮುಂಬರುವ ಜನವರಿ ತಿಂಗಳಲ್ಲಿ ಹುಕ್ಕೇರಿಮಠದ ಜಾತ್ರೆ ನಡೆಯಲಿದ್ದು, ಆ ಸಂದರ್ಭದಲ್ಲಿ ಒಂದು ದಿನ ಕಾರ್ಯಕ್ರಮ ಆಯೋಜಿಸಿದರೆ ಉತ್ತಮ. ಮಾ.3ರಂದು ಹಲವು ಹಳೆಯ ವಿದ್ಯಾರ್ಥಿಗಳು ಲಿಂ|ಶಿವಲಿಂಗೇಶ್ವರ ಸ್ವಾಮೀಜಿ ಜನ್ಮದಿನ ಆಚರಿಸುತ್ತಿದ್ದು, ಈ ವೇಳೆ ಕಾರ್ಯಕ್ರಮ ಮಾಡಿದರೂ ಅರ್ಥಪೂರ್ಣ ಎಂದರು.
ಶ್ರೀ ಶಿವಲಿಂಗೇಶ್ವರ ವಿದ್ಯಾಪೀಠದ ಚೇರಮನ್ ಎಸ್.ಎಸ್.ಮುಷ್ಠಿ ಮಾತನಾಡಿ, ಸಂಸ್ಥೆಯಲ್ಲಿ ಸುಮಾರು 1200 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ದೊಡ್ಡ ಸಂಸ್ಥೆಯಾಗಿದೆ. ಈ ಸಂಸ್ಥೆಯಲ್ಲಿ ಕಲಿತು ಉನ್ನತ ಹಂತಕ್ಕೆ ಹೋಗಿರುವ ಹಳೆಯ ವಿದ್ಯಾರ್ಥಿಗಳು ಅಗತ್ಯ ಸಹಾಯ, ಸಹಕಾರ ನೀಡುವ ಮೂಲಕ ಸುವರ್ಣ ಮಹೋತ್ಸವ ಯಶಸ್ಸಿಗೆ ಸಹಕರಿಸಬೇಕು ಎಂದರು.
ಬಿಜಕಲ್ ವಿರಕ್ತಮಠದ ಶ್ರೀ ಶಿವಲಿಂಗ ಸ್ವಾಮೀಜಿ, ಪ್ರಮುಖರಾದ ಪಿ.ಡಿ.ಶಿರೂರ, ಆರ್. ಎಸ್.ಮಾಗನೂರ, ವೀರಣ್ಣ ವಳಸಂಗದ,
ಮಲ್ಲಿಕಾರ್ಜುನ ಸಾತೇನಹಳ್ಳಿ ಸೇರಿದಂತೆ ನೂರಾರು ಹಳೆಯ ವಿದ್ಯಾರ್ಥಿಗಳು ಇದ್ದರು. ನಿವೃತ್ತ ಪ್ರಾಚಾರ್ಯ ಬಿ.ಬಸವರಾಜ ಪ್ರಾಸ್ತಾವಿಕ ಮಾತನಾಡಿದರು. ನಿವೃತ್ತ ಶಿಕ್ಷಕ ಸಿ.ಎಸ್.ಮರಳಿಹಳ್ಳಿ ಸ್ವಾಗತಿಸಿದರು. ಶಿಕ್ಷಕ ನಾಗರಾಜ ನಡುವಿನಮಠ
ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.