ಮಾನವ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿ

Team Udayavani, Dec 13, 2021, 12:16 PM IST

ಮಾನವ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿ

ಹಾವೇರಿ: ಮಾನವ ಹಕ್ಕುಗಳು ಪ್ರತಿ ವ್ಯಕ್ತಿಯ ಹುಟ್ಟಿನಿಂದಲೇ ಬರುತ್ತವೆ. ನಮ್ಮ ಹಕ್ಕುಗಳ ರಕ್ಷಣೆಜೊತೆಗೆ ಬೇರೆಯವರ ಹಕ್ಕುಗಳಿಗೆ ಧಕ್ಕೆ ಬಾರದಂತೆನಡೆದುಕೊಳ್ಳುವುದು ಪ್ರತಿಯೊಬ್ಬರ ಗುರುತರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಯಾದವ ವನಮಾಲಾ ಆನಂದರಾವ್‌ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ನ್ಯಾಯವಾದಿಗಳಸಂಘ, ಅಭಿಯೋಜನ ಇಲಾಖೆ ಹಾಗೂ ಜಿಲ್ಲಾವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪ್ರತಿಜ್ಞಾವಿಧಿ  ಬೋಧಿಸಿ ಅವರು ಮಾತನಾಡಿದರು.

ಮನುಷ್ಯನ ಘನತೆ, ಭದ್ರತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕೆ ಕುಂದು ಬಾರದಂತೆ ರಕ್ಷಿಸುವುದೇಮೂಲಭೂತ ಹಕ್ಕುಗಳ ಉದ್ದೇಶವಾಗಿದೆ. ಮಾನವಹಕ್ಕುಗಳು ನೈಸರ್ಗಿಕ ಹಕ್ಕುಗಳಾಗಿವೆ. ಎರಡುಮಹಾಯುದ್ಧಗಳಿಂದ ಉಂಟಾದ ಸಾವು-ನೋವುಗಳುಮುಂದೆಂದೂ ಮರುಕಳಿಸಬಾರದು ಎಂಬ ಹಿನ್ನೆಲೆಯಲ್ಲಿ1948ರಲ್ಲಿ ಮಾನವ ಹಕ್ಕುಗಳನ್ನು ವಿಶ್ವಸಂಸ್ಥೆ ಘೋಷಿಸಿದೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿ, ಒಬ್ಬ ಮನುಷ್ಯನ ಸಂಪೂರ್ಣ ಬೆಳವಣಿಗೆಗೆ ಮೂಲಭೂತ ಹಕ್ಕುಗಳುಅಗತ್ಯವಾಗಿವೆ. ಒಂದೊಂದು ಹಕ್ಕಿಗಾಗಿ ಎರಡು ಸಾವಿರ ನಿರಂತರ ಹೋರಾಟದಿಂದ ಮಾನವ ಹಕ್ಕುಗಳಪರಿಕಲ್ಪನೆ ಮೂಡಿಬಂದಿದೆ. ಅಲ್ಲದೇ, ಮೂಲಭೂತ ಹಕ್ಕುಗಳ ಸ್ಥಾಪನೆ ಮಾಡಲಾಗಿದೆ. ಭಾರತ ಸೇರಿದಂತೆಪ್ರಜಾಪ್ರಭುತ್ವ ಹಿನ್ನೆಲೆಯಿಂದ ಬಂದ 48 ರಾಷ್ಟ್ರಗಳು1948ರಲ್ಲಿ ಯುನೈಟೆಡ್‌ನ‌ಲ್ಲಿ ವೋಟ್‌ ಮಾಡುವಮೂಲಕ ಮಾನವ ಹಕ್ಕುಗಳನ್ನು ಅಂಗೀಕರಿಸಲಾಯಿತು.ಭಾರತದ ಸಂವಿಧಾನದಲ್ಲೂ ಸಹ ಮಾನವ ಹಕ್ಕುಗಳಿಗೆ ವಿಶೇಷ ಸ್ಥಾನ ನೀಡಲಾಗಿದೆ ಎಂದರು.

ಭಾರತದಲ್ಲಿ 1950ರಲ್ಲಿ ಸಂವಿಧಾನ ರಚಿಸಿ ಮೂಲಭೂತ ಹಕ್ಕುಗಳನ್ನು ನೀಡಲಾಯಿತು. ಈಮೊದಲು ಎಲ್ಲರಿಗೂ ಮತದಾನದ ಹಕ್ಕು ಇರಲಿಲ್ಲ.1950ರ ನಂತರ ಎಲ್ಲರಿಗೂ ಮತದಾನ ಮಾಡುವ ಹಕ್ಕುನೀಡಲಾಗಿದೆ. ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಹಕ್ಕುಗಳಬಗ್ಗೆ ಅರಿವು ಅಗತ್ಯ. ಜೊತೆಗೆ ಮಾನವ ಹಕ್ಕುಗಳ ರಕ್ಷಣೆಮಾಡುವುದು ಎಲ್ಲರ ಹೊಣೆಯಾಗಿದೆ. ಈ ಕುರಿತಂತೆಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್‌ ವಕೀಲರಾದ ಕೆ.ಎಲ್‌.ಅಂಗರಗಟ್ಟಿ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್‌ ನ್ಯಾಯಾಧಿಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದಸದಸ್ಯ ಕಾರ್ಯದರ್ಶಿಗಳಾದ ಪುಟ್ಟರಾಜು, ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಮಹಮ್ಮದರೋಷನ್‌, ಅಪರ ಡಿಸಿ ಡಾ| ಎನ್‌.ತಿಪ್ಪೇಸ್ವಾಮಿ,ಡಿವೈಎಸ್‌ಪಿ ಶಂಕರ ಮಾರಿಹಾಳ, ಸರ್ಕಾರಿ ಹಿರಿಯ ಸಹಾಯಕ ಅಭಿಯೋಜಕರಾದ ಪ್ರಕಾಶ ಸುಂಕದ, ಜಿಲ್ಲಾ ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಐ.ಎಸ್‌.ನಂದಿ ಇದ್ದರು.ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ ಸ್ವಾಗತಿಸಿ, ಶಿಕ್ಷಕ ನಾಗರಾಜ ನಡುವಿನಮಠ ನಿರೂಪಿಸಿದರು.

ಮನುಷ್ಯನ ಘನತೆ, ಭದ್ರತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕೆ ಕುಂದು ಬಾರದಂತೆರಕ್ಷಿಸುವುದೇ ಮೂಲಭೂತ ಹಕ್ಕುಗಳಉದ್ದೇಶವಾಗಿದೆ. ಮಾನವ ಹಕ್ಕುಗಳು ನೈಸರ್ಗಿಕಹಕ್ಕುಗಳಾಗಿವೆ. ಎರಡು ಮಹಾಯುದ್ಧಗಳಿಂದಉಂಟಾದ ಸಾವು-ನೋವುಗಳು ಮುಂದೆಂದೂಮರುಕಳಿಸಬಾರದು ಎಂಬ ಹಿನ್ನೆಲೆಯಲ್ಲಿ1948ರಲ್ಲಿ ಮಾನವ ಹಕ್ಕುಗಳನ್ನು ವಿಶ್ವ ಸಂಸ್ಥೆಘೋಷಿಸಿದೆ. -ಯಾದವ ವನಮಾಲಾ ಆನಂದರಾವ್‌, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು

ಟಾಪ್ ನ್ಯೂಸ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.