ರೈತರಿಗೆ ಅನ್ಯಾಯ ಮಾಡಿದ್ರೆ ನಿರ್ದಾಕ್ಷಿಣ್ಯ ಕ್ರಮ

ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಖಡಕ್‌ ಎಚ್ಚರಿಕೆ ; ಪ್ರವಾಹ ಪರಿಸ್ಥಿತಿ-ಬೆಳೆ ಹಾನಿ ಪರಿಶೀಲನಾ ಸಭೆ

Team Udayavani, Aug 11, 2022, 3:22 PM IST

11

ಹಾವೇರಿ: ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿಯ ಬಗ್ಗೆ ಸುಳ್ಳು ವರದಿ ಕೊಟ್ಟರೆ, ರೈತರಿಗೆ ಅನ್ಯಾಯ ಮಾಡಿದರೆ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಖಡಕ್‌ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರವಾಹ ಪರಿಸ್ಥಿತಿ ಹಾಗೂ ಬೆಳೆ ಹಾನಿ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಅತಿವೃಷ್ಟಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಮಾನವೀಯತೆ, ಹೃದಯ ವೈಶಾಲ್ಯತೆಯಿಂದ ನಿಖರವಾಗಿ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಬೇಕು. ರೈತರ ಹೊಲಗಳಿಗೆ ತೆರಳಿ ಹಾನಿ ಪರಿಶೀಲಿಸಬೇಕು. ಸಮೀಕ್ಷೆ ಕುರಿತಂತೆ ರೈತರಿಂದ ಯಾವುದೇ ದೂರುಗಳು ಬರಬಾರದು. ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳ್ಳುವವರೆಗೂ ಯಾವೊಬ್ಬ ಕೃಷಿ ಅಧಿ ಕಾರಿಯೂ ರಜೆ ಮೇಲೆ ತೆರಳಬಾರದು. ಕೇಂದ್ರ ಸ್ಥಾನ ಬಿಡಬಾರದು. ರೈತರ ಸಂಪರ್ಕಕ್ಕೆ ಸಿಗಬೇಕು. ರೈತರ ಸಂಕಷ್ಟದ ಸಂದರ್ಭದಲ್ಲಿ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದರು.

ಕೆರೆ ಕೋಡಿಯಿಂದ ನೀರು ನುಗ್ಗಿ ಹಾನಿಯಾದ ಬೆಳೆಗಳಿಗೂ ವಿಮಾ ಸೌಕರ್ಯ ಕಲ್ಪಿಸಬೇಕು. ವಿಮಾ ಕಂಪನಿಗಳು ಸೂಚಿಸಿದಂತೆ ಕೃಷಿ ಅಧಿಕಾರಿಗಳು ವರದಿ ನೀಡಬಾರದು. ಸ್ಥಳ ಪರಿಶೀಲನೆ ನಡೆಸಿ ವಿಮಾ ಸೌಕರ್ಯ ಕಲ್ಪಿಸಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯ ಬಹುಪಾಲು ಗ್ರಾಮಗಳಿಗೆ ಮಳೆಯಿಂದ ಕುಡಿಯುವ ನೀರಿನ ಪೈಪ್‌ಗ್ಳು ಹಾಳಾಗಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಕುಡಿಯುವ ನೀರು ಪೂರೈಕೆ ಪಂಪ್‌ಗ್ಳು ಹಾಳಾಗಿವೆ. ಈ ಕುರಿತಂತೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ. ಮುಂಗಾರಿಗೆ ಹಳೆಯ ದಾಸ್ತಾನು ಸೇರಿ 1,16,827 ಮೆಟ್ರಿಕ್‌ ಟನ್‌ ಜಿಲ್ಲೆಗೆ ಪೂರೈಕೆಯಾಗಿದೆ. 1,08,495 ಮೆಟ್ರಿಕ್‌ ಟನ್‌ ಹಂಚಿಕೆ ಮಾಡಲಾಗಿದೆ. 9,732 ಮೆಟ್ರಿಕ್‌ ಟನ್‌ ಗೊಬ್ಬರ ದಾಸ್ತಾನಿದೆ. ಯೂರಿಯಾ ಗೊಬ್ಬರದ ಬದಲು ನ್ಯಾನೋ ಗೊಬ್ಬರ ಬಳಸಬೇಕು. ಈ ಕುರಿತಂತೆ ರೈತರಿಗೆ ಜಾಗೃತಿ ಮೂಡಿಸಬೇಕೆಂದು ಅ ಕಾರಿಗಳಿಗೆ ಸೂಚನೆ ನೀಡಿದರು.

ಕೃತಕ ಅಭಾವ ಸೃಷ್ಟಿಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕೃಷಿ ಜಾಗೃತ ದಳದಿಂದ ಕಳಪೆ ಬೀಜ-ಗೊಬ್ಬರ, ಕೃತಕ ಅಭಾವ ಸೃಷ್ಟಿಸಿದವರ ಮೇಲೆ 144 ಪ್ರಕರಣಗಳು ದಾಖಲಾಗಿವೆ. 15 ಪ್ರಕರಣಗಳಲ್ಲಿ ಶಿಕ್ಷೆ ಹಾಗೂ ದಂಡ ಹಾಕಲಾಗಿದೆ. 28 ಕೋಟಿ ಮೊತ್ತದ ಕಳಪೆ ಬೀಜ ವಶಪಡಿಸಿಕೊಳ್ಳಲಾಗಿದೆ ಎಂದರು.

ಕೃಷಿ ಜಂಟಿ ನಿರ್ದೇಶಕ ಮಂಜುನಾಥ್‌ ಮಳೆಯಿಂದ ಆದ ಬೆಳೆ ಹಾನಿ ಮಾಹಿತಿಯನ್ನು ಸಭೆಗೆ ವಿವರಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್‌ ರೋಷನ್‌ ಇದ್ದರು.

ನಿಖರ ಸಮೀಕ್ಷೆ ಕೈಗೊಳ್ಳಿ

ಬೆಳೆ ಹಾನಿ ಸಮೀಕ್ಷೆ ಕೇವಲ ಕೃಷಿ ಇಲಾಖೆ ಕೆಲಸವೆಂದು ಪರಿಗಣಿಸಬೇಡಿ. ತೋಟಗಾರಿಕೆ, ರೇಷ್ಮೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ರೈತರ ಪರಿಸ್ಥಿತಿ ಗಂಭೀರವಾಗಿದೆ. ರೈತರು ಸಂದಿಗ್ಧ ಸ್ಥಿತಿಯಲ್ಲಿದ್ದಾರೆ. ಅತ್ಯಂತ ಗಂಭೀರವಾಗಿ ಪರಿಗಣಿಸಿ ನಿಖರ ಸಮೀಕ್ಷೆ ಕೈಗೊಳ್ಳಿ. ಆ ಮೂಲಕ ಕಷ್ಟದಲ್ಲಿರುವ ರೈತರ ನೆರವಿಗೆ ನಿಲ್ಲಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಸೂಚನೆ ನೀಡಿದರು.

ಬೆಳೆ ಕಟಾವು ಸಮೀಕ್ಷೆ ನಿಖರವಾಗಿ ಕೈಗೊಳ್ಳಬೇಕು. ಬೆಳೆ ನಷ್ಟವಾದಲ್ಲಿ ಎಲ್ಲಿ ಸರ್ವೇ ಮಾಡಬೇಕು. ಕೇವಲ ವಿಮಾ ಕಂಪನಿಗಳು ಶಿಫಾರಸ್ಸು ಮಾಡಿದ ಪತ್ರಕ್ಕೆ ಸಹಿ ಹಾಕಬೇಡಿ. ಕೃಷಿ ಅಧಿಕಾರಿಗಳು ಖುದ್ದಾಗಿ ಪರಿಶೀಲನೆ ನಡೆಸಬೇಕು. ಇಲ್ಲವಾದರೆ ರೈತರಿಗೆ ವಿಷ ಕೊಟ್ಟ ಹಾಗೆ ಆಗುತ್ತದೆ. ಎಲ್ಲ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ∙ಬಿ.ಸಿ.ಪಾಟೀಲ, ಕೃಷಿ ಸಚಿವರು

ಜಿಲ್ಲೆಯಲ್ಲಿ 450 ಮಿ.ಮೀ. ವಾಡಿಕೆ ಮಳೆ ಎದುರು 632 ಮಿ.ಮೀ. ಮಳೆಯಾಗಿದೆ. ಶೇ.40ರಷ್ಟು ಹೆಚ್ಚಿನ ಮಳೆಯಾಗಿದೆ. 3.8 ಲಕ್ಷ ಹೆಕ್ಟೇರ್‌ ಮುಂಗಾರು ಬಿತ್ತನೆಯಾಗಿದ್ದು, ಅತಿವೃಷ್ಟಿಯಿಂದ ಜುಲೈನಿಂದ ಆಗಸ್ಟ್‌ 5ರವರೆಗೆ ಅಂದಾಜು 27,353 ಹೆಕ್ಟೇರ್‌, ಆಗಸ್ಟ್‌ 8ರವರೆಗೆ 40,027 ಹೆಕ್ಟೇರ್‌ ಬೆಳೆ ಹಾನಿಯಾಗಿದೆ. ಈ ಸಮೀಕ್ಷೆ ನನಗೆ ತೃಪ್ತಿ ತಂದಿಲ್ಲ. ಹಾನಗಲ್ಲನಂತಹ ಮಲೇನಾಡು ಪ್ರದೇಶದಲ್ಲಿ ಕೇವಲ ಎರಡು ಸಾವಿರ ಹೆಕ್ಟೇರ್‌ ಬೆಳೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಹೇಳುತ್ತಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ 1,99,167 ರೈತರಿಗೆ 502 ಕೋಟಿ ಪರಿಹಾರ ಹಣ ನೀಡಲಾಗಿದೆ. 2021ನೇ ಸಾಲಿನಲ್ಲಿ 58,072 ರೈತರಿಗೆ 68 ಕೋಟಿ ವಿಮಾ ಹಣ ಬಂದಿದೆ. ರೈತ ವಿದ್ಯಾನಿಧಿ ಯೋಜನೆಯಡಿ 22 ಸಾವಿರ ವಿದ್ಯಾರ್ಥಿಗಳು 3.44 ಕೋಟಿ ಹಣ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.