ಕಿಸಾನ್‌ ಸಮ್ಮಾನ್‌ ಅನುಷ್ಠಾನಗೊಳಿಸಿ


Team Udayavani, Jul 20, 2019, 4:43 PM IST

hv-tdy-4

ಸವಣೂರು : ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ತಾಲೂಕು ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಮಾತನಾಡಿದರು.

ಸವಣೂರು: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ರೈತರ ನೋಂದಣಿ ಮಾಡುವಲ್ಲಿ ಸವಣೂರು ತಾಲೂಕು ಹಿಂದೆ ಬಿದ್ದಿದ್ದು, ರೈತರನ್ನು ನೋಂದಾವಣಿ ಮಾಡುವ ಮೂಲಕ ಸರ್ಕಾರದ ಯೋಜನೆ ಲಾಭ ಪ್ರತಿ ರೈತರಿಗೂ ತಲುಪಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿಯ ಆವರಣದಲ್ಲಿ ಶುಕ್ರವಾರ ಜರುಗಿದ ತಾಲೂಕು ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಿಸಾನ್‌ ಸಮ್ಮಾನ್‌ ಯೋಜನೆ ಕಳೆದ ವರ್ಷ ಡಿಸೆಂಬರ್‌ ತಿಂಗಳಿನಲ್ಲಿ ಪ್ರಾರಂಭವಾದರೂ ನೋಂದಣಿ ಮಾತ್ರ ಕಡಿಮೆಯಾಗಿದೆ. ಇದರಿಂದ, ಕೆಲವೇ ರೈತರು ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಶೇ. 85ರಷ್ಟು ನೋಂದಣಿಯನ್ನು ಮಾಡಿಸಲಾಗಿದೆ ಎಂದರು.

ಇಂದಿನ ದಿನಗಳಲ್ಲಿ ಟಿಬಿ ರೋಗಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಸ್ಥಳೀಯ ಅಧಿಕಾರಿಗಳು ಹೆಚ್ಚಿನ ಗಮನ ಹರಿಸುವ ಮೂಲಕ ಮುಂದಿನ 15 ದಿನಗಳ ಒಳಗಾಗಿ ರೋಗಿಗಳನ್ನು ಗುರುತಿಸಿ ಚಿಕಿತ್ಸೆಗೆ ಒಳಪಡಿಸಿ ರೋಗ ನಿರ್ಮೂಲನೆ ಆಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ವೈದ್ಯಾಧಿಕಾರಿ ರಾಘವೇಂದ್ರ ಜಿಗಳಿಕೊಪ್ಪ ಮಾತನಾಡಿ, ತಾಲೂಕಿನಲ್ಲಿ 26 ಸಾವಿರ ಜನಸಂಖ್ಯೆ ತೆಗೆದುಕೊಂಡು ಟಿಬಿ ರೋಗ ಪತ್ತೆಹಚ್ಚಲು 23 ತಂಡಗಳನ್ನು ರಚನೆ ಮಾಡಲಾಗಿದೆ. ಈ ಕಾರ್ಯಾಚರಣೆ ಜು.15 ರಿಂದ ಪ್ರಾರಂಭವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ 200 ಜನರನ್ನು ಕಫ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ ಒಂದು ರೋಗಿಯನ್ನು ಪತ್ತೆ ಹಚ್ಚಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಉಪ ವಿಭಾಗಾಧಿಕಾರಿ ಬೋಯಾರ್‌ ಹರ್ಷಲ್ ನಾರಾಯಣರಾವ, ಪ್ರಭಾರ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ತಹಶೀಲ್ದಾರ್‌ ವಿ.ಡಿ.ಸಜ್ಜನ, ತಾಪಂ ಪ್ರಭಾರ ಇಒ ಎಸ್‌.ಎಚ್.ಅಮರಾಪೂರ, ಪಶು ಸಂಗೋಪನಾ ಇಲಾಖೆ ಅಧಿಕಾರಿ ಭಿರೇಶ್‌, ವಿವಿಧ ಇಲಾಖೆ ಅಧಿಕಾರಿಗಳಾದ ಸರಸ್ವತಿ ಗಜಕೋಶ, ಪ್ರಮೀಳಾ ಕೋಟಿ, ಕುಂಬಾರ, ಎನ್‌.ಎಸ್‌. ನವಲಗುಂದ ಸೇರಿದಂತೆ ಮೊದಲಾದವರಿದ್ದರು.

ಟಾಪ್ ನ್ಯೂಸ್

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.