ಭಾರತೀಯ ಸಂಗೀತಕ್ಕಿದೆ ಇತಿಹಾಸ


Team Udayavani, Aug 26, 2019, 11:32 AM IST

hv-tdy-1

ರಾಣಿಬೆನ್ನೂರ: ಶಾಸ್ತ್ರೀಯ, ಸುಗಮ ಸಂಗೀತ ಕಾರ್ಯಕ್ರಮವನ್ನು ಶ್ರೀ ಬಸವಶಾಂತಲಿಂಗ ಸ್ವಾಮೀಜಿ ಉದ್ಘಾಟಿಸಿದರು.

ರಾಣಿಬೆನ್ನೂರ: ಭಾರತೀಯ ಸಂಗೀತಕ್ಕೆ ಸಾವಿರಾರು ವರ್ಷಗಳ ಇತಿಹಾಸ, ಪರಂಪರೆಯಿದೆ. ಸಂಗೀತ, ಸಾಹಿತ್ಯ ಮತ್ತು ಜನಪದ ಸಾಂಸ್ಕೃತಿಕ ಕಲೆ ನಮ್ಮ ಪೂರ್ವಜರ ಬದುಕಿನ ಭಾಗವಾಗಿ ನಿತ್ಯ ಜೀವನದಲ್ಲಿ ಹಾಸು ಹೊಕ್ಕಾಗಿ ಬಂದಿದೆ ಎಂದು ಹಾವೇರಿ ಹೊಸ ಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.

ಕರ್ನಾಟಕ ಸಂಘದ ಆಲೂರು ವೆಂಕಟರಾವ್‌ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ಬೀರೇಶ್ವರ ವ್ಯಾಯಾಮ ಶಾಲೆ, ಕ್ರೀಡಾ ಸಾಂಸ್ಕೃತಿಕ ಸಂಘವು ಆಯೋಜಿಸಿದ್ದ ಸಂಗೀತ ಶ್ರಾವಣ ಶಾಸ್ತ್ರೀಯ ಮತ್ತು ಸುಗಮ ಸಂಗೀತ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು, ಇಂತಹಭವ್ಯ ಸಂಸ್ಕೃತಿಯ ಸಂಗೀತ ಕಲೆಗಳನ್ನು ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಜತೆಗೆ ಪಠ್ಯೇತರ ಚಟುವಟಿಕೆಯಾಗಿ ಅಳವಡಿಸಿಕೊಳ್ಳಬೇಕಾದ ಇಂದಿನ ಬಹು ಅಗತ್ಯವಿದೆ ಎಂದರು.

ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಈ ನಾಡಿನ ಸಂಸ್ಕೃತಿ ಪರಂಪರೆಯ ಜನಪದ ಕಲೆ-ಸಾಹಿತ್ಯ-ಸಂಗೀತ ಅತ್ಯಂತ ಸಹಕಾರಿಯಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಯ ಭರಾಟೆಯಲ್ಲಿ ನಮ್ಮ ಯುವ ಜನಾಂಗ ಕರಗಿಹೋಗುತ್ತಿದೆ. ಭಾರತೀಯ ಕಲಾ ಪರಂಪರೆ ವಿಶ್ವಕ್ಕೆ ಮಾದರಿಯಾಗಿದ್ದು, ಅದನ್ನು ಅಳವಡಿಸಿಕೊಳ್ಳುವ ಮೂಲಕ ಸಂಸ್ಕೃತಿ, ಸಂಸ್ಕಾರ ಉಳಿಸಿ ಬೆಳೆಸಿಕೊಂಡು ಸಾಗಬೇಕಾದ ಅಗತ್ಯವಿದೆ ಎಂದರು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಸಂಘ-ಸಂಸ್ಥೆಗಳು ಇತ್ತೀಚಿನ ವರ್ಷಗಳಲ್ಲಿ ನಮ್ಮ ಇತಿಹಾಸದ ಕಲೆಗಳನ್ನು ಪರಿಚಯಿಸುವ ಮೂಲಕ ಸಮಾಜಮುಖೀ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಶ್ಲಾಘನೀಯ ಕಾರ್ಯ. ಕಲೆ ಮತ್ತು ಕಲಾವಿದರನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಸ್ಕೃತಿ ಇಲಾಖೆ ಉತ್ತಮ ಕೆಲಸ ಮಾಡುತ್ತಿದೆ ಎಂದರು.

ವಿದ್ಯಾರ್ಥಿಗಳು ಪ್ರಾಥಮಿಕ ಹಂತದಲ್ಲಿಯೇ ಶಾಸ್ತ್ರೀಯ ಸಂಗೀತದ ಕಲಿಯುವ ಅಗತ್ಯವಿದೆ. ಭವಿಷ್ಯದ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿಯೂ ಪಠ್ಯದ ಭಾಗವಾಗಿ ಅಳವಡಿಕೆಯಾಗುವ ಸಾಧ್ಯತೆ ಇದೆ. ಅಂತಹ ಸಂದರ್ಭದಲ್ಲಿ ಇಂತಹ ಕಲಾವಿದರನ್ನು ಬಳಸಿಕೊಳ್ಳಬೇಕಾಗಿದೆ. ಶಿಕ್ಷಣ ಮತ್ತು ಸಂಗೀತ ಅಳವಡಿಸಿಕೊಂಡಿರುವ ರಜನಿ ಅವರ ಆಸಕ್ತಿ ಇತರರಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.

ನಗರಸಭಾ ಸದಸ್ಯೆ ಗಂಗಮ್ಮ ಹಾವನೂರು, ಜೆಸಿಐ ಅಧ್ಯಕ್ಷೆ ಪುಷ್ಪಾ ಬದಾಮಿ, ಇನ್ನರ್‌ವೀಲ್ ಕಾರ್ಯದರ್ಶಿ ಸುಮಾ ಹೊಟ್ಟಿಗೌಡ್ರ, ತಾಲೂಕು ಬ್ರಾಹ್ಮಣರ ಸಂಘದ ಅಧ್ಯಕ್ಷ ಶ್ರೀಪಾದ ಕುಲಕರ್ಣಿ, ಕ್ರೀಡಾ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ರಾಜು ಮೈಲಾರ, ಆನಂದ ಹುಲಬನ್ನಿ, ಪ್ರೊ| ಜಿ.ವಿ.ಕೋರಿ, ಸಂಜೀವ ಶಿರಹಟ್ಟಿ, ರೇಣುಕಾ ಕುರುಬರ, ಎಲ್.ಎಸ್‌.ಕರಿಗಾರ ಸೇರಿದಂತೆ ಮತ್ತಿತರರು ಇದ್ದರು. ನಂತರ ನಡೆದ ಕಲಾವಿದೆ ರಜನಿ ಕರಿಗಾರ ಅವರ ಶಾಸ್ತ್ರೀಯ-ಸುಗಮ ಸಂಗೀತ ಕಾರ್ಯಕ್ರಮ ಜನಮನ ರಂಜಿಸಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.