ಸೋಂಕು ನಿಯಂತ್ರಣಕೆ ಹಲವು ಕ್ರಮ-ತಂಡ ರಚನೆ

Team Udayavani, Mar 30, 2020, 6:01 PM IST

ಸೋಂಕು ನಿಯಂತ್ರಣಕೆ  ಹಲವು ಕ್ರಮ-ತಂಡ ರಚನೆ

ಸಾಂದರ್ಭಿಕ ಚಿತ್ರ

ಹಾವೇರಿ: ಜಿಲ್ಲೆಯ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಕೋವಿಡ್ 19 ವೈರಸ್‌ನಿಂದ ಸಂರಕ್ಷಣೆ ಕುರಿತಂತೆ ಜಾಗೃತಿ ಹಾಗೂ ಸುರಕ್ಷತಾ ಕಿಟ್‌ಗಳನ್ನು ವಿತರಿಸಲ ಕ್ರಮ ವಹಿಸುವಂತೆ ಕಾರ್ಮಿಕ ಇಲಾಖೆ ಹಾಗೂ ರೆಡ್‌ ಕ್ರಾಸ್‌ ಸಂಸ್ಥೆಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಾಯಿಸಿಕೊಂಡ ಕೋವಿಡ್ 19  ವಾರಿಯರ್ ಹಾಗೂ ರೆಡ್‌ ಕ್ರಾಸ್‌ ಸಂಸ್ಥೆಯ ಸ್ವಯಂ ಸೇವಕರ ಸಭೆ ನಡೆಸಿದ ಅವರು, ಕೊರೋನಾ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ. ಹಲವು ತಂಡಗಳನ್ನು ರಚಿಸಿದೆ. ಈ ತಂಡದೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.

ಜಿಲ್ಲೆಯ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಜಾಗೃತಿ ಹಾಗೂ ಕೋವಿಡ್ 19 ಸುರಕ್ಷತಾ ಕಿಟ್‌ಗಳನ್ನು ವಿತರಿಸಲು ಕಾರ್ಮಿಕ ಇಲಾಖೆಗೆ ಅನುದಾನ ಬಿಡುಗಡೆಯಾಗಿದೆ. ಈ ಕುರಿತಂತೆ ಕಾರ್ಯಕ್ರಮ ಆಯೋಜಿಸಿ ಸರ್ಕಾರದ ಮಾರ್ಗಸೂಚಿಯಂತೆ ಸ್ವಯಂ ಸೇವಕರನ್ನು ಬಳಸಿಕೊಂಡು ಜಾಗೃತಿಯೊಂದಿಗೆ ಪರಿಕರಗಳನ್ನು ವಿತರಿಸಲು ಕ್ರಮವಹಿಸುವಂತೆ ಸಲಹೆ ನೀಡಿದರು.

ಹೋಂ ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳ ಮೇಲೆ ನಿಗಾ, ಸಹಾಯವಾಣಿಗಳ ಕಾರ್ಯನಿರ್ವಹಣೆ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಕುರಿತಂತೆ ಹರಡುವ ಸುಳ್ಳು ಸುದ್ದಿಗಳನ್ನು ಗಮನಿಸಿ ನೈಜತೆಯನ್ನು ತಿಳಿಸುವ ನಿಟ್ಟಿನಲ್ಲಿ ಸ್ವಯಂಸೇವಕರು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ನೋಂದಾಯಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಕೋವಿಡ್ 19  ಸುರಕ್ಷತಾ ಕಿಟ್‌ ವಿತರಿಸಲು ಹಾಗೂ ಅವರಿಗೆ ಜಾಗೃತಿ ಮೂಡಿಸಲು 10 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಅಂದಾಜು 60 ಸಾವಿರ ಕಾರ್ಮಿಕರು ಜಿಲ್ಲೆಯಲ್ಲಿದ್ದಾರೆ. ಈ ಕಾರ್ಮಿಕರಿಗೆ ಕೋವಿಡ್ 19 ಸುರಕ್ಷತೆಗಾಗಿ ಮಾಸ್ಕ್, ಸೋಪು, ಸ್ಯಾನಿಟೈಸರ್‌ ಒಳಗೊಂಡು ಕಿಟ್‌ ವಿತರಿಸಲಾಗುವುದು. ಮನೆ ಮನೆಗೆ ಕೊರೊನಾ ಲಕ್ಷಣಗಳು, ಮುಂಜಾಗ್ರತಾ ಕ್ರಮಗಳ ಕುರಿತಂತೆ ಪ್ರಚಾರ ಸಾಮಗ್ರಿಗಳನ್ನು ಮುದ್ರಿಸಿ, ವಿತರಿಸಿ ಜಾಗೃತಿ ಮೂಡಿಸಲಾಗುವುದು ಎಂದು ವಿವರಿಸಿದರು.

ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ರೆಡ್‌ ಕ್ರಾಸ್‌ ಸಂಸ್ಥೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಕಾರ್ಯದರ್ಶಿ ಡಾ|ನಿಲೇಶ್‌, ಕಾರ್ಮಿಕ ಅಧಿಕಾರಿ ಕಲಾವತಿ ಸಾತೇನಹಳ್ಳಿ, ವಾರ್ತಾಧಿಕಾರಿ ಬಿ.ಆರ್‌. ರಂಗನಾಥ್‌, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ವಿವಿಧ ಸ್ವಯಂಸೇವಕರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.