ಬೆಳೆವಿಮೆ ವಿತರಣೆಗೆ ಒತ್ತಾಯಿಸಿ ಕಚೇರಿಗೆ ಬೀಗ
Team Udayavani, Dec 12, 2017, 2:13 PM IST
ಹಾನಗಲ್ಲ: 20 ಕೋಟಿ ರೂ. ಬೆಳೆವಿಮೆ ಹಣ ರೈತರ ಖಾತೆಗೆ ಜಮಾ ಆಗದಿರುವುದನ್ನು ಖಂಡಿಸಿ ರೈತರು ಕೃಷಿ ಇಲಾಖೆ ಕಚೇರಿಗೆ ಬೀಗ ಜಡಿದು ಸುಮಾರು 5 ಗಂಟೆಗಳ ಕಾಲ ಧರಣಿ ನಡೆಸಿದರು.
ಸೋಮವಾರ ರೈತರು ಪೂರ್ವ ನಿಗದಿಯಂತೆ ಧರಣಿ ಪ್ರಾರಂಭಿಸಿ, ಬೆಳಗ್ಗೆ 11ಕ್ಕೆ ಕೃಷಿ ಇಲಾಖೆ ಕಚೇರಿಗೆ ಬೀಗ ಹಾಕಿದರು. ನ. 7ರಂದು ಇದೇ ವಿಷಯಕ್ಕೆ ಸಂಬಂಧಿಸಿ ಮನವಿ ಸಲ್ಲಿಸಿದ ರೈತರು, ಡಿ. 11ರೊಳಗೆ ರೈತರ ಖಾತೆಗೆ ಬೆಳೆವಿಮೆ ಹಣ ಜಮಾ ಆಗದಿದ್ದರೆ ಕೃಷಿ ಇಲಾಖೆಗೆ ಬೀಗ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದರು. ಆದರೂ ಬೇಡಿಕೆ ಈಡೇರದ ಕಾರಣ ಸೋಮವಾರ ಕೃಷಿ ಇಲಾಖೆ ಕಚೇರಿಗೆ ಬೀಗ ಹಾಕಿ, ಧರಣಿ ನಡೆಸಿದರು.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಪ ಕೃಷಿ ನಿರ್ದೇಶಕ ಎಚ್. ಹುಲಿರಾಜ, ರೈತರು ಹಾಗೂ ಬೆಳೆವಿಮೆ ಇಲಾಖೆಯ
ಮೇಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರೂ ರೈತರು ಹಾಗೂ ಅಧಿಕಾರಿ ನಡುವೆ ಸುದೀರ್ಘ ವಾಗ್ವಾದ ನಡೆಯಿತು. ಅಂತಿಮವಾಗಿ ಇನ್ನು ಹತ್ತು ದಿನಗಳಲ್ಲಿ ರೈತರ ಖಾತೆಗೆ ಹಣ ಜಮಾ ಮಾಡುವ ಭರವಸೆ ನೀಡಿದರು. ಡಿ. 21ರೊಳಗಾಗಿ ರೈತರ ಖಾತೆಗಳಿಗೆ ಹಣ ಜಮಾ ಆಗದಿದ್ದರೆ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂಬ ಎಚ್ಚರಿಕೆ ನೀಡಿ ಧರಣಿ ಕೈ ಬಿಟ್ಟರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ, ಮಲ್ಲೇಶಪ್ಪ ಪರಪ್ಪನವರ, ರುದ್ರಪ್ಪ ಹಣ್ಣಿ, ವಾಸುದೇವ ಕಮಾಟಿ, ರಾಘವೇಂದ್ರ ಹುನಗುಂದ, ಚನಬಸಗೌಡ
ಪಾಟೀಲ, ಮಹೇಶ ವಿರುಪಣ್ಣನವರ, ಸೋಮಣ್ಣ ಜಡೆಗೊಂಡರ್, ಎಸ್.ಎಸ್.ಇನಾಂದಾರ, ಬಾಬಣ್ಣ ವರ್ದಿ, ಶ್ರೀಕಾಂತ ದುಂಡಣ್ಣನವರ, ಮಹಲಿಂಗಪ್ಪ ಅಕ್ಕಿವಳ್ಳಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.