ಪರಸ್ಪರ ಟೀಕೆಯೇ ಪ್ರಚಾರಾಸ್ತ್ರ


Team Udayavani, Apr 22, 2019, 3:10 PM IST

hav-0001

ಹಾವೇರಿ: ಈ ಬಾರಿಯ ಕ್ಷೇತ್ರದ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಎಲ್ಲ ರಾಷ್ಟ್ರೀಯ ಪಕ್ಷಗಳು ಸ್ಥಳೀಯ ವಿಚಾರಗಳನ್ನು ಕಡೆಗಣಿಸಿ, ಕೇಂದ್ರೀಯ ವಿಚಾರ, ಆರೋಪ, ಪ್ರತ್ಯಾರೋಪವನ್ನೇ ತಮ್ಮ ಪ್ರಮುಖ ಪ್ರಚಾರಾಸ್ತ್ರವನ್ನಾಗಿಸಿಕೊಂಡು ಗಮನಸೆಳೆದವು.

ಸ್ಥಳೀಯವಾಗಿ ಸಾಕಷ್ಟು ಸಮಸ್ಯೆಗಳಿದ್ದರೂ ಅವುಗಳ ಬಗ್ಗೆ ಚಕಾರ ಎತ್ತದ ಪ್ರಮುಖ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು, ಪರಸ್ಪರ ಟೀಕೆಯಲ್ಲಿಯೇ ಪ್ರಚಾರ ಪೂರ್ಣಗೊಳಿಸಿದವು. ಈ ನಡುವೆ ಕೆಲ ಪಕ್ಷೇತರರು ಹಾಗೂ ಪ್ರಾದೇಶಿಕ ಪಕ್ಷದ ಕೆಲ ಅಭ್ಯರ್ಥಿಗಳು ಸ್ಥಳೀಯ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿರುವುದು ಸಮಾಧಾನಕರ ಸಂಗತಿ. ಮುಖ್ಯವಾಗಿ ಪ್ರಚಾರದಲ್ಲಿ ಈ ಬಾರಿ ಕಾಂಗ್ರೆಸ್‌ ಪ್ರಧಾನಿ ಮೋದಿಯವರ ವಿರುದ್ಧ ಹರಿಹಾಯುವ ಕೆಲಸ ಮಾಡಿತು. ಇದರ ಜತೆಗೆ ಸರ್ಜಿಕಲ್ ಸ್ಟ್ರೈಕ್‌, ಯುದ್ಧದ ವಿಚಾರವೂ ಟೀಕಾಸ್ತ್ರವಾಗಿ ಪಯೋಗಿಸಿತು. ಇತ್ತ ಬಿಜೆಪಿ ಮೋದಿ ಸಾಧನೆ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಗ್ಗೆ ಟೀಕೆ, ಕಾಂಗ್ರೆಸ್‌ ಪಕ್ಷ ಹಾಗೂ ಅದರ ಪ್ರಣಾಳಿಕೆ ಟೀಕೆ ವಿಚಾರವನ್ನೇ ಪ್ರಚಾರದಲ್ಲಿ ಬಳಸಿಕೊಂಡಿತು.

ಕಾವು ಹೆಚ್ಚಿಸಿದ ಸಮಾವೇಶ: ಚುನಾವಣೆ ಘೋಷಣೆಗೆ 15-20 ದಿನ ಇರುವ ಪೂರ್ವದಲ್ಲಿಯೇ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ಪಕ್ಷಗಳು ತಲಾ ಒಂದೊಂದು ಸಮಾವೇಶಗಳನ್ನು ನಡೆಸಿದವು. ಈ ಸಮಾವೇಶಗಳೇ ಕ್ಷೇತ್ರದಲ್ಲಿ ಪ್ರಚಾರ ಕಾವಿನ ಕಿಡಿ ಹೊತ್ತಿಸಿದವು. ಹಾವೇರಿಯಲ್ಲಿ ಬಿಜೆಪಿ ಫೆಬ್ರುವರಿ 25ರಂದು ವಿಜಯ ಸಂಕಲ್ಪ ಯಾತ್ರೆ ಸಮಾವೇಶ ಸಂಘಟಿಸಿತ್ತು. ಈ ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆದಿಯಾಗಿ ಎಲ್ಲ ರಾಜ್ಯ ಮುಖಂಡರು ಭಾಗಿಯಾಗಿ ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ಮಾಡಿದರು.

ಅದೇ ರೀತಿ ಮಾರ್ಚ್‌ 9ರಂದು ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಪರಿವರ್ತನಾ ರ್ಯಾಲಿಗೆ ಆಗಮಿಸಿ, ಮೋದಿ ವಿರುದ್ಧ ವಾಕ್ಸಮರ ನಡೆಸಿದರು. ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ಕ್ಷೇತ್ರದಲ್ಲಿ ಚುನಾವಣಾ ಕಾವು ಪಡೆದುಕೊಂಡಿತ್ತು. ಬಳಿಕ ಸ್ಟಾರ್‌ ಪ್ರಚಾರಕರು, ಪಕ್ಷದ ನಾಯಕರಿಂದ ರೋಡ್‌ ಶೋ, ಪ್ರಚಾರ ಸಭೆಗಳು, ಮನೆ ಭೇಟಿ ಪ್ರಚಾರ ನಡೆಯಿತು.

ಮೋದಿ-ರಾಹುಲ್ ಸ್ಪರ್ಧೆ: ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಚಾರ ವೈಖರಿ ನೋಡಿದರೆ ಸ್ಪರ್ಧೆ ಕಣದಲ್ಲಿರುವ ಅಭ್ಯರ್ಥಿಗಳ ನಡುವೆ ನಡೆಯುತ್ತಿಲ್ಲ. ಬದಲಾಗಿ ಮೋದಿ ಹಾಗೂ ಕಾಂಗ್ರೆಸ್‌ ನಡುವೆ ಸ್ಪರ್ಧೆ ನಡೆಯುತ್ತಿರುವಂತೆ ಭಾಸವಾಯಿತು. ಕಾಂಗ್ರೆಸ್‌ನವರು ಮೋದಿಯನ್ನೇ ಗುರಿಯಾಗಿಸಿಕೊಂಡು ಟೀಕಾಸ್ತ್ರ ಬಿಟ್ಟರೆ, ಬಿಜೆಪಿಯವರು ಈ ಹಿಂದೆ ಆಡಳಿತ ಮಾಡಿದ ಕಾಂಗ್ರೆಸ್‌ ಸರ್ಕಾರ ಮತ್ತು ರಾಹುಲ್ ಗಾಂಧಿಯನ್ನು ಮುಖ್ಯವಾಗಿಸಿಕೊಂಡು ಟೀಕಾ ಪ್ರಹಾರ ಮಾಡಿದರು. ಹೀಗಾಗಿ ಕಣದಲ್ಲಿ ಮೋದಿ-ರಾಹುಲ್ ಅವರೇ ಸ್ಪರ್ಧೆಗೆ ನಿಂತಂಥ ಅನುಭವ ನೀಡಿತು.

‘ಮೋದಿ ಮೊತ್ತೂಮ್ಮೆ’, ‘ದೇಶದ ರಕ್ಷಣೆಗೆ ಮೋದಿ ಅವಶ್ಯ’ ಎಂದು ಬಿಜೆಪಿಯವರು ಪ್ರಚಾರ ಮಾಡಿದರೆ, ಕಾಂಗ್ರೆಸ್‌ನವರು ‘ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್‌ ಅವಶ್ಯ’, ‘ಕೋಮುವಾದಿ ಬಿಜೆಪಿಯನ್ನು ದೂರವಿಟ್ಟರೆ ಮಾತ್ರ ದೇಶದಲ್ಲಿ ಐಕ್ಯತೆ, ಸರ್ವ ಜನಾಂಗದ ನೆಮ್ಮದಿ ಸಾಧ್ಯ’ ಎಂದು ಪ್ರಚಾರ ಮಾಡಿದರು.

ಸ್ಟಾರ್‌ ಪ್ರಚಾರಕರು: ಕ್ಷೇತ್ರಕ್ಕೆ ಬಿಜೆಪಿಯಿಂದ ಚಲನಚಿತ್ರ ನಟಿಯರಾದ ಮಾಳವಿಕಾ, ಶೃತಿ, ಮುಖಂಡರಾದ ಯಡಿಯೂರಪ್ಪ, ಜಗದೀಶ ಶೆಟ್ಟರ್‌, ಬಸನಗೌಡ ಪಾಟೀಲ ಯತ್ನಾಳ, ಬಸವರಾಜ ಬೊಮ್ಮಾಯಿ ಹೀಗೆ ಅನೇಕರು ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಿದರು. ಕಾಂಗ್ರೆಸ್‌ನಿಂದ ಸಿದ್ದರಾಮಯ್ಯ, ಸಿ.ಎಂ. ಇಬ್ರಾಹಿಂ, ಎಚ್.ಕೆ. ಪಾಟೀಲ, ಜಮೀರ್‌ ಅಹ್ಮದ್‌, ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹೀಗೆ ಇನ್ನಿತರರು ಆಗಮಿಸಿ ಪ್ರಚಾರದಲ್ಲಿ ತೊಡಗಿಕೊಂಡು ಭಾಷಣದ ಮೂಲಕ ಎದುರಾಳಿಗಳಿಗೆ ಟಾಂಗ್‌ ಕೊಟ್ಟರು.

ಯೋಜನೆ, ಯೋಚನೆ ಇಲ್ಲ..
ಕ್ಷೇತ್ರದ ಅಭ್ಯರ್ಥಿಗಳು ತಮ್ಮ ವಿಚಾರ, ಯೋಜನೆ, ಆಲೋಚನೆಗಳ ಬಗ್ಗೆ ಜನರಿಗೆ ತಿಳಿಸುವ ಬದಲಿಗೆ ಎದುರಾಳಿ ಪಕ್ಷ, ಅಭ್ಯರ್ಥಿ ವಿರುದ್ಧದ ಆರೋಪಗಳೇ ಹೆಚ್ಚು ಪ್ರಚಾರದಲ್ಲಿ ಪ್ರತಿಬಿಂಬಿಸಿದವು. ಪ್ರಚಾರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮ ಪಕ್ಷ ಬಿಡುಗಡೆಗೊಳಿಸಿದ ಪ್ರಣಾಳಿಕೆ ಪತ್ರ, ತಮ್ಮ ಪಕ್ಷದ ಸರ್ಕಾರಗಳು ಅಧಿಕಾರದಲ್ಲಿದ್ದಾಗ ಜಾರಿಗೆ ತಂದಿದ್ದ ಯೋಜನೆಗಳ ಕರಪತ್ರಗಳನ್ನು ಮತದಾರರಿಗೆ ಹಂಚುವುದೇ ಪ್ರಚಾರವಾಗಿಸಿಕೊಂಡವು.

ಸಮಸ್ಯೆಗಳ ಪ್ರಸ್ತಾಪವಿಲ್ಲ..
ಕ್ಷೇತ್ರ ಕೃಷಿ ಪ್ರಧಾನವಾಗಿದ್ದು ಕೃಷಿಗೆ ನೀರಾವರಿ ಯೋಜನೆ, ಕ್ಷೇತ್ರದ ಬಹುತೇಕ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು ಅವುಗಳ ನಿವಾರಣೆಗೆ ವಿಶೇಷ ಯೋಜನೆ, ಬರಪೀಡಿತ ಜಿಲ್ಲೆಗೆ ವಿಶೇಷ ಅನುದಾನ, ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆ ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಯಾವ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಯೂ ಚಕಾರ ಎತ್ತದೆ ಇರುವುದು ವಿಷಾದನೀಯ.

ಒಟ್ಟಾರೆ ಈ ಬಾರಿಯ ಪ್ರಚಾರದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳೇ ಸ್ಥಾನ ಜಾಸ್ತಿಯಾಗಿ, ಅಭಿವೃದ್ಧಿ ವಿಚಾರನಾಸ್ತಿಯಾಯಿತು.

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.