ಜಲ್ ಜೀವನ ಮಿಶನ್ ಆರಂಭ
Team Udayavani, Apr 20, 2020, 6:17 PM IST
ಹಾನಗಲ್ಲ: ಹಳ್ಳಿ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ನಲ್ ಸೆ ಜಲ್ ಯೋಜನೆಯಡಿ, ಜಲ್ ಜೀವನ ಮಿಶನ್ ಆರಂಭಿಸಿದ್ದು, ಈಗಾಗಲೇ ತಾಲೂಕಿನಲ್ಲಿ 11998 ಮನೆಗಳನ್ನು ಗುರುತಿಸಿ ಆನ್ ಲೈನ್ ಎಂಟ್ರಿ ಮಾಡಲಾಗಿದೆ ಎಂದು ಶಾಸಕ ಸಿ.ಎಂ. ಉದಾಸಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2024ರ ವೇಳೆಗೆ ಎಲ್ಲ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶ ಕೇಂದ್ರ ಸರಕಾರದ್ದಾಗಿದೆ. ತಾಲೂಕಿನಲ್ಲಿ 17285 ಮನೆಗಳನ್ನು ಗುರುತಿಸಿದ್ದು, 11998 ಮನೆಗಳ ಆನ್‌ಲೈನ್ ಎಂಟ್ರಿ ಆಗಿದೆ. ಹಾವೇರಿ ಜಿಲ್ಲೆಯಲ್ಲಿ 103862 ಮನೆಗಳನ್ನು ಗುರುತಿಸಲಾಗಿದೆ. ಈ ನಲ್ಲಿಗಳಿಗೆ ಮೀಟರ್ ಅಳವಡಿಸಿ ನೀರು ಪೂರೈಸಲಾಗುತ್ತದೆ. ರಾಜ್ಯ ಸರಕಾರ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೊಂದಾಯಿತ ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗೆ 2000 ರೂ ಜಮೆ ಮಾಡುತ್ತಿದ್ದು, ತಾಲೂಕಿನಲ್ಲಿ ಒಟ್ಟು 5015 ನೊಂದಣಿಯಾದ ಫಲಾನುಭವಿಗಳಿದ್ದು, ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ನೋಂದಣಿ ಸಂಖ್ಯೆ, ಖಾತೆ ಸಂಖ್ಯೆ, ಐಎಫ್‌ಎಸ್‌ಸಿ ಕೋಡ್ ಮತ್ತು ಆಧಾರ ಸಂಖ್ಯೆಯೊಂದಿಗೆ ದಾಖಲಾತಿಗಳನ್ನು (ಮೊ.ನಂ. 9741614490) ಈ ಸಂಖ್ಯೆಗೆ ವಾಟ್ಸ್‌ಆ್ಯಪ್ ಮಾಡಿದಲ್ಲಿ ನೇರವಾಗಿ ನಿಮ್ಮ ಖಾತೆಗೆ 2000 ರೂ. ಮೊತ್ತ ಜಮೆಯಾಗಲಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ತಾಪಂ ಆವರಣದಲ್ಲಿ ಕಾರ್ಮಿಕ ಇಲಾಖೆ ಸೇವಾ ಸಿಂದು ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯಿರಿ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.