ಸಮಸಮಾಜ ನಿರ್ಮಾಣಕ್ಕೆ ದಾಸ ಸಾಹಿತ್ಯ ಸಂದೇಶ
Team Udayavani, Nov 16, 2019, 1:03 PM IST
ಹಾವೇರಿ: ಜಿಲ್ಲೆಯಲ್ಲಿ ಉಪಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಶುಕ್ರವಾರ ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನಕದಾಸರು 15ನೇ ಶತಮಾನದ ಶ್ರೇಷ್ಠಕವಿಗಳು, ಚಿಂತಕರು, ಸಮಾಜ ಸುಧಾರಕರು ಹಾಗೂ ನಾಡಿನ ಸಂಸ್ಕೃತಿಯ ನಿರ್ಮಾತೃಗಳು. ಸಮಾಜದ ಮೌಡ್ಯ ತೊಡೆದುಹಾಕಿ ಮನುಕುಲ ಒಂದೇ ಎಂಬ ಸಮಾನತೆಯ ಮಂತ್ರ ಸಾರಿದ ಹರಿಕಾರರು. ಕನಕರ ತತ್ವ ಆದರ್ಶಗಳು ನಮಗೆ ದಾರಿ ದೀಪವಾಗಲಿ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಮೇಶ ದೇಸಾಯಿ ಮಾತನಾಡಿ, ದಾಸ ಪರಂಪರೆಯಲ್ಲಿ ಕನಕದಾಸರ ಕೊಡುಗೆ ಅಪಾರ. ಸಮಾಜದಲ್ಲಿರುವ ಮೌಡ್ಯತೆ, ಅಹಂಕಾರ ತೊಡೆದು ಜನರಿಗೆ ಜ್ಞಾನ, ಸೌಹಾರ್ದತೆ ನೀಡುವಲ್ಲಿ ತಮ್ಮ ಜೀವನ ಮುಡುಪಾಗಿಟ್ಟವರು. ಇಂತಹ ಜಗತ್ ಪ್ರಖ್ಯಾತ ವ್ಯಕ್ತಿಗಳು ನಮ್ಮ ಜಿಲ್ಲೆಯಲ್ಲಿ ಜನಿಸಿದ್ದು ನಮ್ಮ ಪುಣ್ಯ ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಸಮಾಜದಲ್ಲಿ ಜಾತಿ ವ್ಯವಸ್ಥೆ ಇನ್ನೂ ಜೀವಂತವಾಗಿವೆ. ಆದರೆ, ಕನಕದಾಸರು ಮೇಲು ಕೀಳು ಎಂಬ ಜಾತಿ ಮತ ಸಿದ್ಧಾಂತದ ವಿರುದ್ಧ ಹೋರಾಡಿ ಎಲ್ಲ ಜನಾಂಗದವರ ಮನದಲ್ಲಿ ಆದರ್ಶದ ಬೀಜ ಬಿತ್ತಿದ್ದಾರೆ. ಸಮಸಮಾಜದ ಪ್ರತಿಪಾದನೆಯ ಕನಕರ ಸಿದ್ಧಾಂತಗಳ ಪಾಲನೆ ನಮ್ಮೆಲ್ಲರ ಕರ್ತವ್ಯ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಕುರುಬ ಸಂಘದ ಅಧ್ಯಕ್ಷ ಮುದಕಣ್ಣನವರ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.