ಕನಕದಾಸರು ಸರಳ ಬದುಕಿನ ಸಂದೇಶ ವಾಹಕರು


Team Udayavani, Dec 4, 2020, 1:31 PM IST

ಕನಕದಾಸರು ಸರಳ ಬದುಕಿನ ಸಂದೇಶ ವಾಹಕರು

ಹಾನಗಲ್ಲ: ಇನ್ನೊಬ್ಬರ ಹಸಿವುನೋವನ್ನು ತಮ್ಮದೆಂದು ಸಂಕಟ ಪಡುವಂಥ ದಾಸಶ್ರೇಷ್ಠ ಕನಕದಾಸರು ಪರಿವರ್ತನೆಯ ಹರಿಕಾರರಾಗಿ, ಸಮಾನತೆ ಪಾಠ ಹೇಳುವ ಶಿಕ್ಷಕರಾಗಿ, ಸರಳತೆಯ ಬದುಕನ್ನು ಬದುಕುವ ಸಂದೇಶ ವಾಹಕರಾಗಿದ್ದಾರೆ ಎಂದು ಸಂಸದ ಶಿವಕುಮಾರ ಉದಾಸಿ ತಿಳಿಸಿದ್ದಾರೆ.

ಗುರುವಾರ ಕನಕದಾಸರ 533 ನೇ ಜಯಂತ್ಯುತ್ಸವದ ಅಂಗವಾಗಿಸಂದೇಶ ನೀಡಿರುವ ಅವರು,ಜಾತಿ ವ್ಯವಸ್ಥೆ ವಿರುದ್ಧ 15-16ನೇ ಶತಮಾನದಲ್ಲಿ ತಮ್ಮ ಕೀರ್ತನೆಗಳಮೂಲಕ ಸಮರ ಸಾರಿದ ಭಕ್ತಕನದಾಸರು, ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದನೆಲೆಯೇನಾದರೂ ಬಲ್ಲಿರಾ ಎಂಬ ಪ್ರಶ್ನೆಯ ಮೂಲಕ ಜಾತೀಯತೆಯ ಸಂಕುಚಿತ ಭಾವದಿಂದ ಹೊರ ತಂದು ಜಾತ್ಯತೀತತೆಯ ಮಾನವೀಯತೆಯಲ್ಲಿರುವ ಸಮತಾ ಭಾವವನ್ನು ಎಚ್ಚರಿಸಿದ್ದಾರೆ.

ಪ್ರತಿಯೊಬ್ಬರೂ ಜಾತಿ, ಮತ, ಪಂಥದಿಂದ ಹೊರಬಂದು ವಿಶ್ವಮಾನವರಾಗಿ ಬಾಳಬೇಕು ಎಂಬುದುಕನಕದಾಸರ ಒಡಲ ಹಸಿವಾಗಿತ್ತು ಎಂದಿದ್ದಾರೆ. ಇಂತಹ ಮಹನೀಯರಜಯಂತಿ ಆಚರಣೆಗಳು ಕೇವಲ ಒಂದು ಜಾತಿಗೆ ಸೀಮಿತವಾಗಬಾರದು. ಎಲ್ಲ ಮಹನೀಯರು, ಸಂತರು, ಶರಣರು ಸಮಾಜದ ಒಳಿತಿಗಾಗಿಯೇ ತಮ್ಮ ಸಂದೇಶಗಳನ್ನು ಸಾರಿದ್ದಾರೆ. ಇವರೆಲ್ಲರ ಜಯಂತಿಗಳಿಗೆ ಎಲ್ಲ ಧರ್ಮ, ಸಮಾಜದವರು ಪಾಲ್ಗೊಂಡಾಗ ಮಾತ್ರ ಮಹಾತ್ಮರ ಜಯಂತಿಗಳಿಗೆ ನಿಜವಾದ ಅರ್ಥ ಬರಲು ಸಾಧ್ಯ ಎಂದು ತಿಳಿಸಿದ್ದಾರೆ.

ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಜಯಂತಿ :

ರಾಣಿಬೆನ್ನೂರ: ನಗರದ ಕೆಎಲ್‌ಇ ಸಂಸ್ಥೆಯ ರಾಜರಾಜೇಶ್ವರಿ ವಿದ್ಯಾ ಸಂಸ್ಥೆಯಲ್ಲಿ ಕನಕದಾಸರ 533ನೇ ಜಯಂತಿ ಆಚರಿಸಲಾಯಿತು.

ಸ್ಥಾನಿಕ ಆಡಳಿತ ಮಂಡಳಿ ಉಪಕಾರ್ಯಾಧ್ಯಕ್ಷ ವಿ.ಪಿ. ಲಿಂಗನಗೌಡರ ಮಾತನಾಡಿ, ಕೇವಲ ಆಚರಣೆಯಿಂದ ಪ್ರಯೋಜನವಿಲ್ಲ. ಮಹಾಪುರುಷಕನಕದಾಸರ ತತ್ವ, ಆದರ್ಶಗಳನ್ನು ಸಮಾಜ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆಕನಕದಾಸರ ತತ್ವ, ಆದರ್ಶಗಳನ್ನು ತಿಳಿಸಲು ಹೇಳಿದರು.

ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ನಾರಾಯಣ ನಾಯಕ,ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎಫ್‌.ಎನ್‌ ಗುಡಿಕಟ್ಟಿ, ಉಪಪ್ರಾಚಾರ್ಯ ಪ್ರಲ್ಲಾದ ಪಿ., ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಸುಧಾ ಕೋಟಿಹಾಳ ಹಾಗೂ ಸಿಬ್ಬಂದಿ ಇದ್ದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನಕದಾಸ ಜಯಂತಿ :

ಹಾವೇರಿ: ಜಿಲ್ಲಾಡಳಿತ ಹಾಗೂ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ,

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶಶಿಕಲಾ ಹುಡೇದ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ವಾರ್ತಾಧಿಕಾರಿ ಬಿ.ಆರ್‌.ರಂಗನಾಥ್‌, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಜಗದೀಶ ಹೆಬ್ಬಳ್ಳಿ, ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ ಸೇರಿದಂತೆ ವಿವಿಧ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.