ಲೋಕೋಪಯೋಗಿ ಅಧಿಕಾರಿಗಳಿಗೆ ತರಾಟೆ


Team Udayavani, Mar 13, 2021, 4:15 PM IST

ಲೋಕೋಪಯೋಗಿ ಅಧಿಕಾರಿಗಳಿಗೆ ತರಾಟೆ

ಹಾವೇರಿ: ತಾಲೂಕಿನ ರಸ್ತೆಗಳನ್ನು ದುರಸ್ತಿ ಮಾಡಿಸದೇ ಕೇವಲ ಕೆಂಪು ಮಣ್ಣು ಹಾಕಿ ಗುಂಡಿ ಮುಚ್ಚುವ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಮಾಡಿದೆ ಎಂದು ಶಾಸಕರಾದ ನೆಹರು ಓಲೇಕಾರ ಹಾಗೂ ವಿರೂಪಾಕ್ಷಪ್ಪ ಬಳ್ಳಾರಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆ‌ಗೆದುಕೊಂಡರು.

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ತ್ರೈಮಾಸಿಕ ಕೆಡಿಪಿಸಭೆಯಲ್ಲಿ ಪಾಲೊಂಡು ಮಾತನಾಡಿದ ಅವರು, ತಾಲೂಕಿನ ರಸ್ತೆಗಳು ಹದಗೆಟ್ಟಿದ್ದರೂ ಲೋಕೋಪಯೋಗಿ ಇಲಾಖೆ ಅವುಗಳ ದುರಸ್ತಿಗೆ ನಿರ್ಲಕ್ಷ್ಯ ತೋರುತ್ತಿದೆ. ತೆಗ್ಗು-ಗುಂಡಿ ಬಿದ್ದಿರುವ ರಸ್ತೆಗಳಿಗೆ ಅಧಿಕಾರಿಗಳು ಕೇವಲ ಕೆಂಪು ಮಣ್ಣು ಹಾಕಿ ಕೈತೊಳೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿಕೂಡಲೇ ರಸ್ತೆಗಳಲ್ಲಿರುವ ತಗ್ಗು, ಗುಂಡಿಗಳನ್ನು ಸಮರ್ಪಕವಾಗಿ ಮುಚ್ಚಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಈ ವೇಳೆ ಜಿಪಂ ಸದಸ್ಯರಾದ ವಿರೂಪಾಕ್ಷಪ್ಪ ಕಡ್ಲಿ ಹಾಗೂ ಸಿದ್ದರಾಜ ಕಲಕೋಟಿ ಮಾತನಾಡಿ, ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳದಿದ್ದರೆ ರಸ್ತೆ ಕಾಮಗಾರಿ ನಡೆಸಿದ ಗುತ್ತಿಗೆದಾರರಬಿಲ್‌ ತಡೆಹಿಡಿಯುವಂತೆ ಲೋಕೋಪಯೋಗಿ ಅಧಿಕಾರಿಗಳಿಗೆ ಒತ್ತಾಯಿಸಿದರು.

ಲೋಕೋಪಯೋಗಿ ಇಲಾಖೆ ಅಧಿಕಾರಿ ಮಾತನಾಡಿ, ರಸ್ತೆಗಳಲ್ಲಿ ಬಿದ್ದಿರುವ ತಗ್ಗು, ಗುಂಡಿಗಳನ್ನು ಮುಚ್ಚಿಸಲು ಕೂಡಲೇ ಕ್ರಮ ಕೈಗೊಳ್ಳುವುದಾಗಿಸಭೆಗೆ ತಿಳಿಸಿದರು. ಅತಿವೃಷ್ಟಿಯಿಂದಾಗಿ ತಾಲೂಕಿನ ದೇವಗಿರಿ ಗ್ರಾಮದಲ್ಲಿನ ಬಿದ್ದಿರುವ 1204 ಮನೆಗಳಲ್ಲಿ 677 ಮನೆಗಳ ಸರ್ವೆà ಕಾರ್ಯ ನಡೆಸಿದ್ದು, ಬಾಕಿಇರುವ ಮನೆಗಳ ಸರ್ವೇ ಕಾರ್ಯವನ್ನು ಶೀಘ್ರವೇಪೂರ್ಣಗೊಳಿಸಬೇಕು ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸರ್ವೇ ಇಲಾಖೆ ಅಧಿಕಾರಿಗೆ ಸೂಚಿಸಿದರು. ಈಗಾಗಲೇ ಸರ್ವೇ ಆಗಿರುವ ಮನೆಗಳಿಗೆ ಪಟ್ಟಾ ವಿತರಿಸಲು ಕ್ರಮ ಕೈಗೊಳ್ಳವಂತೆ ತಹಶೀಲ್ದಾರ್‌ರಿಗೆ ಸೂಚಿಸಿದರು.

ಶಾಸಕ ನೆಹರು ಓಲೇಕಾರ ಅವರು ತುಂಗಾ ಮೇಲ್ದಂಡೆ ಯೋಜನೆಗೆ ಸಂಬಂಧಪಟ್ಟಂತೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಕೇಳಿದ ಸಂದರ್ಭದಲ್ಲಿ, ಇಲಾಖೆ ಅಧಿಕಾರಿ ಸಮರ್ಪಕ ಉತ್ತರ ನೀಡಲಿಲ್ಲ. ಇದರಿಂದ ಗರಂ ಆದ ಶಾಸಕರು, ಸಭೆಗೆ ಬರುವಾಗಮಾಹಿತಿ ಇಟ್ಟುಕೊಂಡು ಬರಬೇಕು. ಬೀಗರ ಮನೆಗೆ ಬಂದಂತೆ ಬರುವುದಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಅರಣ್ಯ ಇಲಾಖೆಗೆ ಸಂಬಂಧಪಟ್ಟಂತೆ ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ,ರಸ್ತೆ ಬದಿಯಲ್ಲಿ ಉಪಯೋಗಕ್ಕೆ ಬಾರದ ಸಸಿಗಳನ್ನು ನೆಡುವ ಬದಲು ಜಂಬು ನೇರಳೆ ಸೇರಿದಂತೆ ವಿವಿಧಹಣ್ಣಿನ ಸಸಿಗಳನ್ನು ನೆಟ್ಟರೆ ರೈತರು ಸಹ ಹೆಚ್ಚಿನ ಕಾಳಜಿ ವಹಿಸಿ ಸಂರಕ್ಷಿಸಿಕೊಳ್ಳುತ್ತಾರೆ. ಅಲ್ಲದೇ, ತಾಲೂಕಿನ ಶಾಲೆಗಳಿಗೆ ಸಸಿಗಳನ್ನು ವಿತರಿಸಬೇಕು. ಅರಣ್ಯ ಇಲಾಖೆಗೆ ತಾಲೂಕಿನ ಶಾಲೆಗಳ ಪಟ್ಟಿ ನೀಡುವಂತೆ ಬಿಇಒ ಎಂ.ಎಚ್‌.ಪಾಟೀಲ ಅವರಿಗೆ ಸೂಚಿಸಿದರು.

ಸಭೆಯಲ್ಲಿ ಕೃಷಿ, ತೋಟಗಾರಿಕೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ಜಿಪಂ ಸದಸ್ಯರಾದ ಸಿದ್ದರಾಜ ಕಲಕೋಟಿ,ವಿರೂಪಾಕ್ಷಪ್ಪ ಕಡ್ಲಿ, ಶಶಿಕಲಾ ಲಮಾಣಿ, ತಾಪಂ ಅಧ್ಯಕ್ಷೆ ಕಮಲವ್ವ ಪಾಟೀಲ, ಉಪಾಧ್ಯಕ್ಷೆ ಸುವರ್ಣ ಸುಕಳಿ, ತಹಶೀಲ್ದಾರ್‌ ಸ್ವಾದಿ, ತಾಪಂ ಇಒ ಡಿ.ಬಸವರಾಜ ಸೇರಿದಂತೆ ಇತರರು ಭಾಗವಹಿಸಿದ್ದರು.

ಮೀನುಗಾರಿಕೆ ಕೆರೆಗಳ ಟೆಂಡರ್‌ನಲ್ಲಿ ಅಕ್ರಮ ಹಗರಣ ;

ಮೀನುಗಾರಿಕೆ ಕೆರೆಗಳ ಟೆಂಡರ್‌ನಲ್ಲಿ ದೊಡ್ಡ ಹಗರಣವೇ ಇದೆ. ಈಗಲೂ ಹಳೆಯ ದರಕ್ಕೆ ಟೆಂಡರ್‌ ನೀಡುತ್ತಿರುವುದರಿಂದಇಲಾಖೆಗೆ ಸಾಕಷ್ಟು ನಷ್ಟವಾಗುತ್ತಿದೆ. ಪ್ರಸ್ತುತ ದರಕ್ಕೆ ಟೆಂಡರ್‌ ನೀಡಿದರೆ ಇಲಾಖೆ ಅಧಿಕಾರಿಗಳ ಸಂಬಳ ತೆಗೆದು 10-12 ಲಕ್ಷ ರೂ. ಉಳಿಸಬಹುದಾಗಿದೆ. ಈ ಬಗ್ಗೆ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಚಿಂತಿಸಬೇಕು.ಕೆರೆ ಟೆಂಡರ್‌ ಹಗರಣದ ಕುರಿತು ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.