ಬ್ಯಾಡಗಿಯಲ್ಲಿ ಮೆಣಸಿನಕಾಯಿ ಗುಣಮಟ್ಟ ಪರೀಕ್ಷೆಗೆ ಪ್ರಯೋಗಾಲಯ: ಎಸ್.ಟಿ.ಸೋಮಶೇಖರ್
Team Udayavani, Jul 15, 2020, 2:57 PM IST
ಬ್ಯಾಡಗಿ (ಹಾವೇರಿ): ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಗುಣಮಟ್ಟ ಪರೀಕ್ಷೆಗೆ ಪ್ರಯೋಗಾಲಯ ಸ್ಥಾಪಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಬ್ಯಾಡಗಿ ಪಟ್ಟಣದ ಮೆಣಸಿನಕಾಯಿ ಮಾರುಕಟ್ಟೆಗೆ ಬುಧವಾರ ಭೇಟಿ ನೀಡಿದ ಅವರು, ಪ್ರಯೋಗಾಲಯ ಮಾಡುವುದರಿಂದ ಇಲ್ಲಿಯೇ ಮೆಣಸಿನಕಾಯಿ ಗುಣಮಟ್ಟ ಪರೀಕ್ಷಿಸಿಕೊಳ್ಳಲು ಅನುಕೂಲವಾಗಲಿದೆ. ಇದು ರೈತರ ಹಿತದೃಷ್ಟಿಯಿಂದ ಹೆಚ್ಚು ಉಪಯುಕ್ತವಾಗಲಿದೆ. ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯ ಮೂಲಸೌಲಭ್ಯಕ್ಕೆ ಈಗಾಗಲೇ 10 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದು, ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ ಎಂದರು.
ರಾಜ್ಯದಲ್ಲಿ ಎಪಿಎಂಸಿ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ರಾಜ್ಯಾದ್ಯಂತ ಸುಮಾರು 800 ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲವಾಗಿದೆ. ಇದು ಕೇಂದ್ರ ಸರ್ಕಾರದ ಉತ್ತಮ ಯೋಜನೆಯಾಗಿದೆ. ರೈತ ತಾನು ಬೆಳೆದ ಬೆಳೆಯನ್ನು ಮುಕ್ತವಾಗಿ ಎಲ್ಲಿ ಬೇಕಾದರೂ ಮಾರಾಟ ಮಾಡುವ ಮುಕ್ತ ಹಕ್ಕು ಹೊಂದಿದ್ದು, ಸ್ಪರ್ಧಾತ್ಮಕ ಬೆಲೆಗೆ ಮಾರಾಟ ಮಾಡಬಹುದಾಗಿದೆ. ಈ ಮೂಲಕ `ನಮ್ಮ ಬೆಳೆ ನಮ್ಮ ಹಕ್ಕು ‘ಎಂಬುದು ರೈತರ ಮಂತ್ರವಾಗಿದೆ. ಅವರ ಬೆಳೆಗಳಿಗೆ ಅವರೇ ಬೆಲೆಯನ್ನು ನಿರ್ಧರಿಸುವ ಕಾಲ ಈಗ ಬಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.