ನೀರಿನ ಮೂಲ ಉಳಿಸಿಕೊಳ್ಳಲು ಕೆರೆಕಟ್ಟೆಗಳ ಅಭಿವೃದ್ಧಿ
ಹೆಚ್ಚು ಉದ್ಯೋಗ-ನೈಸರ್ಗಿಕ ಜಲ ಸಂರಕ್ಷಣೆ ರೋಜಗಾರ್ ಗುರಿ
Team Udayavani, May 15, 2019, 1:41 PM IST
ಹಾವೇರಿ: ಕರಜಗಿಯಲ್ಲಿ ತಾಪಂ ಇಒ ಅನ್ನಪೂರ್ಣ ಕಚ್ಚಾ ಕಾಲುವೆ ಕಾಮಗಾರಿ ವೀಕ್ಷಿಸಿದರು.
ಹಾವೇರಿ: ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಮೂಲಗಳನ್ನು ಉಳಿಸಿಕೊಳ್ಳಲು ಕೆರೆಕಟ್ಟೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಜಲಾಮೃತ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ತನ್ಮೂಲಕ ನೈಸರ್ಗಿಕ ಜಲ ಸಂರಕ್ಷಣೆಗೆ ಮಾಡಲು ನಿರ್ಧರಿಸಲಾಗಿದೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಅನ್ನಪೂರ್ಣ ಮುದುಕಮ್ಮನವರ ಹೇಳಿದರು.
ತಾಲೂಕಿನ ಕರಜಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೋಜಗಾರ್ ದಿನಾಚರಣೆ ಆಚರಿಸಿ ಕಚ್ಚಾ ಕಾಲುವೆ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.
ಈ ವರ್ಷ ತಾಲೂಕಿನಲ್ಲಿ ನೈಸರ್ಗಿಕ ಜಲ ಸಂರಕ್ಷಣೆಗೆ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಲು ನಿರ್ಧರಿಸಿದ್ದು, ಇದರಿಂದ ಎರಡು ಬಗೆಯ ಪ್ರಯೋಜನವಾಗಲಿದೆ. ಜಲಮೂಲಗಳನ್ನು ಅಭಿವೃದ್ಧಿಪಡಿಸುವುದು ಒಂದೆಡೆಯಾದರೆ ಮತ್ತೂಂದಡೆ ಹೆಚ್ಚು ಜನರಿಗೆ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ಕೊಟ್ಟಂತಾಗಲಿದೆ. ಅಲ್ಲದೇ ಕೂಲಿಕಾರರು ಉದ್ಯೋಗಕ್ಕಾಗಿ ಬೇರೆಡೆ ವಲಸೆ ಹೋಗುವುದನ್ನು ತಪ್ಪಿಸಿದಂತಾಗುತ್ತದೆ ಎಂದರು.
ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ದೊರೆಯುವಂತೆ ಮಾಡಲು ತಾಲೂಕು ಪಂಚಾಯಿತಿ ಬದ್ಧವಾಗಿದ್ದು, ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸಾಮೂಹಿಕವಾಗಿ ಹೆಚ್ಚು ಕೂಲಿಕಾರರು ಪಾಲ್ಗೊಳ್ಳುವಂಥ ಕಾಮಗಾರಿಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೆರೆಗಳ ಹೂಳೆತ್ತುವುದು. ಗೋ ಕಟ್ಟೆಗಳ ಅಭಿವೃದ್ಧಿ, ಕೃಷಿ ಹೊಂಡ, ಬದು ನಿರ್ಮಾಣ, ಕಲ್ಯಾಣಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಪದೇ ಪದೆ ಬರ ಪರಿಸ್ಥಿತಿ ಎದುರಿಸುತ್ತಿದ್ದು ಜನ, ಜನಾವಾರುಗಳು ವರ್ಷದಿಂದ ವರ್ಷಕ್ಕೆ ಸಂಕಷ್ಟಕ್ಕೆ ಸಿಲುಕುತ್ತಿವೆ. ಜಲದ ಮೂಲಗಳು ಕಡಿಯಾಗುತ್ತಿದ್ದು, ಕೆರೆ, ಕಟ್ಟೆಗಳಿಗೆ ಹರಿದು ಬರುವ ನೀರಿನ ಮಾರ್ಗಗಳು ಕಾಲುವೆಗಳ ಹೂಳು ಹಾಗೂ ಗಿಡ ಗಂಟೆಗಳಿಂದ ಮುಚ್ಚಿ ಹೋಗಿವೆ. ಇದರಿಂದಾಗಿ ಕೆರೆ-ಕಟ್ಟೆಗಳಲ್ಲಿ ನೀರು ಕಾಣದಾಗಿ ಅಂತರರ್ಜಲ ಮಟ್ಟ ಪಾತಾಳಕ್ಕೆ ಕುಸಿಯುತ್ತಿದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರು ಉದ್ಯೋಗ ಅರಸಿಕೊಂಡು ನಗರ, ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ಸಂಕಷ್ಟದ ಪರಿಸ್ಥಿತಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉದ್ಯೋಗ ಖಾತರಿ ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ತಾಲೂಕು ಪಂಚಾಯತಿಯ ಮಾಹಿತಿ ಶಿಕ್ಷಣ ಸಂವಹನ ಅಧಿಕಾರಿ ಗಿರೀಶ್ ಬೆನ್ನೂರ, ಅಭಿವೃದ್ಧಿ ಅಧಿಕಾರಿ ಲೋಕೇಶ ಪಟ್ಟಣ, ತಾಪಂ ಎಂಜನಿಯರ್ ಇಮ್ರಾನಖಾನ್, ಸಂಜೀವ ಮೇಗಳಮನಿ ಹಾಗೂ ಗ್ರಾಪಂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.