ಕಾನೂನು ಪಾಲನೆ ಪ್ರತಿಯೊಬ್ಬರ ನಾಗರಿಕನ ಕರ್ತವ್ಯ

ಅರ್ಜಿ ಸಲ್ಲಿಸಿದರೆ ಕಾನೂನಿನ ನೆರವು ಒದಗಿಸಲಾಗುವುದು ಎಂದರು.

Team Udayavani, Nov 15, 2021, 6:00 PM IST

ಕಾನೂನು ಪಾಲನೆ ಪ್ರತಿಯೊಬ್ಬರ ನಾಗರಿಕನ ಕರ್ತವ್ಯ

ಹಾವೇರಿ: ಸಮಾಜದ ಸುವ್ಯವಸ್ಥೆ ಕಾಪಾಡಲು ಕಾಯ್ದೆ-ಕಾನೂನುಗಳನ್ನು ಜಾರಿಗೆ ತರಲಾಗಿದೆ. ಅವುಗಳನ್ನು ಪಾಲಿಸುವುದರೊಂದಿಗೆ ಗೌರವಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯ ಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಯಾದವ ವನಮಾಲಾ ಆನಂದರಾವ್‌ ಹೇಳಿದರು.

ತಾಲೂಕಿನ ಅಗಡಿ ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ತಾಲೂಕು ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾ ಧಿಕಾರದ 25ನೇ ವರ್ಷಾರಂಭದ ಪ್ರಯುಕ್ತ ಆಯೋಜಿಸಿದ್ದ ಕಾನೂನು
ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ಎಂದರೆ ಒಳ್ಳೆಯದನ್ನು ಗೌರವಿಸುವುದು ಹಾಗೂ ಕೆಟ್ಟದ್ದನ್ನು ಖಂಡಿಸುವುದಾಗಿದೆ. ಯಾವುದೇ ವಿಷಯದಲ್ಲಿ ಅನ್ಯಾಯವಾದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದಿಂದ ನೆರವು ಪಡೆಯಬಹುದಾಗಿದೆ. ಕಾನೂನಿನ ನೆರವು ಹಾಗೂ ಸಹಾಯ ಒದಗಿಸಲಾಗುವುದು ಎಂದು ಹೇಳಿದರು. ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಸೋಮಶೇಖರ ಜಿ.ಮುಳ್ಳಳ್ಳಿ ಅವರು ಮಾತನಾಡಿ, ನಿತ್ಯ ಜೀವನಕ್ಕೆ ಬೇಕಾಗುವ
ಕಾಯ್ದೆ-ಕಾನೂನುಗಳನ್ನು ತಿಳಿದುಕೊಂಡು ಇತರರಿಗೂ ತಿಳಿವಳಿಕೆ ನೀಡಬೇಕು. ಕಾನೂನಿನಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷೆ ಸಂಗೀತಾ ತೆರೆದಳ್ಳಿ ಮಾತನಾಡಿ, ದೌರ್ಜನ್ಯಕ್ಕೆ ಒಳಗಾಗದ ಮಹಿಳೆಯರು ಧೈರ್ಯವಾಗಿ ಕಾನೂನಿನ ನೆರವು ಪಡೆದುಕೊಳ್ಳುವ ಮೂಲಕ ಇಂತಹ ಕಾರ್ಯಕ್ರಮಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು. ಡಿವೈಎಸ್‌ಪಿ ಶಂಕರ ಮಾರಿಹಾಳ ಮಾತನಾಡಿ, ಇಂದು ಸೈಬರ್‌ ಕ್ರೈಂ ಅಪರಾಧಗಳು ಹೆಚ್ಚಾಗಿದ್ದು, ಆಧುನಿಕ ಯುಗದಲ್ಲಿ ಅತ್ಯಂತ ಜಾಗೃತರಾಗಿ ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ಕಾನೂನಿನ ಚೌಕಟ್ಟಿನೊಳಗೆ ವ್ಯವಹರಿಸಬೇಕು ಎಂದರು.

ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳ ಕುರಿತು ಉಪನ್ಯಾಸ ನೀಡಿದ ಹಿರಿಯ ನ್ಯಾಯವಾದಿ ಜಿ.ಕೆ. ಕಮ್ಮಾರ ಅವರು, ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರು, ಮಾನಸಿಕ ನ್ಯೂನತೆ ಹೊಂದಿದವರು ಕಾನೂನು ಸೇವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದರೆ ಕಾನೂನಿನ ನೆರವು ಒದಗಿಸಲಾಗುವುದು ಎಂದರು.

ಲೋಕ್‌ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ 60 ದಿನದೊಳಗಾಗಿ ಬಗೆಹರಿಸಲಾಗುವುದು ಹಾಗೂ ಉಭಯ ಪಕ್ಷಗಾರರ ಹಿತ ಕಾಪಾಡಲಾಗುವುದು. ಇದೊಂದು ಸುವರ್ಣಾವಕಾಶವಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಹಿರಿಯ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಎಸ್‌.ಐ.ನಂದಿ, ಪಿಡಿಒ ರುಬೀನ ದೊಡ್ಡಮನಿ ಇತರರು ಇದ್ದರು.

ಕಾನೂನು ಎಂದರೆ ಒಳ್ಳೆಯದನ್ನು ಗೌರವಿಸುವುದು ಹಾಗೂ ಕೆಟ್ಟದ್ದನ್ನು ಖಂಡಿಸುವುದಾಗಿದೆ. ಯಾವುದೇ ಅನ್ಯಾಯವಾದಲ್ಲಿ ಕಾನೂನು ಸೇವೆಗಳ ಪ್ರಾ ಧಿಕಾರದಿಂದ ನೆರವು ಪಡೆಯಬಹುದಾಗಿದೆ. ಕಾನೂನು ನೆರವು ಹಾಗೂ ಸಹಾಯ ಒದಗಿಸಲಾಗುವುದು.
ಯಾದವ ವನಮಾಲಾ
ಆನಂದರಾವ್‌, ಪ್ರಧಾನ ಜಿಲ್ಲಾ ಮತ್ತು
ಸತ್ರ ನ್ಯಾಯಧೀಶರು

ಟಾಪ್ ನ್ಯೂಸ್

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.