ಲೈಂಗಿಕ ಕಾರ್ಯಕರ್ತೆಯರು ಸ್ವಾವಲಂಬಿಗಳಾಗಲಿ
•ದಮನಿತ ಮಹಿಳೆಯರು-ಲೈಂಗಿಕ ಅಲ್ಪಸಂಖ್ಯಾತರ ಜೀವನ ಸುಧಾರಣೆಗೆ ಸರ್ಕಾರಿ ಯೋಜನೆ ಮಾಹಿತಿ ನೀಡಿ
Team Udayavani, Aug 2, 2019, 2:21 PM IST
ಹಾವೇರಿ: ಡಿಸಿ ಕೃಷ್ಣ ಭಾಜಪೇಯಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಹಾವೇರಿ: ದಮನಿತ ಮಹಿಳೆಯರನ್ನು ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಜೀವನ ಸುಧಾರಣೆ ಮೂಲಕ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳ ಮಾಹಿತಿ ಒದಗಿಸಲು ಜಿಲ್ಲಾ ಮಟ್ಟದ ಕಾರ್ಯಾಗಾರ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದಮನಿತ ಮಹಿಳೆಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಜೀವನಮಟ್ಟ ಸುಧಾರಿಸಲು ರಚಿಸಲಾದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಕೋಶದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಮನಿತ ಮಹಿಳೆಯರಿಗಾಗಿ ರೂಪಿಸಿರುವ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗ ಬೇಕಾದರೆ ಅಂತರ್ ಇಲಾಖೆಯ ಸಮನ್ವಯತೆ ಅವಶ್ಯ ವಾಗಿದೆ. ಈ ವರ್ಗಕ್ಕೆ ವಿವಿಧ ಇಲಾಖೆಯಲ್ಲಿರುವ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಬೇಕು. ಯಾವ ಇಲಾಖೆಯಲ್ಲಿ ಯಾವ ಸೌಲಭ್ಯಗಳಿವೆ ಎಂಬುದನ್ನು ಲೈಂಗಿಕ ಕಾರ್ಯಕರ್ತೆಯರಿಗೆ ಅರಿವು ಮೂಡಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಆಯಾ ಇಲಾಖಾ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು.
ಸರ್ಕಾರ ದಮನಿತ ಮಹಿಳೆಯರ ಜೀವನ ಮಟ್ಟವನ್ನು ಸಮಗ್ರವಾಗಿ ಸುಧಾರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಲಹಾ ಸಮಿತಿ ಕೋಶವನ್ನು ರಚಿಸಿದೆ. ವಿವಿಧ ಇಲಾಖಾ ಅಧಿಕಾರಿಗಳು ಈ ಸಮಿತಿಯಲ್ಲಿದ್ದು, ಸಮನ್ವಯತೆಯಿಂದ ಲೈಂಗಿಕ ಅಲ್ಪಸಂಖ್ಯಾತರಿಗೆ ಸ್ವಾವಲಂಬನೆ ಬದುಕು ಕಟ್ಟಿಕೊಡುವ ಕಾರ್ಯ ಮಾಡಬೇಕಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಸ್ಪಂದನ ಮಹಿಳಾ ಒಕ್ಕೂಟ ಹಾಗೂ ಚೇತನ ಸಂಸ್ಥೆ ಲೈಂಗಿಕ ಕಾರ್ಯಕರ್ತೆಯರ ಕ್ಷೇಮಾಭಿವೃದ್ಧಿಗೆ ಕಾರ್ಯನಿರ್ವಹಿಸುತ್ತಿದೆ. ಈ ಎರಡು ಸಂಸ್ಥೆಗಳಲ್ಲಿ 2216 ಲೈಂಗಿಕ ಕಾರ್ಯಕರ್ತೆಯರು ನೋಂದಾಯಿಸಿಕೊಂಡಿದ್ದಾರೆ. ಲೈಂಗಿಕ ಸುರಕ್ಷತಾ ಕ್ರಮಗಳು, ಕಿರುಕುಳ ತಡೆ ಹಾಗೂ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ಉಭಯ ಸಂಸ್ಥೆಯ ಮುಖ್ಯಸ್ಥರು ಸಭೆಗೆ ಮಾಹಿತಿ ನೀಡಿದರು.
ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿ ಅಕ್ಷತಾ, ಜಿಲ್ಲೆಯಲ್ಲಿ 1100 ಜನ ಲೈಂಗಿಕ ಅಲ್ಪಸಂಖ್ಯಾತರು ಇದ್ದಾರೆ. ಬಹಳಷ್ಟು ಇಲಾಖಾ ಅಧಿಕಾರಿಗಳಿಗೆ ದಮನಿತರ ಹಾಗೂ ಲೈಂಗಿಕ ಅಲ್ಪಸಂಖ್ಯಾತ ವರ್ಗದ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಈ ಕುರಿತಂತೆ ಅಧಿಕಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸುವುದು ಅಗತ್ಯವಾಗಿದೆ. ಅಧಿಕಾರಿಗಳು, ಲೈಂಗಿಕ ಅಲ್ಪಸಂಖ್ಯಾತರು ಹಾಗೂ ಲೈಂಗಿಕ ಕಾರ್ಯಕರ್ತರಿಗೆ ಲಿಂಗತ್ವ ಸೂಕ್ಷ ್ಮತೆಯ ಅರಿವಿನ ಕಾರ್ಯಕ್ರಮವನ್ನು ಆಯೋಜಿಸಲು ಸಭೆಯಲ್ಲಿ ಮನವಿ ಮಾಡಿಕೊಂಡರು.
ದಮನಿತ ಮಹಿಳೆಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತ ವರ್ಗಕ್ಕೆ ಮನೆಗಳ ನಿರ್ಮಾಣ, ಈ ವರ್ಗದ ವಿದ್ಯಾವಂತರಿಗೆ ಉದ್ಯೋಗ ಮೇಳ ಆಯೋಜಿಸಿ ಉದ್ಯೋಗ ಅವಕಾಶ ಕಲ್ಪಿಸುವುದು, ಕೌಶಲ್ಯಾಭಿವೃದ್ಧಿಗೆ ತರಬೇತಿಗಳನ್ನು ಆಯೋಜಿಸುವುದು, ಸಣ್ಣ ಸಣ್ಣ ಉದ್ಯಮಗಳನ್ನು ನಡೆಸಲು ಆಸಕ್ತರಿಗೆ ನೆರವು ಒದಗಿಸುವುದು, ಶಾಲೆಯನ್ನು ತೊರೆದವರಿಗೆ ಶಿಕ್ಷಣ ಮುಂದುವರಿಸಲು ನೆರವು ಒದಗಿಸುವುದು ಹಾಗೂ ನೇರವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಬಾಹ್ಯವಾಗಿ ಹಾಜರಾಗಲು ಅಗತ್ಯ ನೆರವು ನೀಡುವುದು, ಪಿಂಚಣಿ ಯೋಜನೆ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಯ ಯೋಜನೆಗಳಡಿ ಈ ವರ್ಗಗಳಿಗೆ ಸೌಲಭ್ಯಗಳನ್ನು ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಮನ್ವಯತೆಯಿಂದ ಇಲಾಖಾ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಕೆ. ಶ್ರೀವಿದ್ಯಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಂದ್ರ ದೊಡ್ಡಮನಿ, ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳು ಹಾಗೂ ಇತರ ಇಲಾಖೆ ಅಧಿಕಾರಿಗಳು ಹಾಗೂ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.