ಅನ್ನದಾತನ ಬೇಡಿಕೆಗಳಿಗೆ ಸಮಾಜ-ಸರ್ಕಾರ ಸ್ಪಂದಿಸಲಿ: ಭಾಜಪೇಯಿ

Team Udayavani, Jul 15, 2019, 2:47 PM IST

hv-tdy-3..

ಹಾನಗಲ್ಲ: ರಾಜ್ಯ ರೈತ ಸಂಘದ ತಾಲೂಕು ಘಟಕ ಆಯೋಜಿಸಿದ್ದ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಹಾನಗಲ್ಲ: ರೈತರ ಬೇಡಿಕೆಗೆ ಸಮಾಜ ಹಾಗೂ ಸರ್ಕಾರ ಸ್ಪಂದಿಸುವ ಮೂಲಕ ದೇಶದ ಬೆನ್ನೆಲುಬು ಎಂದು ಕರೆಯುವ ಈ ಸಮುದಾಯದ ಏಳ್ಗೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹೇಳಿದರು.

ಶ್ರೀ ವಿರಕ್ತಮಠದ ಸದಾಶಿವ ಮಂಗಲ ಭವನದಲ್ಲಿ ರಾಜ್ಯ ರೈತ ಸಂಘದ ತಾಲೂಕು ಘಟಕ ಆಯೋಜಿಸಿದ್ದ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರೈತಪರ ಯೋಜನೆಗಳನ್ನು ವಿಳಂಬವಿಲ್ಲದೆ ಅವರಿಗೆ ತಲುಪಿಸುವಲ್ಲಿ ಎಲ್ಲ ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡುತ್ತೇವೆ. ನಾವು ನಿಮ್ಮೊಂದಿಗಿದ್ದೇವೆ. ನೀವು ನಮ್ಮೊಂದಿಗಿರಿ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ರೈತ ಸಮುದಾಯ ಕಾಳಜಿ ವಹಿಸಬೇಕು. ರೈತರ ಎಲ್ಲ ಅಹವಾಲುಗಳಿಗೆ ಸರ್ಕಾರಿ ಕಚೇರಿಗಳು ಯಾವಾಗಲೂ ತೆರೆದಿರುತ್ತವೆ ಎಂದರು.

ಅಕ್ಕಿಆಲೂರಿನ ವಿರಕ್ತಮಠದ ಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಅಧಿಕಾರಿಗಳು ಕ್ರಿಯಾಶೀಲರಾಗಿರಬೇಕು. ಜನಸೇವೆಗೆ ಮುಂದಾಗಬೇಕು. ರೈತರು ಕೂಡ ಅಧಿಕಾರಿಗಳ ಜೊತೆಗೆ ಭಿನ್ನಾಭಿಪ್ರಾಯ ಬಿಟ್ಟು ಬಿಕ್ಕಟ್ಟುಗಳನ್ನು ಪರಿಹರಿಸಿಕೊಳ್ಳಬೇಕು ಎಂದರು.

ಅಕ್ಕಿಆಲೂರಿನ ಮುತ್ತಿನಕಂತಿಮಠದ ಚಂದ್ರಶೇಖರ ಶಿವಾಚಾರ್ಯರು ಮಾತನಾಡಿ, ಮಠಗಳು ಸದಾ ರೈತರು ರೈತ ಸಂಘಟನೆ ಪರವಾಗಿ ಇರಬೇಕು. ಕೃಷಿ ಸಮುದಾಯ ಗೌರವಿಸುವುದೇ ನಮ್ಮೆಲ್ಲರ ಆದ್ಯತೆಯಾಗಲಿ. ರೈತ ಉಳಿದರೆ ದೇಶ ಉಳಿಯುತ್ತದೆ ಎಂದರು.

ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಶಕುಂತಲಾ ಚೌಗುಲಾ ಮಾತನಾಡಿ, ಸರ್ಕಾರದ ಯೋಜನೆ ಕುರಿತು ಮಾಹಿತಿ ತಿಳಿದುಕೊಳ್ಳಬೇಕು. ಬೆಳೆವಿಮೆ ಹಾನಗಲ್ಲ ತಾಲೂಕಿನಲ್ಲಿ ಹೆಚ್ಚು ಪರಿಣಾಮಕಾರಿ ಸದುಪಯೋಗವಾಗಿದೆ. ಕಗ್ಗಂಟಾಗಿದ್ದ ಈ ಬೆಳೆವಿಮೆ ವಿಷಯ ರೈತ ಸಂಘದ ಹೋರಾಟದ ಮೂಲಕ ಅದನ್ನು ಬಿಡಿಸಲಾಗಿದೆ. ಇದಕ್ಕೆ ಮಾಧ್ಯಮದ ಉತ್ತಮ ಸಹಕಾರವೂ ಸಿಕ್ಕಿದೆ. ಬ್ಯಾಂಕಿನ ಅಧಿಕಾರಿಗಳು ಮಾಡಿದ ತಪ್ಪಿನಿಂದಾಗಿ ರೈತರು ಅವಕಾಶ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿತ್ತು. ಅಧಿಕಾರಿಗಳು ಕೂಡ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದರು. ಆದರೆ, ರೈತ ಸಂಘದ ಹೋರಾಟ ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡಿದ್ದು, ಕೋಟ್ಯಾಂತರ ಹಣ ರೈತರಿಗೆ ನ್ಯಾಯಯುತವಾಗಿ ತಲುಪುವಂತಾಗಿದೆ ಎಂದರು. ಕೃಷಿ ಇಲಾಖೆ ಹಾವೇರಿ ಜಿಲ್ಲಾ ಜಂಟಿ ನಿರ್ದೇಶಕ ಮಂಜುನಾಥ ಮಾತನಾಡಿ, ರೈತ ಹೋರಾಟದ ಫಲವಾಗಿ ರೈತರಿಗೆ ಬೆಳೆ ವಿಮೆಗೆ ಸಂಬಂಧಿಸಿದ 13 ಕೋಟಿ ರೂ. ತಲುಪುವಂತಾಯಿತು. ಇದರಲ್ಲಿ ಅಧಿಕಾರಿಗಳ ಸಹಕಾರವಿದೆ. ಆದರೆ, ರೈತರ ಕಟ್ಟುನಿಟ್ಟಿನ ಹೋರಾಟ ಯಶಸ್ಸು ತಂದುಕೊಟ್ಟಿದೆ ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚೆಳ್ಳೇರ ಮುಖ್ಯ ಅತಿಥಿಯಾಗಿ ಮಾತನಾಡಿ, ಬೆಳೆವಿಮೆ ನ್ಯಾಯಯುತವಾಗ ಸರ್ಕಾರ ನೀಡುವಲ್ಲಿ ವಿಫಲವಾಗಿರುವಾಗ ಅದನ್ನು ಹೋರಾಟದ ಮೂಲಕ ಪಡೆದು ಇದನ್ನು ರೈತ ಸಮುದಾಯದ ಮುಂದೆ ಇಡಲಾಗಿದೆ. ಜನಪ್ರತಿನಿಧಿಗಳು ರೈತರ ಪರವಾಗಿ ನಿಲ್ಲದೆ ರೆಸಾರ್ಟ್‌ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸವಣೂರು ಉಪವಿಭಾಗಾಧಿಕಾರಿ ಬೋಯಾರ ಹರ್ಷಲ್ನಾರಾಯಣರಾವ್‌, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ ಮಾತನಾಡಿದರು. ಮಾಲತೇಶ ಪರಪ್ಪನವರ, ಸೋಮಶೇಖರ ಕೋತಂಬರಿ, ಮಂಜುಳಾ ಅಕ್ಕಿ, ತಹಶೀಲ್ದಾರ್‌ ಎಂ.ಗಂಗಪ್ಪ, ಸಂಗಮೇಶ ಹಕ್ಲಪ್ಪ ನವರ, ರೈತ ಮುಖಂಡರಾದ ಮಹಾ ಲಿಂಗಪ್ಪ ಅಕ್ಕಿವಳ್ಳಿ, ರುದ್ರಗೌಡ ಕಾಡನ ಗೌಡ್ರ, ಪ್ರಭುಗೌಡ ಪ್ಯಾಟಿ, ಶಂಕರಗೌಡ ಶಿರಗಂಬಿ, ಕರಬಸಪ್ಪ ಅಗಸಿಬಾಗಿಲ, ದಿಳ್ಳೆಪ್ಪ ಮಣ್ಣೂರ, ರುದ್ರಪ್ಪ ಹಣ್ಣಿ, ರಾಜು ದಾನಪ್ಪನವರ, ಶಿವಬಸಪ್ಪ ಗೋವಿ, ಮಹಮ್ಮದ್‌ಗೌಸ ಪಾಟೀಲ ಪಾಲ್ಗೊಂಡಿದ್ದರು.

ಸನ್ಮಾನ: ರೈತ ಹೋರಾಟಕ್ಕೆ ಸಹಕಾರಿಸಿದ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ಮುಖಂಡರು ಹಾಗೂ ರೈತ ಮುಖಂಡರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.