ಯುವ ಜನತೆ ಮಾದಕ ವಸ್ತುಗಳಿಂದ ದೂರವಿರಲಿ
Team Udayavani, Jun 29, 2019, 3:19 PM IST
ಹಿರೇಕೆರೂರ: ರಟ್ಟೀಹಳ್ಳಿಯ ಲಯನ್ಸ್ ಶಾಲಾ ಆವರಣದಲ್ಲಿ ನಡೆದ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಪಿಎಸ್‌ಐ ಬಿ.ಎಸ್.ಅರವಿಂದ ಮಾತನಾಡಿದರು.
ಹಿರೇಕೆರೂರ: ಮಾದಕ ವ್ಯಸನದಿಂದ ವ್ಯಕ್ತಿ ಹಾಳಾಗುವ ಜತೆಗೆ ಕುಟುಂಬ ಮತ್ತು ಸಮಾಜದ ಸ್ವಾಸ್ಥ ್ಯಹಾಳು ಮಾಡುತ್ತದೆ. ಯುವ ಜನತೆ ಮಾದಕ ವಸ್ತುಗಳಿಂದ ದೂರವಿದ್ದು, ಆರೋಗ್ಯಂತ ಮತ್ತು ಸದೃಢ ಸಮಾಜ ನಿರ್ಮಾಣ ಮಾಡಬೇಕು ಎಂದು ರಟ್ಟೀಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಬಿ.ಎಸ್.ಅರವಿಂದ ಹೇಳಿದರು.
ರಟ್ಟೀಹಳ್ಳಿಯ ಲಯನ್ಸ್ ಶಾಲಾ ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವ ಜನತೆ ಮಾದಕ ವ್ಯಸನಕ್ಕೆ ಬಲಿಯಾಗಿ ಅಪರಾಧ ಕೃತ್ಯಕ್ಕಿಳಿಯುತ್ತಿದ್ದಾರೆ. ಪರಿಣಾಮ ಮಾನಸಿಕ ಖನ್ನತೆ, ನಿದ್ರಾ ಹೀನತೆಗಳಂಥ ಸಮಸ್ಯೆ ಎದುರಿಸುತ್ತಿದ್ದಾರೆ. ಅಲ್ಲದೆ ಅನೇಕ ಕಾಯಿಲೆಗಳಿಗೆ ತುತ್ತಾಗಿ ಅಮೂಲ್ಯ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ಶಾಲಾ ಕಾಲೇಜು ಮಟ್ಟದಲ್ಲಿ ಈ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ. ಜೀವನದಲ್ಲಿ ಒಳ್ಳೆಯ ಹಾಗೂ ಕೆಟ್ಟ ಎಂಬ ಆಯ್ಕೆಗಳಿದ್ದು, ಅದರಲ್ಲಿ ಒಳ್ಳೆಯದನ್ನು ಆಯ್ಕೆ ಮಾಡಿಕೊಂಡು ನಿಮ್ಮ ತಂದೆ ತಾಯಿಯ ಕನಸು ನನಸು ಮಾಡಿ ಎಂದರು.
ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಬಿ.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಜೀವನ ನಡೆಸಬೇಕು. ಆರೋಗ್ಯ ಕೆಟ್ಟು ಹೋದ ಬಳಿಕ ಚಿಂತಿಸಿ ಫಲವಿಲ್ಲ ಎಂದು ಹೇಳಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಸಿ.ಕಠಾರೆ, ಲಯನ್ಸ್ ಶಾಲೆಯ ಮುಖ್ಯ ಶಿಕ್ಷಕ ವಿ.ಎಸ್. ಅರ್ಕಾಚಾರಿ, ಎಂ.ಎಚ್. ಹರವಿಶೆಟ್ಟರ್, ಪೊಲೀಸ್ ಇಲಾಖೆ ಕುಮಾರ ಕೊಣ್ತಿ, ಬಾರ್ಕಿ ಸೇರಿದಂತೆ ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.