ಸಾಲಮನ್ನಾ ಫಲಾನುಭವಿ ಖಾತೆಗೆ ಹಣ ಜಮೆ ಮಾಡಿ

Team Udayavani, Jul 21, 2019, 12:34 PM IST

hv-tdy-5

ಹಾವೇರಿ: ರೈತ ಸಂಘದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಾವೇರಿ: ರಾಜ್ಯ ಸರ್ಕಾರದ ಸಾಲಮನ್ನಾ ಘೋಷಣೆಯಿಂದ ಜಿಲ್ಲೆಯ ಬಹುತೇಕ ರೈತರಿಗೆ ಏನೂ ಪ್ರಯೋಜನವಾಗಿಲ್ಲ. ಸರ್ಕಾರ ಕೂಡಲೇ ಸಾಲಮನ್ನಾ ಫಲಾನುಭವಿ ರೈತರ ಖಾತೆಗೆ ಹಣ ಜಮೆ ಮಾಡಬೇಕು. ಇಲ್ಲದಿದ್ದರೆ ಆಗಸ್ಟ್‌ 19ರಂದು ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಎಚ್ಚರಿಕೆ ನೀಡಿದರು.

ನಗರದ ಪ್ರವಾಸಿಗೃಹದಲ್ಲಿ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ದುರಾಡಳಿತದಿಂದ ಜನತೆ ಭ್ರಮ ನಿರಸನಗೊಂಡಿದ್ದಾರೆ. ಹಿಂದೆಂದೂ ಕಂಡರಿಯದ ಭೀಕರ ಬರಗಾಲದಿಂದ ತತ್ತರಿಸಿ ರೈತರು ಹತಾಶರಾಗಿದ್ದಾರೆ. ರೈತರಿಗೆ ವರವಾಗಬೇಕಿದ್ದ ರಾಜ್ಯ ಸರ್ಕಾರದ ಸಾಲಮನ್ನಾ ಯೋಜನೆ ರೈತರಿಗೆ ಶಾಪವಾಗಿ ಪರಿಣಮಿಸಿದೆ ಎಂದರು.

ಸಾಲಮನ್ನಾದ ಗೊಂದಲದಿಂದಾಗಿ ರೈತರನ್ನು ಪ್ರಪಾತಕ್ಕೆ ನೂಕಿದಂತಾಗಿದೆ. ಸಾಲಮನ್ನಾದ ಮಾಹಿತಿ ಯಾವ ಅಧಿಕಾರಿಗಳಿಂದಲೂ ಸಿಗುತ್ತಿಲ್ಲ, ಬ್ಯಾಂಕ್‌ ವ್ಯವಸ್ಥಾಪಕರು, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರ ಬಳಿಯೂ ಸಿಗುತ್ತಿಲ್ಲ, ನಮ್ಮ ಸಾಲಮನ್ನಾ ಆಗುತ್ತದೆಯೋ ಇಲ್ಲವೋ ಎಂಬುದು ರೈತರಿಗೆ ಗೊತ್ತಾಗುತ್ತಿಲ್ಲ, ಅವರಿಗೆ ಹೊಸ ಸಾಲವೂ ಸಿಗುತ್ತಿಲ್ಲ. ಹೀಗಾಗಿ ರೈತರು ಮಾಹಿತಿಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಕೂಡಲೇ ರೈತರಿಗೆ ಸರಿಯಾದ ಮಾಹಿತಿ ನೀಡಿ ಗೊಂದಲ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದರು.

ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಒಂದು ತಿಂಗಳು ತಡವಾಗಿ ಬಿತ್ತನೆಯಾಗಿದೆ. ಮುಂದೆ ಸರಿಯಾಗಿ ಬೆಳೆ ಬರುತ್ತದೆಯೋ ಇಲ್ಲವೋ ಎಂಬ ಚಿಂತೆ ರೈತರನ್ನು ಕಾಡುತ್ತಿದೆ. ಇನ್ನೂ ಹಳ್ಳಿಗಳಲ್ಲಿ ಕುಡಿಯಲು ಸಮರ್ಪಕ ನೀರು, ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ, ಕೆರೆಗಳಲ್ಲಿ ನೀರು ತುಂಬಿಲ್ಲ. ಅಧಿಕಾರಿಗಳು ಸಹ ಜನರಿಗೆ ಸ್ಪಂದಿಸುತ್ತಿಲ್ಲ, ಜಿಲ್ಲಾಡಳಿತ ಸಂಪೂರ್ಣ ನಿಷ್ಕ್ರೀಯವಾಗಿದೆ.

ಉಸ್ತುವಾರಿ ಸಚಿವರು ಜಿಲ್ಲೆಯನ್ನು ಮರೆತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳು ರೇಸಾರ್ಟ್‌ ರಾಜಕಾರಣ ಮಾಡುತ್ತಿದ್ದು, ಜನರ ಗೋಳು ಕೇಳುವವರಿಲ್ಲದಾಗಿದೆ ಎಂದು ಕೆಂಚಳ್ಳೇರ ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಜಿಲ್ಲೆಗೆ 158ಕೋಟಿ ರೂ., ಬೆಳೆವಿಮೆ ಮಂಜೂರಾಗಿದೆ ಎಂದು ಕೃಷಿ ಅಧಿಕಾರಿಗಳು ಹೇಳುತ್ತಾರೆ. ಯಾವ ರೈತರಿಗೆ, ಯಾವ ಬೆಳೆಗೆ ಎಷ್ಟು ವಿಮೆ ಬಂದಿದೆ ಎಂಬ ಮಾಹಿತಿ ಸಿಗುತ್ತಿಲ್ಲ, ಕೂಡಲೇ ಯಾವ ಬೆಳೆಗೆ ಎಷ್ಟು ಹಣ ಬಂದಿದೆ ಎಂಬ ಮಾಹಿತಿ ಕೊಟ್ಟು ತಕ್ಷಣ ರೈತರ ಖಾತೆಗೆ ವಿಮಾ ಹಣ ಜಮೆ ಮಾಡಬೇಕು. ಸಾಲಮನ್ನಾ ಯೋಜನೆಯನ್ನು ಒಮ್ಮೆ ಕೈಗೆತ್ತಿಕೊಂಡಿದ್ದು, ಹೆಚ್ಚು ದಿನದೂಡದೇ ಅದನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಪ್ರಮುಖರಾದ ಪ್ರಭುಗೌಡ ಪ್ಯಾಟಿ, ಸುರೇಶ ಚಲವಾದಿ ಸುದ್ದಿಗೋಷ್ಠಿಯಲ್ಲಿದ್ದರು.

ಸಾಲ ಮನ್ನಾವೂ ಇಲ್ಲ, ಹೊಸ ಸಾಲವೂ ಇಲ್ಲ:

ಜಿಲ್ಲೆಯ ಸುಮಾರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ 1.12ಲಕ್ಷ ರೈತರ 2025 ಕೋಟಿ ರೂ., ಸಾಲ ಮನ್ನಾ ಮಾಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ, ಕೇವಲ 425ಕೋಟಿ ರೂ., ಹಣ ಬಿಡುಗಡೆ ಮಾಡಿ ಕೈತೊಳೆದುಕೊಂಡಿದೆ. ಸಹಕಾರಿ ಸಂಘಗಳ 21621 ರೈತರಿಗೆ 70.58ಕೋಟಿ ರೂ., ಸಾಲ ಮನ್ನಾ ಹಣ ಬರಬೇಕಿತ್ತು. ಅದರಲ್ಲೂ 25 ಕೋಟಿ ರೂ. ಹಣ ಬಾಕಿ ಉಳಿದುಕೊಂಡಿದೆ. ರೈತರು ಬ್ಯಾಂಕ್‌ಗೆ ಹೋಗಿ ವಿಚಾರಿಸಿದರೆ ಅವರಿಂದಲೂ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಸರ್ಕಾರದಿಂದ ಇನ್ನೂ ಹಣ ಬಂದಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ರೈತರ ಸಾಲ ಮನ್ನಾವೂ ಆಗದೇ; ಹೊಸ ಸಾಲವೂ ಸಿಗದೇ ಬೀಜ, ಗೊಬ್ಬರ ಖರೀದಿಗೆ ಪರದಾಡುವಂತಾಗಿದೆ ಎಂದು ರಾಮಣ್ಣ ಕೆಂಚಳ್ಳೇರ ದೂರಿದರು.

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.