Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ
Team Udayavani, Mar 19, 2024, 11:52 AM IST
ಹಾವೇರಿ: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಮಾವನೊಬ್ಬ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಬಳಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ದೀಪಾ ಗೊಂದಿ (21) ಕೊಲೆಯಾದ ಯುವತಿ. ಮಾಲತೇಶ ಬಾರ್ಕಿ (35) ವರ್ಷ ಕೊಲೆ ಮಾಡಿದ ಮಾವ.
ಕಳೆದ ಕೆಲ ಸಮಯದ ಹಿಂದೆ ಸೊಸೆ ದೀಪಾಳೊಂದಿಗೆ ಮಾವ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಇವರಿಬ್ಬರ ವಿವಾಹ ದಿನಾಂಕ ಏಪ್ರಿಲ್ 22 ರಂದು ನಿಗದಿಯಾಗಿತ್ತು. ಆದರೆ ನಿಶ್ಚಿತಾರ್ಥದ ಬಳಿಕ ದೀಪಾ ಮಾವನೊಂದಿಗೆ ಮದುವೆಯಾಗಲು ನಿರಾಕರಿಸಿದ್ದಳು.
ಮದುವೆ ನಿರಾಕರಿಸಿದ್ದಕ್ಕೆ ದೀಪಾಳನ್ನು ಕರೆದುಕೊಂಡು ಹೋಗಿ ನೇಣು ಹಾಕಿ, ವಿಷ ಕುಡಿಸಿ ಹತ್ಯೆ ಮಾಲತೇಶ ಹತ್ಯೆ ಮಾಡಿದ್ದಾನೆ. ಐದು ದಿನಗಳ ನಂತರ ಈ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಆರೋಪಿ ಮಾಲತೇಶನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.