![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-415x249.jpg)
ಅನಾಮಧೇಯ ವ್ಯಕ್ತಿ ಬ್ಯಾಗ್ ಇಟ್ಟಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಗೃಹ ಸಚಿವ ಬೊಮ್ಮಾಯಿ
Team Udayavani, Jan 20, 2020, 3:30 PM IST
![airp](https://www.udayavani.com/wp-content/uploads/2020/01/airp-1-620x335.jpg)
ಹಾವೇರಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8:45ರಿಂದ 9 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿ ಬಂದು, ಒಂದು ಬ್ಯಾಗ್ ಪ್ಯಾಕ್ ಇಟ್ಟಿರೋದು ಸಿಸಿಟಿವಿಯಲ್ಲಿ ಗುರುತಿಸಲಾಗಿದೆ. ಸಂಶಯಾಸ್ಪದವಾಗಿ ಇರುವುದರಿಂದ ಅದನ್ನು ನಮ್ಮ ಸಿಐಎಸ್ ಎಫ್, ಪೊಲೀಸರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ದೊರೆತ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ತಾಲೂಕಿನ ಗೊಟಗೋಡಿ ಬಳಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ಹೇಳಿಕೆ ನೀಡಿದ್ದಾರೆ.
ಬಾಂಬ್ ನಿಷ್ಕ್ರಿಯ ದಳ ತಪಾಸಣೆ ಮಾಡಿದ ಮೇಲೆ ಸಜೀವ ಬಾಂಬ್ ವಸ್ತುಗಳು ಸಿಕ್ಕಿವೆ ಎಂದು ಪ್ರಾಥಮಿಕ ವರದಿಯಲ್ಲಿ ಕಂಡು ಬಂದಿದೆ. ಅವುಗಳನ್ನು ನಿಷ್ಕ್ರಿಯಗೊಳಿಸುವ ಕ್ರಮವಾಗುತ್ತಿದೆ. ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಲು ಪೊಲೀಸ್ ಕಾರ್ಯಪ್ರವೃತ್ತರಾಗಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಈಗಾಗಲೇ ತನಿಖೆ ಪ್ರಾರಂಭಿಸಿದ್ದಾರೆ ಎಂದಿದ್ದಾರೆ
ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳಿಗೆ ಭದ್ರತೆ ಹೆಚ್ಚಿಸಲಾಗಿದೆ. ಮಂಗಳೂರು, ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿಯಲ್ಲಿ ಕಟ್ಟೆಚ್ವರ ವಹಿಸಲಾಗಿದೆ ಎಂದಿದ್ದಾರೆ.
ದೇಶ ದ್ರೋಹ ಶಕ್ತಿಗಳು ಭಯೋತ್ಪಾದನೆ ಮಾಡಿ, ಜನರಲ್ಲಿ ಆತಂಕ ಉಂಟು ಮಾಡುತ್ತಿದ್ದಾರೆ. ನಮ್ಮ ದೇಶದ ಆರ್ಥಿಕ ಚಟುವಟಿಕೆಗಳಿಗೆ ಭಂಗ ತರುವ ಕೃತ್ಯವಿದು. ಇದನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳಲಾಗುವುದು. ಏಳೆಂಟು ವರ್ಷದಿಂದ ದೊಡ್ಡ ಪ್ರಮಾಣದಲ್ಲಿ ಇಡೀ ದೇಶದ ತುಂಬಾ ಈ ರೀತಿಯ ಪ್ರಯತ್ನ ನಡೆಯುತ್ತಿದೆ ಗಣರಾಜೋತ್ಸವ ಬಂದಾಗ ಈ ರೀತಿ ವಿದ್ವಂಸಕ ಕೃತ್ಯ ಮಾಡುವಂತದ್ದು ನಡೆದಿದ್ದು ಅವರ ಪ್ರಯತ್ನವನ್ನು ನಾವು ಭಂಗ ಮಾಡುತ್ತಲೇ ಬಂದಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದರು
ಟಾಪ್ ನ್ಯೂಸ್
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ](https://www.udayavani.com/wp-content/uploads/2024/12/6-35-150x90.jpg)
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
![5](https://www.udayavani.com/wp-content/uploads/2024/12/5-36-150x90.jpg)
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-150x90.jpg)
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
![Krantiveer Brigade launched by worshipping the feet of 1008 saints: KS Eshwarappa](https://www.udayavani.com/wp-content/uploads/2024/12/kse-150x87.jpg)
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
![BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.