ಪರ್ಯಾಯ ಬೆಳೆಯತ್ತ ಮಾವು ಬೆಳೆಗಾರರ ಚಿತ್ತ

ಹವಾಮಾನ ವೈಪರೀತ್ಯ-ಮಾರುಕಟ್ಟೆ ಅವ್ಯವಸ್ಥೆ ! ಅಧಿಕ ಖರ್ಚು, ಕಡಿಮೆ ಆದಾಯಕ್ಕೆ  ಬೇಸರ

Team Udayavani, Feb 15, 2021, 4:36 PM IST

Mango farmers

ಹಾವೇರಿ: ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಯಡಿ ರಾಜ್ಯ ಸರ್ಕಾರ ಜಿಲ್ಲೆಯಲ್ಲಿ ಮಾವು ಬೆಳೆಯನ್ನು ಗುರುತಿಸಿದೆ. ಆದರೆ, ಜಿಲ್ಲೆಯ ಮಾವು ಬೆಳೆಗಾರರು ಹವಾಮಾನ ವೈಪರೀತ್ಯ, ಮಾರುಕಟ್ಟೆ ಅವ್ಯವಸ್ಥೆ ಹಾಗೂ ಅಧಿಕ ಖರ್ಚು ಕಡಿಮೆ ಆದಾಯದಿಂದ ಬೇಸತ್ತು ಮಾವು ಕೃಷಿಯಿಂದಲೇ ವಿಮುಕ್ತರಾಗಿ ಪರ್ಯಾಯ ಬೆಳೆಗಳತ್ತ ಚಿತ್ತ ಹರಿಸುತ್ತಿದ್ದಾರೆ. ಇದರಿಂದಾಗಿ  ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆ ಸಾಕಾರಗೊಳ್ಳುವುದೇ? ಎಂಬ ಆತಂಕ ಮೂಡಿಸಿದೆ.

ಕೇಂದ್ರ ಸರ್ಕಾರದ ಆತ್ಮ ನಿರ್ಭರ ಯೋಜನೆಯಡಿ ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಗೆ ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಗುರುತಿಸಿದ ಉತ್ಪನ್ನಗಳ ಪಟ್ಟಿಯಲ್ಲಿ ಜಿಲ್ಲೆಯ ಮಾವು ಬೆಳೆ  ಗುರುತಿಸಲಾಗಿದೆ. ಈ ಯೋಜನೆ ಮೂಲಕ ಭವಿಷ್ಯದ ದಿನಗಳಲ್ಲಿ ಜಿಲ್ಲೆಯಲ್ಲಿ ಮಾವು ಉತ್ಪನ್ನದಡಿ ಸಣ್ಣ ಉದ್ಯಮಗಳ ಆರಂಭ, ಉತ್ಪನ್ನಗಳ ಮೌಲ್ಯವರ್ಧನೆ, ಉದ್ಯೋಗಾವಕಾಶಗಳ ಸೃಷ್ಟಿಸುವ ನೀರಿಕ್ಷೆ ಹೊಂದಲಾಗಿತ್ತು. ಆದರೆ, ಜಿಲ್ಲೆಯಲ್ಲಿ ಮಾವು ಬೆಳೆಗಾರರು ಹೆಚ್ಚಿನ ಆದಾಯ ನೀಡುವ ಬೆಳೆಗಳತ್ತ ಗಮನ ಹರಿಸುತ್ತಿದ್ದು, ವರ್ಷದಿಂದ ವರ್ಷಕ್ಕೆ ಜಿಲ್ಲೆಯಲ್ಲಿ ಮಾವು ಬೆಳೆ ಕ್ಷೇತ್ರ ಕ್ಷೀಣಿಸುತ್ತಿರುವುದರಿಂದ ಈ ಯೋಜನೆಯಡಿ ಮುಂದಿನ ದಿನಗಳಲ್ಲಿ ರೈತರನ್ನು ಮಾವು ಬೆಳೆಯತ್ತ ಪ್ರೋತ್ಸಾಹಿಸುವ ಸವಾಲು ಎದುರಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಒಂದಿಲ್ಲೊಂದು ಸಂಕಷ್ಟ: ಅತಿವೃಷ್ಟಿ ಅನಾವೃಷ್ಟಿ ಕೀಟ ರೋಗ ಬಾಧೆ, ಹವಾಮಾನ ವೈಪರೀತ್ಯ, ಮಾರುಕಟ್ಟೆ ಸಮಸ್ಯೆ ಸೇರಿದಂತೆ ಒಂದಿಲ್ಲೊಂದು ಸಂಕಷ್ಟವನ್ನು ಪ್ರತಿ ವರ್ಷ ಜಿಲ್ಲೆಯ ಮಾವು ಬೆಳೆಗಾರರು ಎದುರಿಸುವಂತಾಗಿದೆ. ಕಳೆದ ವರ್ಷ ಮಾವು ಬೆಳೆ ಕಡಿಮೆಯಿದ್ದರೂ ಇದ್ದ ಬೆಳೆಯನ್ನೇ ಮಾರಾಟ ಮಾಡಲಾಗದೇ ಬೆಳೆಗಾರರು ನಷ್ಟ ಅನುಭವಿಸಿದ್ದರು.

ಮಾವಿನ ಸೀಸನ್‌ ವೇಳೆಯೇ ಕೊರೊನಾ ಸೋಂಕು ಆರಂಭವಾಗಿ ಲಾಕ್‌ಡೌನ್‌ ಮಾಡಲಾಗಿತ್ತು. ಇದರಿಂದ ಇದ್ದ ಬೆಳೆಯನ್ನೇ ಸಾಗಿಸಲಾಗದೇ, ಮಾರುಕಟ್ಟೆಗೆ ಒಯ್ಯಲಾಗದೇ ರೈತರು ನಷ್ಟ ಅನುಭವಿಸಿದ್ದರು. ಈ ಸಲುವಾದರೂ ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿದ್ದ ರೈತರಿಗೆ ಈ ವರ್ಷದ ಆರಂಭದಲ್ಲಿ ಸುರಿದ ಅಕಾಲಿಕ ಮಳೆಯಿಂದ ಮಾವು ನಿರೀಕ್ಷಿತ ಪ್ರಮಾಣದಲ್ಲಿ ರೈತರ ಕೈ ಸೇರದ ಸ್ಥಿತಿ ಎದುರಾಗಿದೆ. ಅಲ್ಲದೇ, ಸದ್ಯ ಗಿಡಗಳಲ್ಲಿ ಎರಡನೇ ಬಾರಿ ಹೂ ಬಿಟ್ಟಿದ್ದರೂ ಅದರ ಫಸಲು ಮೇ ತಿಂಗಳಲ್ಲಿ ಆರಂಭಗೊಳ್ಳಲಿದೆ. ಈ ಸಮಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭಗೊಳ್ಳುವುದರಿಂದ ಆಲಿಕಲ್ಲು ಮಳೆ ಆತಂಕ ರೈತನ್ನು ಕಾಡುವ ಸಾಧ್ಯತೆಯಿದೆ. ಮಾವು ಬೆಳೆಗಾರರು ಒಂದಿಲ್ಲೊಂದು ಸಂಕಷ್ಟ ಎದುರಿಸುವಂತಾಗಿದೆ.

ಪರ್ಯಾಯ ಬೆಳೆಗಳತ್ತ ಮುಖ: ಜಿಲ್ಲೆಯ ಹಾನಗಲ್ಲ ತಾಲೂಕಿನಲ್ಲಿ ಗರಿಷ್ಠ 3200 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಶಿಗ್ಗಾವಿ ತಾಲೂಕಿನಲ್ಲೂ 1500 ಸಾವಿರ ಹೆಕ್ಟೇರ್‌ಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಾವು ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 5,700 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯಿದೆ. ಆದರೆ, ಪ್ರತಿ ವರ್ಷ ವಿವಿಧ ರೋಗಗಳು, ಹವಾಮಾನ ವೈಪರೀತ್ಯ, ದರ ಕುಸಿತ, ಮಾರುಕಟ್ಟೆ ಸಮಸ್ಯೆ, ಇಳುವರಿ ಕುಂಠಿತ, ಮಧ್ಯವರ್ತಿಗಳಿಂದ ವಂಚನೆ ಸೇರಿದಂತೆ ಮಾವು ಬೆಳೆಗಾರರಿಗೆ ಎದುರಾಗುತ್ತಿರುವ ಸಮಸ್ಯೆಗಳಿಂದ ರೈತರು ಬೇಸತ್ತು ಮಾವು ಕೃಷಿಯಿಂದ ವಿಮುಕ್ತರಾಗಿ ಪರ್ಯಾಯ ಬೆಳೆಗಳತ್ತ ಮುಖ ಮಾಡುತ್ತಿದ್ದಾರೆ. ಹಾನಗಲ್ಲ ತಾಲೂಕಿನ ಬೊಮ್ಮನಹಳ್ಳಿ ಭಾಗದಲ್ಲಿ ಅನೇಕ ರೈತರು ಮಾವಿನ ಮರಗಳನ್ನು ಕಡಿದುರುಳಿಸುತ್ತಿದ್ದಾರೆ.

ಮಾರ್ಗದರ್ಶನದ ಕೊರತೆ: ಜಿಲ್ಲೆಯ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಸಮರ್ಪಕ ಮಾಹಿತಿ, ಮಾರ್ಗದರ್ಶನ ನೀಡುತ್ತಿಲ್ಲ. ತೋಟಗಾರಿಕೆ ಇಲಾಖೆ ರೈತರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. ಜಿಲ್ಲೆಯ ಮಾವು ಬೆಳೆಗಾರರಿಗಾದ ನಷ್ಟದ ಬಗ್ಗೆ ಇಲಾಖೆ ಸರ್ಕಾರಕ್ಕೆ ಸೂಕ್ತ ಮಾಹಿತಿ ನೀಡುತ್ತಿಲ್ಲ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿವೆ. ಮಾವಿನ ಮರಗಳಿಗೆ ರೋಗ ಬಾಧೆ ಎದುರಾದಾಗ ಇಲಾಖೆಯಿಂದ ರೈತರಿಗೆ ಸೂಕ್ತ ಮಾರ್ಗದರ್ಶ ಸಿಗುತ್ತಿಲ್ಲ. ಸರ್ಕಾರದ ಯೋಜನೆಗಳನ್ನು ಬೆಳೆಗಾರರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಇಲಾಖೆ ಅಧಿ ಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆಂಬ ದೂರುಗಳು ಕೇಳಿ ಬರುತ್ತಿದ್ದು, ಮಾವು ಬೆಳೆಗಾರರು ಅತಂತ್ರ ಸ್ಥಿತಿ ಎದುರಿಸುವಂತಾಗಿದೆ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

25-kota

Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.