ಸವಣೂರಿನಲ್ಲಿ ಸಾಮೂಹಿಕ ಪ್ರಾರ್ಥನೆ: ಲಾಠಿ ಏಟಿನ ರುಚಿ
Team Udayavani, Apr 18, 2020, 5:08 PM IST
ಸವಣೂರು: ಲಾಕ್‌ಡೌನ್ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ಸುಮಾರು 30ಕ್ಕೂ ಹೆಚ್ಚು ಮುಸ್ಲಿಮರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಘಟನೆ ಪಟ್ಟಣದ ಶುಕ್ರವಾರಪೇಟೆಯ ಜುಮ್ಮಾ ಮಸೀದಿಯಲ್ಲಿ ಶುಕ್ರವಾರ ನಡೆದಿದೆ.
ಗುರುವಾರವಷ್ಟೇ ತಾಲೂಕಾಡಳಿತ ಮುಸ್ಲಿಂ ಪ್ರಮುಖರ ಸಭೆ ಮಾಡಿ ಸಾಮೂಹಿಕ ಪ್ರಾರ್ಥನೆ ಬದಲು ಮನೆಯಲ್ಲೇ ಅಂತರ ಕಾಯ್ದುಕೊಂಡು ಪ್ರಾರ್ಥನೆ ಮಾಡುವಂತೆ ಸೂಚಿಸಿತ್ತು. ಮುಖಂಡರೂ ಒಪ್ಪಿಗೆ ಸೂಚಿಸಿದ್ದರು. ಆದರೆ, ಶುಕ್ರವಾರದ ನಮಾಜ ಸಮಯದಲ್ಲಿ ಮಸೀದಿಯಲ್ಲಿ 30ಕ್ಕೂ ಹೆಚ್ಚು ಜನರು ಸಾಮೂಹಿಕ ಪ್ರಾರ್ಥನೆಗೆ ಮುಂದಾಗಿದ್ದಾರೆ.
ಈ ವೇಳೆ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಹಾಗೂ ಸಿಪಿಐ ಶಶಿಧರಜಿ.ಎಂ. ನೇತೃತ್ವದ ತಂಡ ದಾಳಿ ಮಾಡಿ ಲಾಠಿ ರುಚಿ ತೋರಿಸಿ ಪ್ರಾರ್ಥನೆಯಲ್ಲಿ ತೊಡಗಿದ್ದವರನ್ನು ಚದುರಿಸಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈವರೆಗೆ ಯಾರನ್ನು ವಶಕ್ಕೆ ಪಡೆದಿಲ್ಲ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.