ಆದಾಯ ಸೋರಿಕೆ ತಡೆಗೆ ಕ್ರಮ


Team Udayavani, May 30, 2020, 3:48 PM IST

ಆದಾಯ ಸೋರಿಕೆ ತಡೆಗೆ ಕ್ರಮ

ಹಾವೇರಿ: ಕೋವಿಡ್ ಲಾಕ್‌ಡೌನ್‌ ಸಡಿಲಿಕೆ ಬಳಿಕಸಾರಿಗೆ ವೆಚ್ಚ ಕಡಿಮೆ ಮಾಡಿ, ಸೋರಿಕೆ ತಡೆದು ಸಂಸ್ಥೆಯನ್ನು ಲಾಭಕ್ಕೆ ತರುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಯೋಜನಾ ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಪ್ರತಿ ಮೂರು ತಿಂಗಳಿಗೊಮ್ಮೆ ಕ್ರಿಯಾ ಯೋಜನೆಗಳನ್ನು ಸಿದ್ಧ ಮಾಡಿಕೊಳ್ಳಬೇಕು. ಉತ್ತಮ ಸೇವೆ ಜೊತೆಗೆ ಸಾರಿಗೆ ನಷ್ಟ ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳುಹಾಗೂ ಸಿಬ್ಬಂದಿ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.

ನಿರ್ವಹಣಾ ವೆಚ್ಚ, ಸವಕಳಿ ವೆಚ್ಚವನ್ನು ಕಡಿಮೆ ಮಾಡಬೇಕು, ಆದಾಯ ಸೋರಿಕೆ ತಡೆಯಬೇಕು. ರಸ್ತೆ ಸಾರಿಗೆ ಸಂಸ್ಥೆಗಳಿಗೆ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಸ್ವಚ್ಛತೆ, ಸಮಯಕ್ಕೆ ಸರಿಯಾಗಿ ವಾಹನ ಓಡಿಸುವ ಕೆಲಸ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಯಾವ ಯಾವ ಮಾರ್ಗದಲ್ಲಿ ಸಾರಿಗೆ ಬಸ್‌ಗಳು ಓಡಾಡುತ್ತಿವೆ. ಇದರಲ್ಲಿ ಯಾವ ಮಾರ್ಗಗಳು ಲಾಭದಾಯಕ, ಯಾವ ಮಾರ್ಗಗಳಲ್ಲಿ ನಷ್ಟ ಉಂಟಾಗುತ್ತಿದೆ, ಯಾವ ಮಾರ್ಗದಲ್ಲಿ ಹೆಚ್ಚುವರಿ ಬಸ್‌ಗಳು ಓಡಾಡುತ್ತವೆ ಎಂಬುದನ್ನು ವಿಭಾಗವಾರು ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಮಾರ್ಗಗಳಲ್ಲಿ ಲಾಭ ತರುವ ನಿಟ್ಟಿನಲ್ಲಿ ಯೋಜನೆ ತಯಾರಿಸಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಯೋಜನೆ ಮಾಡಿ ಸ್ಥಳೀಯ ಅಧಿಕಾರಿಗಳೊಂದಿಗೆ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕ್ರಮವಹಿಸಬೇಕು ಎಂದರು.

ಹೊಸ ಬಸ್‌ ಬೇಡಿಕೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಜಿಲ್ಲೆಯ ರಸ್ತೆ ಸಾರಿಗೆ ಸಂಸ್ಥೆ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕನಿಷ್ಠ 100 ರಿಂದ 150 ಹೊಸ ಬಸ್‌ಗಳನ್ನು ಏಕ ಕಾಲದಲ್ಲಿ ನೀಡಬೇಕು. ಜಿಲ್ಲೆಯಲ್ಲಿ ಅವಶ್ಯವಿರುವ ಬಸ್‌ ನಿಲ್ದಾಣ, ಸಾರಿಗೆ ಡಿಪೋಗಳ ಉನ್ನತೀಕರಣ ಕಾಮಗಾರಿ, ನವೀಕರಣಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.

ಸಂಸದರಾದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ತಮ್ಮ ಕ್ಷೇತ್ರದ ಸಾರಿಗೆ ಸಮಸ್ಯೆ ಹಾಗೂ ಬೇಡಿಕೆ ಬಗ್ಗೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಆಯಾ ಕ್ಷೇತ್ರದ ಶಾಸಕರ ಬೇಡಿಕೆ ಹಾಗೂ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಬೇಕು. ಹೊಸ ಕಟ್ಟಡ ಮತ್ತು ನವೀಕರಣಕ್ಕೆ ಕ್ರಿಯಾ ಯೋಜನೆ ರೂಪಿಸಿ ಕಳುಹಿಸಿದರೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದರು.

ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್‌.ಪಾಟೀಲ, ಜಿಪಂ ಸದಸ್ಯರಾದ ಸಿದ್ಧರಾಜ ಕಲಕೋಟಿ, ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಎಸ್ಪಿ ಕೆ.ಜಿ.ದೇವರಾಜು, ಜಿಪಂ ಸಿಇಒ ರಮೇಶದೇಸಾಯಿ, ಅಪರ ಜಿಲ್ಲಾಧಿಕಾರಿ ಎಸ್‌. ಯೋಗೇಶ್ವರ, ಜಿಲ್ಲಾ ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಕ ಜಗದೀಶ್‌ ಇತರರು ಇದ್ದರು.

ಟಾಪ್ ನ್ಯೂಸ್

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.