ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಡಿಜೆ ಹಳ್ಳಿ ಕೃತ್ಯ ಮಾಡಿದ್ದಾರೆ: ಬಿ ಸಿ ಪಾಟೀಲ್
Team Udayavani, Aug 16, 2020, 3:00 PM IST
ಹಾವೇರಿ (ಹಿರೇಕೆರೂರು): ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಕರ್ನಾಟಕದ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿಯ ದುಷ್ಕೃತ್ಯ ನಡೆಸಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದರು.
ಹಿರೇಕೆರೂರಿನಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲೆಂದು ಪೂರ್ವ ನಿಯೋಜಿತವಾಗಿಯೇ ಈ ದುಷ್ಕೃತ್ಯವೆಸಗಲಾಗಿದೆ. ಗಲಭೆಯಲ್ಲಿ ಬಂಧಿಸಿದವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆ. ಆದರೆ ಅವರು ನಿಜವಾಗಿಯೂ ಅಮಾಯಕರಲ್ಲ. ರಾಜಕೀಯ ಪಿತೂರಿ ಕಾರಣಕ್ಕಾಗಿಯೇ ದುಷ್ಕರ್ಮಿಗಳು ಕಾಂಗ್ರೆಸ್ ಶಾಸಕರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ ಎಂದರು.
ದಲಿತ ಶಾಸಕರ ನಿವಾಸಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರೂ ಕೂಡ ಕಾಂಗ್ರೆಸ್ ನಾಯಕರು ಅವರದ್ದೇ ಪಕ್ಷದ ಶಾಸಕರನ್ನು ಸಮರ್ಥಿಸಿಕೊಳ್ಳಲು ಆಗುತ್ತಿಲ್ಲ. ದಲಿತ ಶಾಸಕನಿಗೆ ಕಾಂಗ್ರೆಸ್ ಪಕ್ಷದಲ್ಲಿಯೇ ರಕ್ಷಣೆಯಿಲ್ಲ. ಕಲ್ಲು ಹೊಡೆಯುವವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆ. ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು ಪೊಲೀಸರಿಗೆ ಕಲ್ಲು ಹೊಡೆದವರ ನಿವಾಸಕ್ಕೆ ಭೇಟಿ ನೀಡುತ್ತಾರೆ. ಆದರೆ ಕಲ್ಲೇಟಿನಿಂದ ಗಾಯಗೊಂಡಿರುವ ಪೊಲೀಸರನ್ನು ಮಾಜಿ ಗೃಹ ಮಂತ್ರಿಗಳಾಗಿರುವ ಕೆ.ಜೆ. ಜಾರ್ಜ್ ಅವರು ಏಕೆ ಭೇಟಿ ನೀಡಲಿಲ್ಲ ಎಂದು ಬಿ.ಸಿ.ಪಾಟೀಲ್ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.