ದಿನಸಿ ಅಂಗಡಿಗಳಲ್ಲಿ ಆಹಾರ ಧಾನ್ಯಗಳ ದರ ಫಲಕ ಹಾಕಬೇಕು: ಸಚಿವ ಗೋಪಾಲಯ್ಯ
Team Udayavani, Apr 29, 2020, 3:14 PM IST
ಹಾವೇರಿ: ಪಡಿತರ ಆಹಾರ ಧಾನ್ಯ ನೀಡಲು ಗ್ರಾಹಕರಿಂದ ಹಣ ಪಡೆದ ಹಾಗೂ ತೂಕ ಮೋಸ ಮಾಡಿದ ಆರೋಪಕ್ಕೆ ಸಂಬಂಧಿಸಿ ರಾಜ್ಯದಲ್ಲಿ 146 ಅಂಗಡಿಗಳನ್ನು ಅಮಾನತು ಮಾಡಲಾಗಿದೆ. ನಾಲ್ಕು ಲಕ್ಷ ರೂ.ಗಳಿಗೂ ಅಧಿಕ ದಂಡ ಪಡೆಯಲಾಗಿದೆ. ಪಡಿತರ ಹಂಚದೆ ಗ್ರಾಹಕರಿಗೆ ಮೋಸ ಮಾಡಿದವರಿದ್ದರೆ ಅವರಿಗೆ ಮುಂದಿನ ತಿಂಗಳಿನ ಆಹಾರಧಾನ್ಯ ನೀಡುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಕೆ. ಗೋಪಾಲಯ್ಯ ಹೇಳಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ಪಡಿತರ ಆಹಾರ ವಿತರಣೆ ಸರಿಯಾಗಿ ಆಗುತ್ತಿದೆಯೋ ಇಲ್ಲವೋ ಗಮನಿಸಲು ಅಧಿಕಾರಿಗಳ 8-10 ತಂಡಗಳನ್ನು ಮಾಡಿ ಪರಿಶೀಲಿಸಲು ಸೂಚಿಸಲಾಗಿದೆ. ದಿನಸಿ ಅಂಗಡಿಗಳಲ್ಲಿ ಆಹಾರ ಧಾನ್ಯಗಳ ದರ ಫಲಕ ಹಾಕಬೇಕು. ದುಬಾರಿ ದರಕ್ಕೆ ಮಾರಾಟ ಆಗದಂತೆ ಕ್ರಮ ವಹಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ ಎಲ್ಲರಿಗೂ ಆಹಾರ ಧಾನ್ಯ ಪೂರೈಸಲು ಹಾಗೂ ಈ ಬಗ್ಗೆ ನ್ಯಾಯಬೆಲೆ ಅಂಗಡಿಗಳ ಎದುರು ಮಾಹಿತಿ ಫಲಕ ಹಾಕಲು ಸಹ ಆದೇಶಿಸಲಾಗಿದೆ ಎಂದು ಸಚಿವ ಗೋಪಾಲಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.