ಮಕ್ಕಳೊಂದಿಗೆ ಪಾಠ ಆಲಿಸಿದ ಶಿಕ್ಷಣ ಸಚಿವ

Team Udayavani, Dec 24, 2019, 4:01 PM IST

hv-tdy-1

ಹಾವೇರಿ: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಅನಿರೀಕ್ಷಿತವಾಗಿ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಪಕ್ಕದಲ್ಲಿಯೇ ಕುಳಿತು ಶಿಕ್ಷಕರ ಪಾಠ ಆಲಿಸಿ, ಬಳಿಕ ವಿದ್ಯಾರ್ಥಿಗಳಿಗೆ ಸಲಹೆ ನೀಡಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾದರು.

ಸೋಮವಾರ ಧಾರವಾಡಕ್ಕೆ ಹೋಗುವ ಮಾರ್ಗಮಧ್ಯೆ ಜಿಲ್ಲೆಯ ಬಂಕಾಪುರ ಶಾಲೆಗೆ ಭೇಟಿ ಮಾಡಲು ಸಚಿವರು ನಿರ್ಧರಿಸಿದ್ದರು. ಈ ಪೂರ್ವನಿರ್ಧಾರವನ್ನು ಬದಲಾಯಿಸಿದ ಸಚಿವರು, ನೆಲೊಗಲ್ಲ ಗ್ರಾಮದ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು. ಆಗ ಶಾಲೆಯಲ್ಲಿ 10ನೇ ತರಗತಿಯಲ್ಲಿಗಣಿತ ಪಾಠ ನಡೆಯುತ್ತಿತ್ತು. ವಿದ್ಯಾರ್ಥಿಗಳ ಪಕ್ಕದಲ್ಲಿಯೇ ಕುಳಿತ ಕೆಲ ನಿಮಿಷಗಳ ಕಾಲ ಸಚಿವರು ಪಾಠ ಆಲಿಸಿದರು. ಬಳಿಕ ಮಕ್ಕಳಿಂದಲೇ ಗಣಿತ ವಿಷಯದ ಪಾಠ ಮಾಡಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಆಂಜನೇಯ ಎಂಬ ಬಡ ವಿದ್ಯಾರ್ಥಿ ಛಲದಿಂದ ಓದಿ ಉನ್ನತ ಸ್ಥಾನಕ್ಕೇರಿದ ಬಗ್ಗೆ ಸಣ್ಣ ಕಥೆ ಸಹ ಹೇಳಿ ಸಚಿವರು ಮಕ್ಕಳನ್ನು ಹುರಿದುಂಬಿಸಿದರು. ಕಡುಬಡತನದಿಂದ ಬಂದ ವಿದ್ಯಾರ್ಥಿ ಆಂಜನೇಯ ಎಂಬುವನು ಛಲದಿಂದ 10ನೇ ತರಗತಿಯಲ್ಲಿ ಶೇ.91ರಷ್ಟು ಅಂಕ ಪಡೆದು, ಮುಂದೆ ಐಐಟಿ ಪರೀಕ್ಷೆ ಬರೆದು ಈಗ ಉನ್ನತ ಸ್ಥಾನದಲ್ಲಿರುವುದನ್ನು ಮಕ್ಕಳಿಗೆ ತಿಳಿಸಿದ ಸಚಿವರು, ಓದನ್ನು ಒಂದು ವ್ರತವಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು. ಮಕ್ಕಳೊಂದಿಗೆ ಕೆಲಹೊತ್ತು ಚರ್ಚೆ, ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಚಿವರು, ಗಣಿತ, ಇಂಗ್ಲಿಷ್‌, ವಿಜ್ಞಾನ ವಿಷಯ ಕಷ್ಟವಾಗಿದೆಯೇ? ಮನೆಯಲ್ಲಿ ವಿದ್ಯುತ್‌ ಸಮಸ್ಯೆ ಇದೆಯೇ? ಯಾವುದೇ ಸಮಸ್ಯೆ ಇದ್ದರೂ ತಿಳಿಸಿ. ಎಲ್ಲ ಸೌಲಭ್ಯ ಒದಗಿಸಿಕೊಡುತ್ತೇವೆ ಎಂದು ಮಕ್ಕಳಿಗೆ ಕೇಳಿದರು. ಮಕ್ಕಳು ಪರೀಕ್ಷೆಗೆ ಹೆದರದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿ ಕಾರಿಗಳಿಗೆ ಸೂಚನೆ ನೀಡಿದರು ಹಾಗೂ ಮಕ್ಕಳ ಶಿಕ್ಷಣದ ಕುರಿತು ಶಿಕ್ಷಕರು ಕೈಗೊಂಡ ಕ್ರಮಗಳ ಕುರಿತು ಶಿಕ್ಷಕರಿಂದ ಮಾಹಿತಿ ಸಂಗ್ರಹಿಸಿದರು.

ಹತ್ತನೇ ತರಗತಿಯ ಮಕ್ಕಳು ಪ್ರತಿನಿತ್ಯ ಬೆಳಗ್ಗೆ 4 ಗಂಟೆಗೆ ಎದ್ದು ಶಿಕ್ಷಕರ ಮೊಬೈಲ್‌ಗೆ ಮಿಸ್‌ಕಾಲ್‌ ಕೊಡಬೇಕು. ಮತ್ತು ಶಿಕ್ಷಕರು ಕೆಲ ಹೊತ್ತು ಬಿಟ್ಟು ಕರೆ ಮಾಡಿ ವಿದ್ಯಾರ್ಥಿ ಎದ್ದು ಓದುತ್ತಿರುವುದನ್ನು ಖಚಿತಪಡಿಸಿಕೊಳ್ಳುವ ಯೋಜನೆ ಮಾಡಿಕೊಂಡಿರುವ ಬಗ್ಗೆ ಶಿಕ್ಷಕರು ಸಚಿವರಲ್ಲಿ ಹಂಚಿಕೊಂಡರು. ಪಾಲಕರಿಗೆ ಕರೆದು ತಿಳಿವಳಿಕೆ ಕೊಡಲು ಸಹ ಸಚಿವರು ಸಲಹೆ ನೀಡಿದರು. ಶಾಸಕ ನೆಹರು ಓಲೇಕಾರ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.