ಅಧಿಕಾರಿಗಳೇ ನಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ
Team Udayavani, Feb 25, 2021, 4:30 PM IST
ರಾಣಿಬೆನ್ನೂರ: ವಿವಿಧ ಅಭಿವೃದ್ಧಿ ಕಾಮಗಾರಿಗೆ ತಾಲೂಕು ಮಟ್ಟದ ಅನೇಕ ಅಧಿ ಕಾರಿಗಳು ನನಗೆ ರಿಯಾದ ಮಾಹಿತಿ ನೀಡುತ್ತಿಲ್ಲ. ಈ ಬಗ್ಗೆ ಶಾಸಕರನ್ನು ಕೇಳಿದರೆ ಅಧಿ ಕಾರಿಗಳ ಮೇಲೆ ಹೇಳುತ್ತಾರೆ. ಅ ಧಿಕಾರಿಗಳೇ ನಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ನಾನು ಮತ್ತು ಸ್ಥಳೀಯ ಶಾಸಕರು ಅಭಿವೃದ್ಧಿಗೆ ಕೈಜೋಡಿಸಿದ್ದು ಅಧಿ ಕಾರಿಗಳು ಸ್ಪಂದಿಸಬೇಕು ಎಂದು ತೋಟಗಾರಿಕೆ ಮತ್ತು ರೇಷ್ಮೆ ಖಾತೆ ಸಚಿವ ಆರ್. ಶಂಕರ ಹೇಳಿದರು.
ಸ್ಥಳೀಯ ಪರಿವೀಕ್ಷಣ ಮಂದಿರದಲ್ಲಿ ಏರ್ಪಡಿಸಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಧಿಕಾರಿಗಳು ಮತ್ತೆ ಹೀಗೆ ಯಡವಟ್ಟು ಮಾಡಿದರೆ ಪರಿಣಾಮ ಸರಿ ಇರದು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ರಾಣಿಬೆನ್ನೂರ ತೊರೆಯುತ್ತೇನೆ ಎಂದು ನನ್ನ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಕ್ಷೇತ್ರದ ಅಭಿವೃದ್ಧಿ ನನ್ನ ಗುರಿಯಾಗಿದ್ದು, ನಾನೆಲ್ಲೂ ಹೋಗಲ್ಲ, ಅದಕ್ಕಾಗಿ ಸ್ವಂತ ಮನೆ ಮಾಡಿರುವೆ. ಇಲ್ಲೇ ಇರುವೆ ಎಂದರು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಓಸಿ, ಇಸ್ಪೀಟ್, ಅಕ್ರಮ ಮರಳು ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳು ದಿನ ದಿನಕ್ಕೂ ಹೆಚ್ಚುತ್ತಿದ್ದು, ಇವುಗಳಿಗೆ ಕೂಡಲೇ ಹಿರಿಯ ಪೊಲೀಸ್ ಅಧಿ ಕಾರಿಗಳು, ಸಂಬಂಧಿಸಿದ ಅ ಧಿಕಾರಿಗಳು ಕಡಿವಾಣ ಹಾಕಬೇಕು. ಬಹಳ ದಿನಗಳಿಂದ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ನಾಗರೀಕರಿಂದ ದೂರುಗಳು ನಿರಂತರವಾಗಿ ಬರುತ್ತಿವೆ. ಈ ಬಗ್ಗೆ ಎಚ್ಚರವಹಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚಿಸಿದರು.
ಮಾವು ಮತ್ತು ರೇಷ್ಮೆ ಬೆಳೆಗಾರರಿಗೆ ಹೊಸ ತಳಿಗಳ ಬಗ್ಗೆ ಮಾಹಿತಿ ತಿಳಿಸಲು ರೈತರಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 715 ಕೃಷಿ ಕೇಂದ್ರಗಳಿಗೆ ವೆಬ್‌ಸೈಟ್ ಮೂಲಕ ಮಾಹಿತಿ ನೀಡಲಾಗುತ್ತಿದೆ. ರೇಷ್ಮೆ ಗೂಡು ನಿರ್ಮಾಣ ಮಾಡುವ ಪ್ರೋತ್ಸಾಹಧನದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.