ಸಿಡಿ ಪ್ರಕರಣ ಸಿಬಿಐಗೆ ಒಪ್ಪಿಸಿದ್ದರೆ ಚೆನ್ನಾಗಿತ್ತು: ಯತ್ನಾಳ
Team Udayavani, Mar 28, 2021, 7:42 PM IST
ರಾಣಿಬೆನ್ನೂರ: ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ಸಿಡಿ ಉತ್ಪಾದಕರು ಇದ್ದು, ಇವರಲ್ಲಿ ಐಪಿಎಸ್, ಐಎಎಸ್ ಅಧಿಕಾರಿಗಳು ಸೇರಿದಂತೆ ಶಾಸಕರ, ಮಂತ್ರಿಗಳ ಸಿಡಿಗಳ ವ್ಯಾಪಾರೀಕರಣ ನಡೆಯುತ್ತಿದೆ. ಖರೀದಿಸುವವರೂ ಇದ್ದಾರೆ, ಮಾರುವವರೂ ಇದ್ದಾರೆ. ಸಿಡಿ ವಿಚಾರಣೆಯನ್ನು ಎಸ್‌ಐಟಿಗೆ ಒಪ್ಪಿಸುವ ಬದಲು ಸಿಬಿಐಗೆ ಒಪ್ಪಿಸಿದ್ದರೆ ಎಲ್ಲಾ ಅಂಶಗಳು ಬಯಲಾಗುತ್ತಿದ್ದವು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಶನಿವಾರ ನಗರದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಪ್ರಾಮಾಣಿಕರು ಮತ್ತು ಅಪ್ರಾಮಾಣಿಕರೂ ಇದ್ದು, ಮೇ 2 ರ ನಂತರ ರಾಜ್ಯದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, ಮುಂದಿನ ದಿನಮಾನಗಳಲ್ಲಿ ರಾಜಕಾರಣದಲ್ಲಿ ಭಾರೀ ಬದಲಾವಣೆ ಆಗಲಿದೆ ಎಂದರು. ಸಿಎಂ ಯಡಿಯೂರಪ್ಪನವರು ಬಿಜೆಪಿ ಶಾಸಕರಿಗೆ ಅನುದಾನ ನೀಡುತ್ತಿಲ್ಲ. ಬದಲಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಮೀರ್ ಅಹಮದ್ ಅವರಿಗೆ ಸಾಕಷ್ಟು ಅನುದಾನ ನೀಡುವ ಮೂಲಕ ನೇರ ನುಡಿಯ ಮಾತನಾಡುವ ಬಿಜೆಪಿ ಶಾಸಕರಿಗೆ ಅನುದಾನ ದೊರೆಯುತ್ತಿಲ್ಲ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.