ಪರಿಸರ ನಾಶದಿಂದ ಪ್ರಕೃತಿ ವಿಕೋಪ: ಬಳ್ಳಾರಿ
Team Udayavani, May 22, 2019, 9:40 AM IST
ಹಾನಗಲ್ಲ: ಒಂದ ನೂರು ಸಸಿ ನೆಡುವ ಕಾರ್ಯಕ್ರಮಕ್ಕೆ ಜನತಾ ಶಿಕ್ಷಣ ಸೌಹಾರ್ದ ಸಂಸ್ಥೆ ಅಧ್ಯಕ್ಷ ಎ.ಎಸ್. ಬಳ್ಳಾರಿ ಚಾಲನೆ ನೀಡಿದರು.
ಹಾನಗಲ್ಲ: ಪ್ರಕೃತಿ ವಿಕೋಪ ಹವಾಮಾನದ ಏರುಪೇರಿನಿಂದ ಮಳೆಯಾಗದೆ, ಬಿರುಗಾಳಿ, ಮಹಾಪೂರಗಳಂತಹ ಅವಘಡ ಸಂಭವಿಸುತ್ತಿರುವುದಕ್ಕೆ ಅರಣ್ಯ ನಾಶವೇ ಕಾರಣ. ಪರಿಸರ ಸಂರಕ್ಷಿಸುವ ಕಾರ್ಯವಾಗದೆ ಹೋದರೆ ಮುಂದಿನ ಪೀಳಿಗೆ ತುಂಬಾ ಕಷ್ಟ ಅನುಭವಿಸಬೇಕಾಗುತ್ತದೆ ಎಂದು ಜನತಾ ಶಿಕ್ಷಣ ಸೌಹಾರ್ದ ಸಂಸ್ಥೆಯ ಅಧ್ಯಕ್ಷ ಎ.ಎಸ್. ಬಳ್ಳಾರಿ ತಿಳಿಸಿದರು.
ಮಂಗಳವಾರ ಹಳೇಕೋಟಿ ಪ್ರದೇಶದಲ್ಲಿರುವ ಜನತಾ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ಪರಿಸರ ಸಂರಕ್ಷಣೆಗಾಗಿ 100 ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ಪ್ರತಿಯೊಬ್ಬರು ಪರಿಸರ ಕಾಪಾಡುವ ಸಂಕಲ್ಪ ತೊಡಬೇಕಿದೆ. ಪರಿಸರ ನಾಶದಿಂದ ಮಾನವ ಸಂಕುಲ ತೀವ್ರ ಸಂಕಷ್ಟ ಅನುಭವಿಸುವ ಕಾಲ ದೂರವಿಲ್ಲ. ಹೀಗಾಗಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಿ ಮಕ್ಕಳಾದಿಯಾಗಿ ಎಲ್ಲರೂ ಪರಿಸರ ಕಾಪಾಡಲು ಮುಂದಾಗಬೇಕು. ಅರಣ್ಯ ಇಲಾಖೆಯವರು ಪರಿಸರ ಸಂರಕ್ಷಣೆ ಜಾಗೃತಿಯ ಮೂಡಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ವಿಷಯ ಎಂದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಪಿ.ದುಡ್ಡಗಿ ಮಾತನಾಡಿ, ಪ್ರತಿಯೊಂದು ಜೀವ, ಜಲ, ಮನುಷ್ಯ, ಪ್ರಾಣಿ, ಪಕ್ಷಿ ಉಸಿರಾಡಬೇಕಾದರೆ ಪರಿಸರ ಅಷ್ಟೆ ಅತ್ಯವಶ್ಯಕತೆಯಿದೆ. ಅವುಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಗಿಡ ಮರಗಳ ನೆಡುವುದರೊಂದಿಗೆ ಸಂರಕ್ಷಣೆ ಮಾಡಬೇಕಿದೆ. ಇಂದಿನಿಂದಲೇ ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪರಿಸರ ಕಾಪಾಡುವ ಸಂರಕ್ಷಿಸುವ ಪಣ ತೊಡಬೇಕು. ಹೀಗಿದ್ದಾಗ ಮಾತ್ರ ಪರಿಸರ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದ ಅವರು, ಈಗಾಗಲೆ ಇಲಾಖೆ ವತಿಯಿಂದ ಶಾಲಾ-ಕಾಲೇಜು ಹಾಗೂ ಸರಕಾರಿ ಕಚೇರಿಗಳಲ್ಲಿ ನೇರಳೆ, ಮಹಾಗನಿ, ಗೋಣಿ, ನೆಲ್ಲಿ, ಅರಳಿ, ಮಾವು, ಅತ್ತಿ, ಹೊಂಗೆ, ನುಗ್ಗೆ, ತಪಸ್ಸಿ, ಕರಿಬೇವು, ಹಲಸು, ಹೆಬ್ಬೇವು ನಿರಲೇ ಸೆರಿದಂತೆ ಹಲವು ವಿವಿಧ ತಳಿಯ ಗಿಡದ ಸಸಿಗಳು ಸೇರಿದಂತೆ ಪಟ್ಟಣದಲ್ಲಿ ಸುಮಾರು 900 ಗಿಡಗಳನ್ನು ನೆಡಲಾಗುತ್ತಿದೆ ಎಂದು ಬಿ.ಪಿ.ದುಡ್ಡಗಿ ತಿಳಿಸಿದರು.
ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎಚ್.ಬಳಿಗಾರ, ಮುಖ್ಯಶಿಕ್ಷಕ ಎಸ್.ಎಸ್.ಸವಣೂರ, ಜಿ.ಬಿ.ದೇಸಾಯಿ, ವಲಯ ಅರಣ್ಯಾಧಿಕಾರಿ ಪರಮೇಶ್ವರಪ್ಪ ಪೇಲನವರ, ವಿ.ಆರ್.ಪಾಟೀಲ, ಎಸ್.ಎಂ. ತಳವಾರ, ಬಿ.ಎಂ.ಹೊಸೂರ, ಜಿ.ಜಿ.ಓಲೆಕಾರ, ಹಾಗೂ ಇಲಾಖೆ ಸಿಬ್ಬಂದಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.