Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
Team Udayavani, Dec 2, 2024, 12:51 PM IST
ಹಾವೇರಿ: ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಘಟಿಕೋತ್ಸವದ ವೇದಿಕೆಗೆ ನನ್ನನ್ನು ಆಹ್ವಾನಿಸಿಲ್ಲ, ನಾನೂ ಬಂದರೂ ಯಾರೂ ಬಂದು ಸ್ವಾಗತಿಸಲಿಲ್ಲ ಎಂದು ಕ್ಯಾತೆ ತೆಗೆದ ನೂತನ ಶಾಸಕ ಯಾಸೀರ್ ಖಾನ್ ಪಠಾಣ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ಘಟನೆ ಸೋಮವಾರ ನಡೆಯಿತು.
ಜಾನಪದ ವಿವಿ ಆವರಣದಲ್ಲಿ ಜಾನಪದ ಶೈಲಿಯಲ್ಲಿ ಮೆರವಣಿಗೆ ಆರಂಭವಾಯಿತು. ಮೆರವಣಿಗೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಅವರು ಪಾಲ್ಗೊಂಡಿದ್ದರು. ಮೆರವಣಿಗೆ ವೇದಿಕೆಯತ್ತ ಸಾಗುತ್ತಿದ್ದಾಗ ಸ್ಥಳಕ್ಕೆ ಶಾಸಕ ಯಾಸೀರ್ ಖಾನ್ ಪಠಾಣ ಆಗಮಿಸಿದರು. ಮುಂದೆ ಹೋಗಿ ಸಚಿವರನ್ನು ಭೇಟಿಯಾಗಿ ಬಳಿಕ ಹಿಂದೆ ಬಂದ ಶಾಸಕರು ಬೆಂಬಲಿಗರೊಂದಿಗೆ ಗುಂಪು ಸೇರಿ ಘಟಿಕೋತ್ಸವದ ವೇದಿಕೆ ಮುಂದೆ ಆಗಮಿಸಿ, ನನ್ನನ್ನು ವೇದಿಕೆ ಕರೆದಿಲ್ಲಾ, ನಾನು ವಿಶ್ವವಿದ್ಯಾಲಯಕ್ಕೆ ಬಂದರೂ ಯಾರೂ ಸ್ವಾಗತಿಸಲಿಲ್ಲ, ನಿಮಗೆ ಮುಂದೆ ಐತಿ, ಯುನಿವರ್ಸಿಟಿಯವರು ಇಲ್ಲಿ ಬಾಳ್ವೆ ಮಾಡಿ ನೋಡ್ತಿನಿ ಎಂದು ಆವಾಜ್ ಹಾಕಿದರು. ಅಲ್ಲದೇ ನಮ್ಮ ಶಾಸಕರ ಹೆಸರನ್ನು ಕಾರ್ಡ್ ನಲ್ಲಿ ಹಾಕಿಲ್ಲ ಎಂದು ವಿವಿ ವಿರುದ್ಧ ಧಿಕ್ಕಾರ ಕೂಗಿದರು. ಆಗ ವಿವಿಯ ಸಿಬ್ಬಂದಿಯನ್ನು ಎಳದಾಡಿದ ಶಾಸಕ ಬೆಂಬಲಿಗರು ದರ್ಪ ತೋರಿದರು.
ಇದನೆಲ್ಲಾ ನೋಡುತ್ತಿದ್ದ ವಿದ್ಯಾರ್ಥಿಗಳು, ಸಭೀಕರು ಏನಿದು ಶಾಸಕರಿಗೆ ಘಟಿಕೋತ್ಸವದ ಶಿಷ್ಟಾಚಾರವೇ ಗೊತ್ತಿಲ್ಲ ಎಂದು ಮಾತನಾಡಿಕೊಂಡರು.
ಇದನ್ನೂ ಓದಿ: Farmers Protest: ದೆಹಲಿಯತ್ತ ರೈತರ ಮೆರವಣಿಗೆ… ದೆಹಲಿ-ನೋಯ್ಡಾ ಗಡಿಯಲ್ಲಿ ಟ್ರಾಫಿಕ್ ಜಾಮ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಸ್ತಿ ವಿವಾದ: ಸುಪಾರಿ ಕೊಟ್ಟು ಚಿಕ್ಕಪ್ಪನ ಕೊಲೆ… ಪ್ರಕರಣ ಭೇದಿಸಿದ ಚೆನ್ನಗಿರಿ ಪೊಲೀಸರು
Munirathna: ಮುನಿರತ್ನ ವಿರುದ್ಧದ ಮತ್ತೂಂದು ಕೇಸ್ ಎಸ್‌ಐಟಿಗೆ ವರ್ಗಾವಣೆ?
IPS Officer: ಹಾಸನದಲ್ಲಿ ಜೀಪ್ ಅಪಘಾತ; ಪ್ರೊಬೇಷನರಿ ಐಪಿಎಸ್ ಅಧಿಕಾರಿ ಸಾವು
Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್
Local Body Election: ಫೆಬ್ರವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಡಿಸಿಎಂ ಡಿಕೆಶಿ ಸುಳಿವು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Tollywood: ಓಯೋ ರೂಮಲ್ಲಿ ಡ್ರಗ್ಸ್ ಪಾರ್ಟಿ; ಖ್ಯಾತ ನೃತ್ಯ ಸಂಯೋಜಕ ಸೇರಿ ನಾಲ್ವರ ಬಂಧನ
Kaup: ಬೆಳಪು ರೈಲ್ವೇ ನಿಲ್ದಾಣ ರಸ್ತೆಗೆ ಕೊನೆಗೂ ದುರಸ್ತಿ ಭಾಗ್ಯ !
Maharashtra 10 ದಿನ ಕಳೆದರೂ ಬಗೆಹರಿಯದ ಸಿಎಂ ಆಯ್ಕೆ ಕಗ್ಗಂಟು; ಅಜಿತ್ ಪವಾರ್ ದೆಹಲಿಗೆ
Udupi:ಸದ್ಯ ವಾತಾವರಣವೇನೋ ಚೆನ್ನಾಗಿದೆ ಆದರೆ ಕಲ್ಲಂಗಡಿ ಬೆಳೆಗಾರರಲ್ಲಿನ್ನೂ ಮನೆ ಮಾಡಿದ ಆತಂಕ
ಆಸ್ತಿ ವಿವಾದ: ಸುಪಾರಿ ಕೊಟ್ಟು ಚಿಕ್ಕಪ್ಪನ ಕೊಲೆ… ಪ್ರಕರಣ ಭೇದಿಸಿದ ಚೆನ್ನಗಿರಿ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.