ಫಲಾನುಭವಿಗಳಿಗೆ ತಲುಪುತ್ತಿಲ್ಲ ಮಾಸಾಶನ
ಬ್ಯಾಡಗಿ: ಅಂಚೆ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತನಿಖಾ ಅಧಿಕಾರಿ ಸಿ.ಪಿ.ಆಡೂರ ಮಾತನಾಡಿದರು.
Team Udayavani, May 1, 2019, 12:49 PM IST
ಬ್ಯಾಡಗಿ: ಅಂಚೆ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತನಿಖಾ ಅಧಿಕಾರಿ ಸಿ.ಪಿ.ಆಡೂರ ಮಾತನಾಡಿದರು.
ಬ್ಯಾಡಗಿ: ಸಾಮಾಜಿಕ ಭದ್ರತೆ ಯೋಜನೆಯಡಿ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳಿಗೆ ಪ್ರತಿ ತಿಂಗಳು ಸರಿಯಾಗಿ ಹಣ ತಲುಪುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತನಿಖಾಧಿಕಾರಿ ಸಿ.ಪಿ.ಆಡೂರ ಎಚ್ಚರಿಸಿದರು.
ಅಣ್ಣಾ ಹಜಾರೆ ಭ್ರಷ್ಟಾಚಾರ ವಿರೋಧಿ ಜನಾಂದೋಲನ ಜಿಲ್ಲಾ ಘಟಕ ಲಿಖೀತ ದೂರು ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಅಂಚೆ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲೇ ಉತ್ತಮ ಇತಿಹಾಸ ಹೊಂದಿರುವ ಅಂಚೆ ಇಲಾಖೆಗೆ ಮಸಿಬಳಿಯುವಂಥ ಕೆಲಸ ಕೆಲವು ಪೋಸ್ಟ್‌ಮನ್‌ಗಳಿಂದಾಗುತ್ತಿದೆ. ಈ ವಿಷಯದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಸರ್ಕಾರದಿಂದ ಬಿಡುಗಡೆಗೊಳಿಸಿದ ಹಣವು ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದಲೇ ಅಂಚೆ ಇಲಾಖೆಯನ್ನು ಆಯ್ಕೆ ಮಾಡಿಕೊಂಡು ತನ್ಮೂಲಕ ಫಲಾನುಭವಿಗಳಿಗೆ ಹಣ ವಿತರಿಸಲಾಗುತ್ತಿದೆ. ಅದಾಗ್ಯೂ ಸಹ ನಿಯತ್ತಿಗೆ ಹೆಸರಾದಂತಹ ಅಂಚೆ ಇಲಾಖೆಯ ಮೇಲೆಯೇ ಸಾರ್ವಜನಿಕರು ದೂರು ನೀಡುವಂತಹ ಸ್ಥಿತಿ ಬಂದೊದಗಿರುವುದು ದುರದೃಷ್ಟಕರ ಸಂಗತಿ ಎಂದರು.
ಜಿಲ್ಲಾ ಘಟಕದ ಸಂಚಾಲಕ ಹಾಗೂ ಮಾಜಿ ಸೈನಿಕ ಮಲ್ಲೇಶಪ್ಪ ಚಿಕ್ಕಣ್ಣನವರ ಮಾತನಾಡಿ, ಅಂಚೆ ಇಲಾಖೆಯಲ್ಲಿ ಪಾರದರ್ಶಕತೆ ಮಾಯವಾಗಿದೆ. ವಯೋವೃದ್ಧರು, ವಿಕಲಚೇತನರು, ವಿಧವೆಯರಲ್ಲಿ ಬಹುತೇಕರು ಅನಕ್ಷರಸ್ಥರಾಗಿದ್ದಾರೆ. ಇದನ್ನೇ ದೌರ್ಬಲ್ಯವೆಂದು ಭಾವಿಸಿಕೊಂಡ ಅಂಚೆ ಇಲಾಖೆ ಸಿಬ್ಬಂದಿ ಪ್ರತಿ ತಿಂಗಳು ಹಣ ವಿತರಿಸದೇ ಮೂರ್‍ನಾಲ್ಕು ತಿಂಗಳಿಗೊಮ್ಮೆ ನೀಡುವ ಮೂಲಕ ಮೋಸವೆಸಗುತ್ತಿದ್ದಾರೆ ಎಂದು ದೂರಿದರು.
ಫರೀದಾಬಾನು ನದೀಮುಲ್ಲಾ, ಸುರೇಶ ಛಲವಾದಿ ಮಾತನಾಡಿ, ಯಾವ ತಿಂಗಳ ಹಣವನ್ನು ಪಡೆಯುತ್ತಿದ್ದೇವೆ ಎಂಬ ಮಾಹಿತಿ ಫಲಾನುಭವಿಗಳಿಗೆ ಮಾಹಿತಿ ಇಲ್ಲದಂತಾಗಿದೆ. ಹೀಗಾಗಿ ಫಲಾನುಭವಿಗಳ ಎರಡ್ಮೂರು ತಿಂಗಳ ಹಣ ಪೋಸ್ಟ್‌ಮನ್‌ರ ಜೇಬುಗಳಲ್ಲಿ ಉಳಿಯುತ್ತಿದೆ ಎಂದರು. ವಿಕಲಚೇತನರ ಸಂಘದ ತಾಲೂಕಾಧ್ಯಕ್ಷ ಪಾಂಡು ಸುತಾರ, ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಎಚ್.ಯು. ಹಿತ್ತಲಮನಿ, ಎಸ್.ಎಂ. ಕೊರಕಲಿ, ಪಿರಾಂಬಿ, ಗುತ್ತೆವ್ವ ಹರಿಜನ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.