ಗರೀಬ್ ಕಲ್ಯಾಣ ಯೋಜನೆ ಪಡಿತರ ವಿತರಣೆಗೆ ಸೂಚನೆ
Team Udayavani, May 2, 2020, 7:18 PM IST
ಹಾವೇರಿ: ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರ ಧಾನ್ಯವನ್ನು ಮೇನಲ್ಲಿ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ನಿಗದಿತ ಪ್ರಮಾಣದಂತೆ ಪಡೆಯಲು ಡಿಸಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.
ಅಂತ್ಯೋದಯ ಕಾರ್ಡುದಾರರಿಗೆ ಉಚಿತವಾಗಿ ಪ್ರತಿ ಯುನಿಟ್ ಗೆ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಪಡಿತರ ಚೀಟಿಗೆ ಒಂದು ಕೆ.ಜಿ. ತೊಗರಿಬೇಳೆ ನೀಡಲಾಗುವುದು. ಬಿಪಿಎಲ್ ಪಡಿತರ ಪಡಿತರ ಪ್ರತಿ ಯುನಿಟ್‌ಗೆ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಪಡಿತರ ಚೀಟಿಗೆ ಒಂದು ಕೆ.ಜಿ. ತೊಗರಿಬೇಳೆ ನೀಡಲಾಗುವುದು. ಎಪಿಎಲ್ ಏಕ ಸದಸ್ಯ ಪಡಿತರ ಚೀಟಿಗೆ 5 ಕೆಜಿ ಅಕ್ಕಿ ಮತ್ತು 2 ಮತ್ತು 2ಕ್ಕಿಂತ ಹೆಚ್ಚಿನ ಸದಸ್ಯರ ಪಡಿತರ ಚೀಟಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿ.ಗೆ 15 ರೂ.ಗಳಂತೆ ನೀಡಲಾಗುವುದು. ಹೊಸದಾಗಿ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಉಚಿತವಾಗಿ ಪ್ರತಿ ಅರ್ಜಿಗೆ 10 ಕೆ.ಜಿ. ಅಕ್ಕಿ, ಹೊಸದಾಗಿ ಎಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂ.ಗಳಂತೆ ನೀಡಲಾಗುವುದು. ಅಂತಾರಾಜ್ಯ, ಅಂತರ್‌ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿ ಇರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನ್ಯಾಯಬೆಲೆ ಅಂಗಡಿಯಲ್ಲಿ ಮೇಲ್ಕಾಣಿಸಿದ ವರ್ಗದ ಪಡಿತರ ಚೀಟಿದಾರರಿಗೆ ಆಹಾರಧಾನ್ಯವನ್ನು ಓಟಿಪಿ ಮುಖಾಂತರವೇ ವಿತರಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.