ಮತಗಟ್ಟೆವಾರು ವೈಯಕ್ತಿಕ ಗಮನ ಹರಿಸಿ
ವ್ಯಾಪಕ ಪ್ರಚಾರ ಮಾಡಿ, ಕಡಿಮೆ ನೋಂದಣಿಯಿರುವ ಭಾಗದ ಮನೆ ಮನೆಗೆ ಭೇಟಿ ನೀಡಿ
Team Udayavani, Dec 3, 2020, 2:51 PM IST
ಹಾವೇರಿ: ವಿಧಾನಸಭಾ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತಂತೆ ಸೇರ್ಪಡೆ, ಮಾರ್ಪಾಡು, ತಿದ್ದುಪಡಿ ಒಳಗೊಂಡಂತೆ ಮತಗಟ್ಟೆವಾರು ವೈಯಕ್ತಿಕ ಗಮನಹರಿಸಿ ಪರಿಶೀಲನೆ ನಡೆಸುವಂತೆ ತಹಶೀಲ್ದಾರ್‌ಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಮನೋಜ್ ಜೈನ್ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕರಡು ಮತದಾರರ ಪಟ್ಟಿ ಪ್ರಕಟ-ಪರಿಶೀಲನೆ, ತಿದ್ದುಪಡಿ, ಸೇರ್ಪಡೆ,ಮಾರ್ಪಾಡು ಹಾಗೂ ಮತದಾರ ಪಟ್ಟಿಪರಿಷ್ಕರಣೆ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.ಈಗಾಗಲೇ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಈ ಕುರಿತಂತೆ ಮತಗಟ್ಟೆವಾರು ವ್ಯಾಪಕ ಪ್ರಚಾರ ಮಾಡಬೇಕು. ಕಡಿಮೆ ನೋಂದಣಿ ಇರುವ ಕಡೆ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸಲಹೆ ನೀಡಿದರು.
ಜನಸಂಖ್ಯೆಗೆ ಅನುಗುಣವಾಗಿ ಮತದಾರರ ನೋಂದಣಿ ಕಡಿಮೆ ಇರುವ ಮತಗಟ್ಟೆಗಳಿಗೆ ಭೇಟಿ ನೀಡಿ, ಯಾವ ಮತದಾರರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆಕ್ರಮವಹಿಸಬೇಕು. ಈ ಕುರಿತಂತೆ ಮತಗಟ್ಟೆ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಕ್ರಮವಹಿಸುವಂತೆ ಸೂಚನೆ ನೀಡಿದರು.
ಕೆಲವು ಮತಗಟ್ಟೆಗಳಲ್ಲಿ ಪುರುಷ ಮತದಾರರ ಅನುಪಾತದಂತೆ ಮಹಿಳಾ ಮತದಾರರ ನೋಂದಣಿಯಾಗಿಲ್ಲ. ಕೆಲ ತಾಲೂಕುಗಳಲ್ಲಿ 80 ವರ್ಷದಿಂದ 100 ವರ್ಷ ಮೇಲ್ಪಟ್ಟವರ ಸಂಖ್ಯೆ ಹೆಚ್ಚಾಗಿದೆ. ಈ ಕುರಿತಂತೆ ಪರಿಶೀಲನೆ ನಡೆಸಿ ಮತದಾರರ ಪಟ್ಟಿ ಪರಿಷ್ಕರಣೆಗೊಳಪಡಿಸಿ. ಜೀವಂತವಿಲ್ಲದ ಮತದಾರರು ಪಟ್ಟಿಯಲ್ಲಿ ಉಳಿದಿದ್ದರೆ ಕೈಬಿಡಬೇಕು. ಮತದಾರರಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳದ ಮತದಾರರ ನೋಂದಣಿಗೆ ಕ್ರಮವಹಿಸಬೇಕು ಎಂದರು.
ಹೊಸ ಮತದಾರರ ಸೇರ್ಪಡೆ, ಹೆಸರುಗಳ ತಿದ್ದುಪಡಿ, ವರ್ಗಾವಣೆ ಕುರಿತಂತೆ ಶುದ್ಧ ಮತ್ತು ಕ್ರಮಬದ್ಧ ಮತದಾರರ ಪಟ್ಟಿ ತಯಾರಿಕೆಯಲ್ಲಿ ವಿಶೇಷವಾಗಿ ಉಪವಿಭಾಗಾಧಿಕಾರಿಗಳು ತಮ್ಮ ತಮ್ಮ ಕಾರ್ಯಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರ್, ಸ್ಥಳೀಯ ಸಂಸ್ಥೆ ಮುಖ್ಯಸ್ಥರು ಹಾಗೂ ಬಿಎಲ್ ಒಗಳ ಸಭೆ ನಡೆಸಬೇಕು ಎಂದು ಸೂಚನೆ ನೀಡಿದ ಅವರು, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕಣೆ ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿ, ಮತದಾರರ ಪರಿಷ್ಕರಣೆ ಕುರಿತಂತೆ ಎಲ್ಲ ತಹಶೀಲ್ದಾರಗಳು ವೈಯಕ್ತಿಕವಾಗಿ ಗಮನಹರಿಸಬೇಕು. ಬಿಎಲ್‌ಒಗಳೊಂದಿಗೆ ಪ್ರತಿನಿತ್ಯ ಮಾತನಾಡಿ, ಮತಗಟ್ಟೆವಾರು ಮತದಾರರ ಪರಿಷ್ಕರಣೆ ಕುರಿತಂತೆ ಮಾಹಿತಿ ಪಡೆಯಬೇಕು. ಪ್ರಗತಿ ಕಡಿಮೆ ಇರುವ ಮತಗಟ್ಟೆಗೆಭೇಟಿ ನೀಡಿ ಪ್ರಗತಿಗೆ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ 1,470ಮತಗಟ್ಟೆಗಳಿವೆ. ಈ ಪೈಕಿ 254 ನಗರ ಪ್ರದೇಶಗಳಲ್ಲಿಹಾಗೂ 1,216 ಗ್ರಾಮೀಣ ಪ್ರದೇಶಗಳಲ್ಲಿವೆ. ಎಲ್ಲಮತಗಟ್ಟೆಗಳಿಗೂ ರ್‍ಯಾಂಪ್ ವ್ಯವಸ್ಥೆ, ಕುಡಿಯುವ ನೀರು, ಅಗತ್ಯ ಪಿಠೊಪಕರಣಗಳು, ವಿದ್ಯುತ್ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳು ಒಳಗೊಂಡಿವೆ. 2019ರಯೋಜಿತ ಜಿಲ್ಲೆಯ ಜನಸಂಖ್ಯೆ 17,44,036 ಒಳಗೊಂಡಿದೆ. ಮತದಾರರ 2020 ನ.18ರವರೆಗೆ ಮತದಾರರ ನೋಂದಣಿಯಂತೆ 12,66,772 ಮತದಾರರಿದ್ದಾರೆ. ಜಿಲ್ಲೆಯ ಜನಸಂಖ್ಯೆಯ ಶೇ. 71.06 ಮತದಾರರ ಪ್ರಮಾಣವಿದೆ ಎಂದರು.
ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತಂತೆ ವಿವರಿಸಿ, ಹೊಸ ನೋಂದಣಿ, ತಿದ್ದುಪಡಿ ಹಾಗೂ ಮಾರ್ಪಡಿಗಾಗಿ ಸ್ವೀಕರಿಸಿರುವ ಅರ್ಜಿಗಳ ವಿವರಕುರಿತಂತೆ ಸಭೆಗೆ ಮಾಹಿತಿ ನೀಡಿದರು.
ಜಿಪಂ ಸಿಇಒ ರಮೇಶ ದೇಸಾಯಿ, ಉಪವಿಭಾಗಾಧಿಕಾರಿಗಳಾದ ಡಾ| ದಿಲೀಷ್ ಶಶಿ, ಅನ್ನಪೂರ್ಣ ಮುದಕಮ್ಮನವರ, ಚುನಾವಣಾ ತಹಶೀಲ್ದಾರ್ ಪ್ರಶಾಂತ ನಾಲವಾರ, ಹಾವೇರಿ ತಹಶೀಲ್ದಾರ್ ಜಿ.ಎಸ್. ಶಂಕರ್, ಹಾನಗಲ್ಲತಹಶೀಲ್ದಾರ್ ಪಿ.ಎಸ್. ಯರಿಸ್ವಾಮಿ, ಶಿಗ್ಗಾವಿ ತಹಶೀಲ್ದಾರ್ ಪ್ರಕಾಶ ಕುದರಿ, ಸವಣೂರು ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣನವರ, ಹಿರೇಕೆರೂರು ತಹಶೀಲ್ದಾರ್ ಆರ್.ಎಚ್. ಭಾಗವಾನ್, ರಾಣೆಬೆನ್ನೂರು ತಹಶೀಲ್ದಾರ್ ಬಸವನಗೌಡ ಕೋಟೂರ, ಬ್ಯಾಡಗಿ ತಹಶೀಲ್ದಾರ್ ರವಿ ಕೊರವರ ಇದ್ದರು.
ಯಾವ ಮತಗಟ್ಟೆಗಳಲ್ಲಿ ಜನಸಂಖ್ಯೆ ಪ್ರಮಾಣಕ್ಕಿಂತ ಮತದಾರರ ನೋಂದಣಿ ಪ್ರಮಾಣ ಕಡಿಮೆ ಇದೆ.ವಿಶೇಷವಾಗಿ ಮಹಿಳಾ ಮತದಾರರ ನೋಂದಣಿ ಪ್ರಮಾಣ ಕಡಿಮೆ ಇದೆ. ಇಂತಹ ಮತಗಟ್ಟೆಗಳಿಗೆ ಭೇಟಿ ನೀಡಿ ನೋಂದಣಿ ಪ್ರಮಾಣವನ್ನು ಹೆಚ್ಚು ಮಾಡಬೇಕು. -ಮನೋಜ್ ಜೈನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.