ಮತಗಟ್ಟೆ ಎದುರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ!
Team Udayavani, May 12, 2018, 3:29 PM IST
ಹಾವೇರಿ:ಆಸ್ತಿ ಕಲಹದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವೃದ್ಧೆಯೊಬ್ಬರು ಮತದಾನ ಮಾಡಿದ ನಂತರ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ಹಾವೇರಿಯ ದೇವಗಿರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪಾರ್ವತಮ್ಮ (60) ಎಂಬ ವೃದ್ಧೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಪೊಲೀಸರು ಮಧ್ಯಪ್ರವೇಶಿಸುವ ಮೂಲಕ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಸ್ಥಳೀಯರು ಸಮಾಧಾನ ಹೇಳಿ ವೃದ್ಧೆಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿ ಮನೆಗೆ ಕಳುಹಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.