ಅಪಘಾತದಲ್ಲಿ ಮೆದುಳು ನಿಷ್ಕ್ರಿಯ; ಪುತ್ರಿಯ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು
ಕಿಡ್ನಿ, ಹೃದಯ, ಲಿವರ್, ಕಣ್ಣು, ಚರ್ಮ ದಾನಸಾವಿ ನಲ್ಲೂ ಸಾರ್ಥಕತೆ
Team Udayavani, Sep 15, 2021, 1:41 PM IST
ಹಾವೇರಿ: ರಸ್ತೆ ಅಪಘಾತದಲ್ಲಿ ತಮ್ಮ ಪುತ್ರಿಯ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅಂಗಾಂಗಗಳ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾರ್ಥಕತೆ ಮೆರೆದ ಘಟನೆ ರಟ್ಟಿಹಳ್ಳಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕವನ ಮಳ್ಳಯ್ಯ ಹಿರೇಮಠ (20) ಸಾವಿನಲ್ಲೂ ಸಾರ್ಥಕತೆ ಮೆರೆದು ಮಾದರಿ ಎನಿಸಿಕೊಂಡಿದ್ದಾಳೆ. ಹಳ್ಳೂರ ಗ್ರಾಮದ ಕವನ ಹಿರೇಮಠ ಶಿಕಾರಿಪುರದ ಗಾರ್ಮೆಂಟ್‌ವೊಂದರಲ್ಲಿ ಕೆಲಸ ಮಾಡು ತ್ತಿದ್ದರು. ಸೆ.9ರಂದು ಹೊನ್ನಾಳಿ ತಾಲೂಕು ಸೊರಟೂರ ಗ್ರಾಮದ ಬಳಿ ಓಮಿನಿ- ಚಕ್ಕಡಿ ಗಾಡಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನ ಗಂಭೀರವಾಗಿ ಗಾಯಗೊಂಡಿದ್ದರು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕವನ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಕೋಮಾ ಸ್ಥಿತಿಗೆ ತಲುಪಿದ್ದರು. ಅವರ ಮಿದುಳು ನಿಷ್ಕ್ರಿಯಗೊಂಡಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮಗಳಂತೂ ಇನ್ನು ಬದುಕಲ್ಲ, ಅವಳ ಅಂಗಾಂಗವಾ ದರೂ ಇತರರಿಗೆ ಬದುಕು ನೀಡಲಿ ಎಂದು ನಿರ್ಧರಿಸಿದ ಆಕೆಯ ಕುಟುಂಬಸ್ಥರು ವೈದ್ಯರೊಂದಿಗೆ ಚರ್ಚಿಸಿದರು.
ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೃತಳ ಕುಟುಂಬಸ್ಥರು ಕಿಡ್ನಿ, ಹೃದಯ, ಲಿವರ್, ಕಣ್ಣು, ಚರ್ಮ ದಾನ ಮಾಡಿದರು. ತಕ್ಷಣವೇ ಅಂಗಾಂಗಗಳನ್ನು ಬೇರೆ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಇದರಿಂದ ನಾಲ್ವರ ಪ್ರಾಣ ಉಳಿದಂತಾ ಗಿದೆ. ಬಾಳಿ ಬೆಳಗಬೇಕಿದ್ದ ಮಗಳನ್ನು ಕಳೆದುಕೊಂಡ ಕುಟುಂಬಸ್ಥರು ನೋವಿನ ನಡುವೆಯೂ ಸಾರ್ಥಕತೆ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಎಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.