ಬೀದಿ ಬದಿ ವ್ಯಾಪಾರಿಗಳಿಗೆ ಸಾಲಮೇಳ ಆಯೋಜಿಸಿ
Team Udayavani, Mar 15, 2021, 3:39 PM IST
ಹಾವೇರಿ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆಸಾಲಮೇಳ ಆಯೋಜಿಸಿ ಅರ್ಹರಿಗೆ ನೆರವುಒದಗಿಸಬೇಕೆಂದು ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಭೆ ನಡೆಸಿದ ಅವರು, ಸಾಲಮೇಳ ಆಯೋಜನೆಯಿಂದ ಬೀದಿಬದಿ ವ್ಯಾಪಾರಿಗಳಿಗೆ ಹಣಕಾಸಿನ ನೆರವು ಒದಗಿಸಿ ಸ್ವಾವಲಂಬಿ ಜೀವನಕ್ಕೆ ಉತ್ತೇಜನ ನೀಡಬೇಕೆಂದು ತಿಳಿಸಿದರು.
ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳು ಬಾಕಿ ಇರುವ ನೀರಿನಕರ, ವಾಣಿಜ್ಯ ಮಳಿಗೆಗಳ ಬಾಡಿಗೆ,ಜಾಹೀರಾತು ಕರಗಳನ್ನು ವಸೂಲಿ ಮಾಡಲುಮುಂದಾಗಬೇಕು. ಮಳಿಗೆಗಳ ಬಾಕಿ ಬಾಡಿಗೆ ಪಾವತಿಸಲು ಕಂತಿನಲ್ಲಿ ಅವಕಾಶ ನೀಡಬೇಕು ಎಂದು ಸೂಚಿಸಿದರು.
ನಗರ ಪ್ರದೇಶದಲ್ಲಿ ಪರವಾನಗಿ ನೀಡುವುದು ಹಾಗೂ ಪರವಾನಗಿ ನವೀಕರಣ ಕೆಲಸವನ್ನು ಸೋಮವಾರದಿಂದ ಅಭಿಯಾನದ ರೀತಿಯಲ್ಲಿ ಆಯೋಜಿಸಿ, ಸ್ಥಳದಲ್ಲಿಯೇ ರಶೀದಿ ನೀಡಲು ಆಯಾ ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ವಾಣಿಜ್ಯ ಮಳಿಗೆಗಳ ಪ್ರದೇಶದಲ್ಲಿ ಕೌಂಟರ್ ಸ್ಥಾಪಿಸಿ, ಕಚೇರಿಯನ್ನು ಜನರ ಬಳಿ ತೆಗೆದುಕೊಂಡು ಹೋಗುವ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು. ಉಳಿತಾಯ ಹಣದಲ್ಲಿ ಸೂಕ್ತ ಕ್ರಿಯಾ ಯೋಜನೆಗಳನ್ನು ರೂಪಿಸಿ ನಗರದಲ್ಲಿ ಜನರಿಗೆ ಅನುಕೂಲಕರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿವಿಧ ಯೋಜನೆಗಳಡಿ ಮಂಜೂರಾದ ಹಣವನ್ನು ನಿಗದಿತ ಅವಧಿಯೊಳಗೆ ವೆಚ್ಚ ಮಾಡಿ ಗುರಿ ಸಾಧಿಸಬೇಕು. ನಗರ ಸ್ಥಳೀಯ ಸಂಸ್ಥೆಗಳ ಆದಾಯ ಹೆಚ್ಚಿಸುವನಿಟ್ಟಿನಲ್ಲಿ ಕಾರ್ಯಕಮ ರೂಪಿಸಬೇಕೆಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ಮುಖ್ಯಾಧಿಕಾರಿಗಳು ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
ಹಾವೇರಿ: ಸಿದ್ದು ಅದೃಷ್ಟದ ಸಿಎಂ, ಬಿಎಸ್‌ವೈ ಹೋರಾಟ ಮಾಡಿ ಅಧಿಕಾರಕ್ಕೆ ಬಂದವರು-ವಿಜಯೇಂದ್ರ
Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ
MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.