ಪಕ್ಷ ಸೂಚಿಸಿದ ಅಭ್ಯರ್ಥಿ ಗೆಲ್ಲಿಸಿ: ಬಳ್ಳಾರಿ

•ಕೇಳಿದ ಎಲ್ಲರಿಗೂ ಸಿಗದು ಟಿಕೆಟ್•ಪಕ್ಷ ಗೆಲುವಿಗೆ ಪ್ರತಿಯೊಬ್ಬರ ಶ್ರಮ ಅವಶ್ಯ

Team Udayavani, May 10, 2019, 3:42 PM IST

haveri-tdy-2..

ಬ್ಯಾಡಗಿ: ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕರ್ತರ ಹಾಗೂ ಆಕಾಂಕ್ಷಿಗಳ ಸಭೆಯನ್ನುದ್ದೇಶಿಸಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿದರು..

ಬ್ಯಾಡಗಿ: ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಅಷ್ಟೊಂದು ಸುಲಭ ಸಾಧ್ಯವಲ್ಲ. 23 ಸ್ಥಾನಗಳ ಪೈಕಿ ಒಟ್ಟು 110 ಜನರು ಟಿಕೆಟ್ ನೀಡುವಂತೆ ಲಿಖೀತ ಮನವಿ ಕೊಟ್ಟಿದ್ದು, ಪಟ್ಟಿ ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು. ಪಕ್ಷ ಸೂಚಿಸಿದರನ್ನು ಗೆಲ್ಲಿಸಲು ಎಲ್ಲರೂ ಪಣ ತೊಡುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಕರೆ ನೀಡಿದರು.

ಗುರುವಾರ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಹಾಗೂ ಆಕಾಂಕ್ಷಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೇ 29 ರಂದು ನಡೆಯಲಿರುವ ಚುನಾವಣೆ ಬಿಜೆಪಿ ಕಾರ್ಯಕರ್ತರು ಪ್ರತಿಷ್ಠೆಯನ್ನಾಗಿ ಮಾಡಿಕೊಳ್ಳಬೇಕು. ಪುರಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಮಾಡಿಕೊಡುವಂತೆ ಬಹಳಷ್ಟು ಜನರು ಅಹವಾಲು ಸಲ್ಲಿಸಿದ್ದಾರೆ. ಇದೊಂದು ಸಹಜ ಪ್ರಕ್ರಿಯೆಯಾಗಿದ್ದು, ಇದರಲ್ಲಿ ತಪ್ಪೇನಿಲ್ಲ. ಆದರೆ, ಟಿಕೆಟ್ ಕೇಳಿದ ಎಲ್ಲರಿಗೂ ಅವಕಾಶ ಮಾಡಿಕೊಡಲು ಸಾಧ್ಯವಿಲ್ಲ, ಹೀಗಾಗಿ ಪ್ರತಿಯೊಬ್ಬರು ಇದು ನನ್ನ ಚುನಾವಣೆ, ನನ್ನ ವಾರ್ಡ್‌ ಚುನಾವಣೆ ಎಂದು ಭಾವಿಸಿಕೊಂಡು ಕೆಲಸ ಮಾಡುವಂತೆ ಮನವಿ ಮಾಡಿದರು.

ಬಂಡಾಯದಿಂದ ನಷ್ಟ ಜಾಸ್ತಿ: ಟಿಕೆಟ್ ಸಿಗದೇ ಅಸಮಾಧಾನ ಮಾಡಿಕೊಂಡವರು, ಬಂಡಾಯವಾಗಿ ಸ್ಪರ್ಧೆ ಮಾಡಿದರೇ, ತಮ್ಮನ್ನೂ ಸೇರಿದಂತೆ ಪಕ್ಷಕ್ಕೆ ನಷ್ಟವಾಗಲಿದೆ. ಆದರೆ, ಎಲ್ಲ ಜಾತಿ, ಧರ್ಮ, ಜನಾಂಗಗಳು ಮತ್ತು ಸಮುದಾಯದ ಜನರಿಗೆ ಅವಕಾಶ ಮಾಡಿಕೊಡಬೇಕಾದ ಕಾರಣ ಪ್ರಸಕ್ತ ಚುನಾವಣೆಯಲ್ಲಿ ಎಲ್ಲ ಮಾನದಂಡಗಳನ್ನು ಪರಿಗಣಿಸಲಾಗುವುದು. ಅವಕಾಶ ವಂಚಿತರು ನಿರಾಸೆಗೊಳ್ಳದೆ ಟಿಕೆಟ್ ನನಗೆ ಸಿಕ್ಕಿದೆ ಎನ್ನುವ ರೀತಿಯಲ್ಲಿ ಚುನಾವಣೆ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಪಕ್ಷವನ್ನು ಗೆಲ್ಲಿಸಬೇಕು. ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.

ಪಕ್ಷಕ್ಕೆ ಆನೆ ಬಲ: ವಿಧಾನಸಭೆ, ಲೋಕಸಭೆ ಸೇರಿದಂತೆ ಬಹುತೇಕ ಚುನಾವಣೆಗಳಲ್ಲಿ ಬಿಜೆಪಿ ಜಯ ಸಾಧಿಸುತ್ತ ಬಂದಿದ್ದು, ಕೇವಲ ಒಂದು ಸ್ಥಾನವಿದ್ದ ಬಿಜೆಪಿ ಕಳೆದ ಬಾರಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯುತ್ತ ಬಂದಿದೆ. ವಾಜಪೇಯಿ ಹಾಗೂ ಆಡ್ವಾಣಿಯವರಂತಹ ಕಳಂಕ ರಹಿತ ನಾಯಕರು ಕಟ್ಟಿ ಬೆಳೆಸಿದ ಪಕ್ಷ ಇದೀಗ ಹೆಮ್ಮರವಾಗಿ ಬೆಳೆದು ಜನಸೇವೆಗೆ ಸಿದ್ಧವಾಗಿದೆ. ಸ್ಪರ್ಧಿಸಿರುವ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲರು ಶ್ರಮಿಸೋಣ ಎಂದರು.

ಬಿಜೆಪಿ ತಾಲೂಕಾಧ್ಯಕ್ಷ ಶಂಕ್ರಣ್ಣ ಮಾತನವರ, ಮಾಜಿ ಅಧ್ಯಕ್ಷ ರಾಮಣ್ಣ ಉಕ್ಕುಂದ, ಪುರಸಭೆ ಮಾಜಿ ಅಧ್ಯಕ್ಷ ಬಿ.ಎಂ.ಛತ್ರದ, ಮುಖಂಡರಾದ ಸಿ.ಆರ್‌.ಆಲದಗೇರಿ, ರವೀಂದ್ರ ಪಟ್ಟಣಶೆಟ್ಟಿ, ಜೆ.ಸಿ.ಚಿಲ್ಲೂರಮಠ, ಬಾಲಚಂದ್ರಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ವಿರೇಂದ್ರ ಶೆಟ್ಟರ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಸುರೇಶ ಆಸಾದಿ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

Malatesha Temple: ಸಿದ್ದರಾಮಯ್ಯ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ನಿರ್ಬಂಧ; ಭಕ್ತರ ಆಕ್ರೋಶ

Malatesha Temple: ಸಿಎಂ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ಭಕ್ತರ ನಿರ್ಬಂಧ; ಆಕ್ರೋಶ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ-ಶಾಸಕ ರುದ್ರಪ್ಪ ಲಮಾಣಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.