ಚೆಕ್‌ಪೋಸ್ಟ್‌ನಲ್ಲಿ ಪ್ರಯಾಣಿಕರ ಸ್ಕ್ರೀನಿಂಗ್‌ ಕಡ್ಡಾಯ

ಸಮರ್ಪಕ ಕರ್ತವ್ಯ ನಿರ್ವಹಣೆಗೆ ಸೂಚನೆ ; ಲೋಪವಾದರೆ ಕೋವಿಡ್ ಹರಡುವ ಆತಂಕ

Team Udayavani, May 14, 2020, 2:19 PM IST

ಚೆಕ್‌ಪೋಸ್ಟ್‌ನಲ್ಲಿ ಪ್ರಯಾಣಿಕರ ಸ್ಕ್ರೀನಿಂಗ್‌ ಕಡ್ಡಾಯ

ಸಾಂದರ್ಭಿಕ ಚಿತ್ರ

ಹಾವೇರಿ: ಜಿಲ್ಲೆಯ ಗಡಿಭಾಗದ ಚೆಕ್‌ಪೋಸ್ಟ್ ಗಳಲ್ಲಿ ಒಳಬರುವ ಪ್ರಯಾಣಿಕರನ್ನು ಕಡ್ಡಾಯವಾಗಿ ಸ್ಕ್ರಿನಿಂಗ್‌ ಮಾಡಬೇಕು. ತಪಾಸಣೆಯಲ್ಲಿ ಕೊಂಚ ಸಡಿಲವಾದರೂ ಕೋವಿಡ್‌ ಸೋಂಕು ಹರಡುವಿಕೆಯ ಅಪಾಯ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಚೆಕ್‌ ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಡಲ್‌ ಅಧಿಕಾರಿಗಳು, ಸಿಬ್ಬಂದಿ ಪರಿಸ್ಥಿತಿ ಅರ್ಥೈಸಿಕೊಂಡು ಗಂಭೀರವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚನೆ ನೀಡಿದರು.

ತಾಲೂಕು ತಹಶೀಲ್ದಾರ್‌ ಹಾಗೂ ಕ್ವಾರಂಟೈನ್‌ ಕೇಂದ್ರಗಳ ನೋಡಲ್‌ ಅಧಿಕಾರಿಗಳೊಂದಿಗೆ ಬುಧವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಚೆಕ್‌ಪೋಸ್ಟ್‌ ಹಾಗೂ ಕ್ವಾರಂಟೈನ್‌ ಕೇಂದ್ರಗಳ ಕಾರ್ಯವಿಧಾನದ ಮಾಹಿತಿ ಪಡೆದುಕೊಂಡರು. ಜಿಲ್ಲೆಯಲ್ಲಿ ತೆರೆಯಲಾದ ಕ್ವಾರಂಟೈನ್‌ ಕೇಂದ್ರಗಳ ನಿರ್ವಹಣೆಯಲ್ಲಿ ಯಾವುದೇ ಲೋಪವಾಗದಂತೆ ಗರಿಷ್ಠ ಎಚ್ಚರಿಕೆ ವಹಿಸಬೇಕು. ಪ್ರಮಾಣಿತ ಕಾರ್ಯಾಚರಣೆ ವಿಧಾನದಂತೆ(ಎಸ್‌ಒಪಿ) ಸ್ವಚ್ಛತೆ ಇನ್ನಿತರ ಮುನ್ನೆಚ್ಚರಿಕೆ ನಿಯಮ ಕಟ್ಟುನಿಟ್ಟಾಗಿ ಪಾಲನೆಮಾಡಬೇಕು. ಈ ಕೇಂದ್ರಗಳಿಂದ ಕೋವಿಡ್‌ ಸೋಂಕು ಹರಡದಂತೆ
ಕಾಳಜಿ ವಹಿಸಬೇಕು ಎಂದರು.

ವಿದೇಶದಲ್ಲಿ ನೆಲೆಸಿರುವ ರಾಜ್ಯದವರು ಮರಳಿ ರಾಜ್ಯಕ್ಕೆ ಕರೆತರುವ ಪ್ರಕ್ರಿಯೆ ನಡೆದಿದೆ. ಈ ಪೈಕಿ ಜಿಲ್ಲೆಗೆ ಬರುವವರನ್ನು ಹಾಗೆಯೇ ದೇಶದ ನಾನಾ ಭಾಗದಿಂದ ಜಿಲ್ಲೆಗೆ ಹಿಂತಿರುಗುತ್ತಿದ್ದಾರೆ. ಈ ಎಲ್ಲರನ್ನು ಸ್ಟ್ಯಾಂಡರ್ಡ್‌ ಆಪರೇಷನ್‌ ಪ್ರೊಸಿಜರ್‌ (ಎಸ್‌ ಒಪಿ) ಮಾರ್ಗಸೂಚಿ ಅನುಸಾರ ಕ್ವಾರಂಟೈನ್‌ಗಳಲ್ಲಿ ಇರಿಸಬೇಕಾಗಿದೆ. ಈ ಸಂದರ್ಭ ಅತ್ಯಂತ ಸೂಕ್ಷ್ಮವಾಗಿದ್ದು, ಮುಂದಿನ 15 ದಿನಗಳವರೆಗೆ ಕ್ವಾರಂಟೈನ್‌ ಕೇಂದ್ರಗಳ ನಿರ್ವಹಣೆಯಲ್ಲಿ ಹೆಚ್ಚಿನ ಕಾಳಜಿ ವಹಿಸಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು. ಕ್ವಾರಂಟೈನ್‌ ಕೇಂದ್ರಗಳ ನಿರ್ವಹಣೆ ಕುರಿತಂತೆ ಸಾರ್ವಜನಿಕರಿಂದ ದೂರುಗಳು ಬರಬಾರದು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶುದ್ಧ ಕುಡಿಯುವ ನೀರು ಹಾಗೂ ಆಹಾರ ಪೂರೈಕೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಅನುದಾನದ ಅಗತ್ಯತೆ, ಆಹಾರ ಸಾಮಾಗ್ರಿ, ಹೆಚ್ಚುವರಿ ಸಿಬ್ಬಂದಿ, ಸ್ವತ್ಛತಾ ಕಾರ್ಯದ ಸಿಬ್ಬಂದಿ ಒಳಗೊಂಡಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ವೈಯಕ್ತಿಕ ಗಮನಕ್ಕೆ ತರುವಂತೆ ತಿಳಿಸಿದರು.

ಹೊರ ದೇಶ ಹಾಗೂ ಹೊರರಾಜ್ಯದಿಂದ ಬರುವವರಿಗೆ ಕ್ವಾರಂಟೈನ್‌ ಕಡ್ಡಾಯವಾಗಿದೆ. ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಉಳಿಯಲು ಇಚ್ಛಿಸದೇ ಹೆಚ್ಚಿನ ಸೌಲಭ್ಯ ಬಯಸಿದರೆ ಅವರ ಇಚ್ಛಾನುಸಾರ ಪ್ರತ್ಯೇಕ ಹೋಟೆಲ್‌ನಲ್ಲಿ ಸ್ವಂತ ವೆಚ್ಚ ಭರಿಸಿ ಕ್ವಾರಂಟೈನ್‌ ಆಗಲು ಅವಕಾಶವಿದೆ. ಎಸ್‌ಒಪಿ ಮಾರ್ಗಸೂಚಿ ಅನುಸಾರ ಆರೋಗ್ಯ ತಪಾಸಣೆ ನಂತರ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಬಹುದು. ಈ ಉದ್ದೇಶಕ್ಕಾಗಿ ತಹಶೀಲ್ದಾರ್‌ ಗಳು ಉತ್ತಮವಾದ ಮೂರ್‍ನಾಲ್ಕು ಹೋಟೆಲ್‌  ಗುರುತಿಸಿಕೊಂಡು 14 ದಿನಗಳ ಕ್ವಾರಂಟೈನ್‌ ಅವಧಿಯ ಕೊಠಡಿ ಬಾಡಿಗೆ, ಊಟ, ವಸತಿ ಸೇರಿ ಪ್ಯಾಕೇಜ್‌ ದರ ಅಥವಾ ಪ್ರತಿದಿನದ ದರ ನಿಗದಿಪಡಿಸಿ ಅಧಿಸೂಚನೆ ಹೊರಡಿಸಬೇಕು. ಈ ಮಾಹಿತಿ ಪ್ರಯಾಣಿಕರಿಗೆ ನೀಡಬೇಕು. ಕ್ವಾರಂಟೈನ್‌ಗೆ ಒಳಗಾದವರ ಆಯ್ಕೆ
ಅನುಸಾರ ಹೋಟೆಲ್‌ಗೆ ಸ್ಥಳಾಂತರಿಸಬೇಕು. ಇವರ ಮೇಲೆ ನಿವಾಗವಹಿಸಲು ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಎಸ್‌. ಯೋಗೇಶ್ವರ, ಉಪವಿಭಾಗಾಧಿಕಾರಿ ಡಾ| ದಿಲೀಷ್‌ ಶಶಿ, ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ವೀರೇಂದ್ರ ಕುಂದಗೋಳ, ಪೌರಾಯುಕ್ತ ಬಸವರಾಜ ಜಿದ್ದಿ, ತಹಶೀಲ್ದಾರ್‌ ಶಂಕರ್‌, ತಾಪಂ ಇಒ ಬಸವರಾಜ ಹಾಗೂ ವಿವಿಧ ತಾಲೂಕಿನ ತಹಶೀಲ್ದಾರಗಳು, ತಾಪಂ ಇಒಗಳು ಇದ್ದರು.

153 ಜನರ ವರದಿ ನೆಗೆಟಿವ್‌
ಹಾವೇರಿ: ತೀವ್ರ ಉಸಿರಾಟದ ತೊಂದರೆ, ನೆಗಡಿ, ಕಫದಿಂದ ಬಳಲುತ್ತಿದ್ದ 153 ಜನರ ರಕ್ತ ಮತ್ತು ಗಂಟಲು ದ್ರವ ಮಾದರಿ ವರದಿ ನೆಗೆಟಿವ್‌ ಬಂದಿದ್ದು, ಬುಧವಾರ ಮತ್ತೆ 181 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾ ಧಿಕಾರಿ ಡಾ| ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ. ಈವರೆಗೆ ಒಟ್ಟು 3361 ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 3029 ಮಾದರಿಗಳು ನೆಗೆಟಿವ್‌ ಬಂದಿದೆ. ಮೂವರಲ್ಲಿ ಕೊರೊನಾ ಪಾಸಿಟಿವ್‌ ಬಂದಿವೆ. ಉಳಿದವರ ಮಾದರಿಗಳ ಪರೀಕ್ಷಾ ವರದಿ ಬರಬೇಕಿದೆ. ಕೋವಿಡ್ ಸೋಂಕು ಲಕ್ಷಣಗಳ ಆಧಾರದಲ್ಲಿ ಸರ್ಕಾರಿ ಕ್ವಾರಂಟೈನ್‌ನಲ್ಲಿ ಐವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಶಂಕಿತ ಲಕ್ಷಣಗಳುಳ್ಳ ಒಟ್ಟು 219 ಜನರ 28 ದಿನಗಳ ಕ್ವಾರಂಟೈನ್‌ ಅವಧಿ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಈವರೆಗೆ ಮೂರು ಕೋವಿಡ್ ಪಾಸಿಟಿವ್‌ ಪ್ರಕರಣ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.