ಗ್ರಾ.ಪಂ. ನೌಕರರಿಗೆ ಕನಿಷ್ಟ ವೇತನ ನೀಡಿ
ಸರಕಾರಕ್ಕೆ ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಡಗೌಡ ಆಗ್ರಹ
Team Udayavani, Nov 23, 2022, 4:49 PM IST
ಬ್ಯಾಡಗಿ: ಎಲ್ಲ ಗ್ರಾಮ ಪಂಚಾಯಿತಿ ನೌಕರರಿಗೆ ರಾಜ್ಯ ಸರಕಾರ ಕನಿಷ್ಟ ವೇತನ 36,000 ಸಾವಿರ ರೂ. ಜಾರಿ ಮಾಡಬೇಕೆಂದು ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಡಗೌಡ ಒತ್ತಾಯಿಸಿದರು.
ಮಂಗಳವಾರ ಪಟ್ಟಣದ ತಾಪಂ ಸಭಾಂಗಣದಲ್ಲಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘಟನೆ ಆಯೋಜಿಸಿದ್ದ ತಾಲೂಕು ಮಟ್ಟದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಹಲವು ದಶಕಗಳಿಂದ ಅತ್ಯಂತ ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಪಂಚಾಯತಿ ಸಿಬ್ಬಂದಿಗೆ ಸೇವಾ ರಿಜಿಸ್ಟರ್ ನಿರ್ವಹಿಸಲು ಅವಕಾಶವಿಲ್ಲ. 2006ರಲ್ಲೇ ಸರಕಾರ ಈ ಕುರಿತು ಆದೇಶ ಮಾಡಿದೆ. ಇದರ ಜೊತೆಗೆ ಕನಿಷ್ಟ ವೇತನ ಸೇರಿದಂತೆ ಅಗತ್ಯ ಸೌಕರ್ಯಗಳು ದೊರೆಯುತ್ತಿಲ್ಲ. ಸರಕಾರ ನೌಕರರನ್ನು ಅತ್ಯಂತ ಕನಿಷ್ಟವಾಗಿ ನಡೆಸಿಕೊಳ್ಳುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು.
ತಾಪಂ ಇಒ ಕೆ.ಎಂ. ಮಲ್ಲಿಕಾರ್ಜುನ ಮಾತನಾಡಿ, ಪಂಚಾಯತಿಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ತಮ್ಮ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಲ್ಲಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯ ಉಪಾಧ್ಯಕ್ಷ ಬಿ.ಐ ಈಳಗೇರ ಮಾತನಾಡಿ, ಸಿಐಟಿಯು ನೇತೃತ್ವದ ಗ್ರಾಮ ಪಂಚಾಯತಿ ನೌಕರರ ಸಂಘದ ಹೋರಾಟದಿಂದ ಕೆಲವು ಪಂಚಾಯತಿಗಳಲ್ಲಿ ಸಿಬ್ಬಂದಿ ಮೇಲೆ ನಡೆಯುತ್ತಿದ್ದ ದೌರ್ಜನ್ಯ, ದಬ್ಟಾಳಿಕೆ ತಡೆಗಟ್ಟಲು ಸಾಧ್ಯವಾಗಿದೆ. ಪಿಂಚಣಿ ಸೌಲಭ್ಯ ಸೇರಿದಂತೆ ನೌಕರರು ತಮ್ಮ ಹಕ್ಕುಗಳನ್ನು ಪಡೆಯಲು ಸಂಘಟಿತರಾಗಬೇಕೆಂದರು.
ನಂತರ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ಕುರಿತು ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ಅಧ್ಯಕ್ಷ ಕುಮಾರ ದೇವಗಿರಿ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಡಿವೈಎಫ್‌ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಪೂಜಾರ, ಸಿಐಟಿಯು ಜಿಲ್ಲಾ ಸಂಚಾಲಕ ವಿನಾಯಕ ಕುರುಬರ, ತಾಪಂ ವ್ಯವಸ್ಥಾಪಕ ಪ್ರಕಾಶ ಹಿರೇಮಠ, ಜಿಲ್ಲಾ ಅಧ್ಯಕ್ಷ ಅಂದಾನೆಪ್ಪ ಹೆಬಸೂರ, ಜಿಲ್ಲಾ ಕಾರ್ಯದರ್ಶಿ ಜಗದೀಶ ಕೋಟಿ, ಜಿಲ್ಲಾ ಖಜಾಂಚಿ ಸುಭಾಸ್ ಸೊಟ್ಟಪ್ಪನವರ, ಹೇಮಂತ ಲಮಾಣಿ, ಫಕ್ಕಿರೇಶ ಹಕ್ಕಿಮರೆಣ್ಣನವರ, ಸಂತೋಷ ಕೂರಗುಂದ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಕಾರ್ಯದರ್ಶಿ ವೀರನಗೌಡ ಚ. ಪಾಟೀಲ ಸ್ವಾಗತಿಸಿ, ಫಕ್ಕೀರೇಶ ಹಕ್ಕಿಮರೆಣ್ಣನವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.