ಕೋಳಿ ಮಾಂಸ ಮಾರಾಟಕ್ಕೆ ಅನುಮತಿ

Team Udayavani, Apr 22, 2020, 6:13 PM IST

ಕೋಳಿ ಮಾಂಸ ಮಾರಾಟಕ್ಕೆ ಅನುಮತಿ

ರಾಣಿಬೆನ್ನೂರ: ಹರಿಹರ ತಾಲೂಕಿನ ಬನ್ನಿಕೋಡ ಗ್ರಾಮದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೀನು ಮತ್ತು ಕೋಳಿ ಮಾಂಸ ಮಾರಾಟ ಬಂದ್‌ ಮಾಡಲಾಗಿತ್ತು. ಅದಕ್ಕೆ ನಗರದ ಎಲ್ಲ ಮಾಂಸ ಮಾರಾಟಗಾರರು ಸ್ವಯಂ ಪ್ರೇರಣೆಯಿಂದ ಈ ವರೆಗೂ ಬಂದ್‌ ಮಾಡಿ ಲಾಕ್‌ಡೌನ್‌ಗೆ ಸಹಕರಿಸಿದ್ದರು. ಈಗ ಮೀನು ಮತ್ತು ಕೋಳಿ ಮಾಂಸ ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ತಹಶೀಲ್ದಾರ್‌ ಬಸನಗೌಡ ಕೋಟೂರು ಹೇಳಿದರು.

ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಕೋವಿಡ್ 19 ಸೋಂಕು ತಡೆಗಟ್ಟುವ ಟಾಸ್ಕ್ಫೋರ್ಸ್‌ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಅಗತ್ಯ ಸೇವೆಗಳ ಅಡಿಯಲ್ಲಿ ಮಾಂಸ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದರು. ಮಾಂಸ ಮಾರಾಟಗಾರರು ಬೆಳಗ್ಗೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಬೇಕು. ತರಕಾರಿ ಮತ್ತು ದಿನಸಿ ಪದಾರ್ಥಕ್ಕಿಂತ ಒಂದು ಗಂಟೆ ಸಮಯ ಹೆಚ್ಚಿಸಲಾಗಿದೆ. ಇಷ್ಟು ಬಿಟ್ಟರೆ ಯಾವುದೇ ವ್ಯವಹಾರಕ್ಕೆ ಅನುಮತಿ ಇರುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

ಮಾಂಸ ಕತ್ತರಿಸುವಾಗ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸೋಪಿನ ನೀರು ಬಳಸಬೇಕು. ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಂತರ ಕಾಯ್ದುಕೊಳ್ಳಬೇಕೆಂದು ಸೂಚಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಮೇ 3ರ ವರೆಗೆ ಲಾಕ್‌ ಡೌನ್‌ ಮುಂದುವರಿಸಿ ಕೆಲವೊಂದು ವಿನಾಯಿತಿ ನೀಡಿದೆ. ನಗರದ ಹೋಟೆಲ್‌ ಮಾಲೀಕರು ಕೂಡ ಸ್ವಯಂ ಪ್ರೇರಣೆಯಿಂದ ಈ ವರೆಗೂ ಹೋಟೆಲ್‌ ಬಂದ್‌ ಮಾಡಿ ಲಾಕ್‌ಡೌನ್‌ಗೆ ಸಹಕಾರ ನೀಡಿದ್ದಾರೆ.

ಕೆಲವೊಬ್ಬರು ಸರ್ಕಾರದ ನಿಯಮಗಳನ್ನು ಪಾಲಿಸಿ ಫುಢ್‌ ಪಾರ್ಸಲ್‌ ಕೊಡುತ್ತಿದ್ದಾರೆ. ಹೋಟೆಲ್‌ ಮತ್ತು ತಿಂಡಿ ತಿನಿಸು ಮಾರಾಟಗಾರರು ಹೋಟೆಲ್‌ ಪ್ರಾರಂಭಿಸಿ ಪಾರ್ಸಲ್‌ ಮಾತ್ರ ಕೊಡಬಹುದು. ಟೇಬಲ್‌ನಲ್ಲಿ ಕುಳಿತು ತಿನ್ನಲು ಸರ್ಕಾರದ ಪರವಾನಗಿ ಇರುವುದಿಲ್ಲ ಎಂದು ಸÒಷ್ಟಪಡಿಸಿದರು.

ಜಿಪಂ, ತಾಪಂ ಮತ್ತು ಗ್ರಾಪಂ ಸೇರಿದಂತೆ ಸರ್ಕಾರಿ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಸ್ಟೀಲ್‌, ಸಿಮೆಂಟ್‌ ಮಾರಾಟಕ್ಕೆ ಅನುಮತಿ ನೀಡಿದೆ. ಸಿಮೆಂಟ್‌ ಮತ್ತು ಸ್ಟೀಲ್‌ ವ್ಯಾಪಾರಸ್ಥರು ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಬಗ್ಗೆ ದೂರುಗಳು ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಹಶೀಲ್ದಾರ್‌ ತಿಳಿಸಿದರು.

ಶಾಸಕ ಅರುಣಕುಮಾರ ಪ್ರಜಾರ, ಇಒ ಎಸ್‌.

ಎಂ. ಕಾಂಬಳೆ, ಡಿವೈಎಸ್‌ಪಿ ಟಿ.ವಿ. ಸುರೇಶ್‌, ಆರೋಗ್ಯ ಅಧಿಕಾರಿ ಡಾ| ಸಂತೋಷಕುಮಾರ, ಡಾ| ಮಹಾಂತೇಶ್‌ ಎನ್‌., ಡಾ| ಗಿರೀಶ್‌ ಕೆಂಚಪ್ಪನವರ, ಸಿಪಿಐ ಲಿಂಗನಗೌಡ ನೆಗಳೂರು, ಸಿಪಿಐ ಸುರೇಶ್‌ ಸಗರಿ, ಪಿಎಸ್‌ಐ ಪ್ರಭು ಕೆಳಗಿನಮನಿ, ಬಸವರಾಜ ಶಿಡೇನೂರು ಇದ್ದರು.

ಟಾಪ್ ನ್ಯೂಸ್

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ: ಸಿದ್ದು ಅದೃಷ್ಟದ ಸಿಎಂ, ಬಿಎಸ್‌ವೈ ಹೋರಾಟ ಮಾಡಿ ಅಧಿಕಾರಕ್ಕೆ ಬಂದವರು-ವಿಜಯೇಂದ್ರ

ಹಾವೇರಿ: ಸಿದ್ದು ಅದೃಷ್ಟದ ಸಿಎಂ, ಬಿಎಸ್‌ವೈ ಹೋರಾಟ ಮಾಡಿ ಅಧಿಕಾರಕ್ಕೆ ಬಂದವರು-ವಿಜಯೇಂದ್ರ

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.